For Quick Alerts
ALLOW NOTIFICATIONS  
For Daily Alerts
 

IPL 2025: ಹೊಸ ದಾಖಲೆ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ

ಭಾರತ ತಂಡದ ಸ್ಟಾರ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿದ್ದಾರೆ. ಐಪಿಎಲ್ 2025ರ ಸೀಸನ್ ನಾಳೆ ಅಂದರೆ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಐಪಿಎಲ್ 2025 ರ ಉದ್ಘಾಟನಾ ಪಂದ್ಯವು ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಐಪಿಎಲ್ 2025 ರಲ್ಲಿ ಆರ್‌ಸಿಬಿ ಬ್ಯಾಟರ್ ವಿರಾಟ್ ಕೊಹ್ಲಿ ಇಲ್ಲಿಯವರೆಗೆ ಯಾವುದೇ ಭಾರತೀಯ ಕ್ರಿಕೆಟಿಗ ಮಾಡಲು ಸಾಧ್ಯವಾಗದ ಅದ್ಭುತ ದಾಖಲೆಯನ್ನು ಸೃಷ್ಟಿಸುವ ಅವಕಾಶವನ್ನು ಹೊಂದಿದ್ದಾರೆ.

ವಿರಾಟ್ ಕೊಹ್ಲಿ ಐಪಿಎಲ್ 2025 ರಲ್ಲಿ 114 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲು ಸಾಧಸಲಿದ್ದಾರೆ. ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 13000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಇಲ್ಲಿಯವರೆಗೆ ಯಾವುದೇ ಭಾರತೀಯ ಬ್ಯಾಟರ್ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ.

IPL 2025 Virat Kohli to complete 13000 runs in T20 cricket

ಈಗಾಗಲೇ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೇವಲ ಐಪಿಎಲ್ ಟಿ20 ಲೀಗ್ ಆಡುತ್ತಿರುವ ವಿರಾಟ್ ಕೊಹ್ಲಿ ಸುಲಭವಾಗಿ 114 ರನ್ ಗಳಿಸುವ ಮೂಲಕ 13000 ರನ್‌ಗಳನ್ನು ಪೂರ್ಣಗೊಳಿಸಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೆ 399 ಟಿ20 ಪಂದ್ಯಗಳಲ್ಲಿ 41.43 ಸರಾಸರಿಯಲ್ಲಿ 12886 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ 114 ರನ್ ಗಳಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ 13000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಮತ್ತು ವಿಶ್ವದ ಐದನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೆ ಕ್ರಿಸ್ ಗೇಲ್, ಅಲೆಕ್ಸ್ ಹೇಲ್ಸ್, ಕೀರನ್ ಪೊಲಾರ್ಡ್ ಮತ್ತು ಶೋಯೆಬ್ ಮಲಿಕ್ ಮಾತ್ರ 13000 ಅಥವಾ ಅದಕ್ಕಿಂತ ಹೆಚ್ಚಿನ ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

ಐಪಿಎಲ್ 2025ರಲ್ಲಿ ಹೊಸ ಆರ್‍‌ಸಿಬಿ ತಂಡ ಬಲಿಷ್ಠವಾಗಿದೆ. ಪವರ್ ಹಿಟ ರ್‍‌ಗಳಿರುವ ಆರ್‍‌ಸಿಬಿ ತಂಡ ಎಲ್ಲರ ಚಿತ್ತ ಕದ್ದಿದ್ದು, ಎದುರಾಳಿ ತಂಡಗಳ ನಿದ್ದೆಗೆಡಿಸಿದೆ. ಕೆಕೆಆರ್ ವಿರುದ್ಧ ಉದ್ಘಾಟನಾ ಪಂದ್ಯವನ್ನು ಆಡಲು ಸಜ್ಜಾಗಿರುವ ಆರ್‍‌ಸಿಬಿ ಈ ಬಾರಿ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದವರು

ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) - 463 ಪಂದ್ಯಗಳಲ್ಲಿ 14562 ರನ್
ಅಲೆಕ್ಸ್ ಹೇಲ್ಸ್ (ಇಂಗ್ಲೆಂಡ್) - 494 ಪಂದ್ಯಗಳಲ್ಲಿ 13610 ರನ್
ಕೀರನ್ ಪೊಲಾರ್ಡ್ (ವೆಸ್ಟ್ ಇಂಡೀಸ್) - 695 ಪಂದ್ಯಗಳಲ್ಲಿ 13537 ರನ್
ಶೋಯೆಬ್ ಮಲಿಕ್ (ಪಾಕಿಸ್ತಾನ) - 553 ಪಂದ್ಯಗಳಲ್ಲಿ 13535 ರನ್
ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ) - 399 ಪಂದ್ಯಗಳಲ್ಲಿ 12913 ರನ್
ವಿರಾಟ್ ಕೊಹ್ಲಿ (ಭಾರತ) - 399 ಪಂದ್ಯಗಳಲ್ಲಿ 12886 ರನ್

Story first published: Friday, March 21, 2025, 13:13 [IST]
Other articles published on Mar 21, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+