Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಗುಜರಾತ್ ಟೈಟಾನ್ಸ್ ವಿರುದ್ಧ ವಿರಾಟ್ ಕೊಹ್ಲಿ ವಿಶೇಷ ಸಾಧನೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ 14 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಸೃಷ್ಟಿಸುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ.

ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಅವರು 7ನೇ ರನ್‌ ಗಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

IPL 2025 Virat Kohli s special record against Gujarat Titans

ವಿರಾಟ್ ಕೊಹ್ಲಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಗುಜರಾತ್ ಟೈಟಾನ್ಸ್ ವಿರುದ್ಧ 350 ರನ್‌ಗಳನ್ನು ಬಾರಿಸಿದ್ದರು. ಈಗ ವಿರಾಟ್ ಕೊಹ್ಲಿ ಗುಜರಾತ್ ವಿರುದ್ಧ ಏಳು ಇನ್ನಿಂಗ್ಸ್‌ಗಳಲ್ಲಿ 351 ರನ್ ಗಳಿಸಿ ರುತುರಾಜ್ ಗಾಯಕ್ವಾಡ್ ಅವರನ್ನು ಹಿಂದಿಕ್ಕಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ 13000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲು ವಿರಾಟ್ ಕೊಹ್ಲಿ ಅವರಿಗೆ 24 ರನ್‌ಗಳು ಬೇಕಾಗಿದ್ದವು, ಆದರೆ ಗುಜರಾತ್ ಎದುರು ಎರಡನೇ ಓವರ್‌ನಲ್ಲಿ ಎಡಗೈ ವೇಗಿ ಅರ್ಷದ್ ಖಾನ್ ಎಸೆತದಲ್ಲಿ 7 ರನ್‌ಗಳಿಗೆ ಔಟಾದ ಕಾರಣ ಅವರ ಹೆಸರಿಗೆ ಮತ್ತೊಂದು ದಾಖಲೆ ಸೇರಲು ಈಗ 17 ರನ್‌ಗಳ ಅವಶ್ಯಕತೆಯಿದೆ.

ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 169 ರನ್ ಗಳಿಸಿತು. ಗುಜರಾತ್‌ಗೆ 170 ರನ್‌ಗಳ ಗುರಿಯನ್ನು ನೀಡಿದೆ. ಆರ್‌ಸಿಬಿ ಪರ ಲಿಯಾಮ್ ಲಿವಿಂಗ್‌ಸ್ಟೋನ್ ಅತಿ ಹೆಚ್ಚು 54 ರನ್ ಗಳಿಸಿದರು. ಜಿತೇಶ್ ಶರ್ಮಾ 33 ಮತ್ತು ಟಿಮ್ ಡೇವಿಡ್ 32 ರನ್ ಗಳಿಸಿದರು.

ಗುಜರಾತ್ ಪರ ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಅವರು 4 ಓವರ್‌ಗಳಲ್ಲಿ 19 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರು. ಆರ್ ಸಾಯಿ ಕಿಶೋರ್ 4 ಓವರ್‌ಗಳಲ್ಲಿ 22 ರನ್‌ಗಳಿಗೆ 2 ವಿಕೆಟ್ ಪಡೆದರು. ಅರ್ಷದ್ ಖಾನ್, ಪ್ರಸಿದ್ಧ್ ಕೃಷ್ಣ ಮತ್ತು ಇಶಾಂತ್ ಶರ್ಮಾ ತಲಾ 1 ವಿಕೆಟ್ ಪಡೆದರು.

Story first published: Wednesday, April 2, 2025, 22:27 [IST]
Other articles published on Apr 2, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+