IPL 2025: ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸುತ್ತಾರಾ?; ಕನ್ನಡಿಗ ಹೇಳಿದ್ದೇನು?
ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಕೆಎಲ್ ರಾಹುಲ್ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದೇ ಸ್ಥಾನದಲ್ಲಿ ಆಡಿದರೂ ಕೆಎಲ್ ರಾಹುಲ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಈಗ ಮಾರ್ಚ್ 22 ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2025ರ ಸೀಸನ್‌ಗೂ ಮುನ್ನ ಅವರು ಡೆಲ್ಲಿ ಕ್ಯಾಪಿಟಲ್ಸ್‌ನ ಶಿಬಿರವನ್ನು ಸೇರಲಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಪರ ಐಪಿಎಲ್ 2025ರಲ್ಲಿ ಆಡಲಿರುವ ಕೆಎಲ್ ರಾಹುಲ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈಗಾಗಲೇ ತಂಡದ ನಾಯಕತ್ವ ಬೇಡ ಎಂದಿರುವ ರಾಹುಲ್, ಒಂದು ಬೇಡಿಕೆಯನ್ನು ಇಟ್ಟಿದ್ದಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ರಾಹುಲ್ ಮಾತನಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಕೆಎಲ್ ರಾಹುಲ್, ಆಯ್ಕೆ ಸಿಕ್ಕರೆ, ಅವರು ಯಾವಾಗಲೂ ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಇಷ್ಟಪಡುತ್ತಾನೆ ಎಂದು ಹೇಳಿದ್ದಾರೆ. "ನಾನು ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾ ಬೆಳೆದಿದ್ದೇನೆ. ಮಂಗಳೂರಿನಲ್ಲಿರುವ ನನ್ನ 11ನೇ ವಯಸ್ಸಿನಲ್ಲಿ ಸ್ಪರ್ಧಾತ್ಮಕ ಪಂದ್ಯದಿಂದ ಭಾರತಕ್ಕಾಗಿ ಆಡುವ ಆರಂಭಿಕ ದಿನಗಳವರೆಗೆ ಮತ್ತು ನನ್ನ ವೃತ್ತಿಜೀವನದ ಬಹುಪಾಲು, ನಾನು ಆಗ್ರ ಕ್ರಮಾಂಕದ ಬ್ಯಾಟರ್ ಆಗಿದ್ದೇನೆ. ಇದು ನಾನು ಹೆಚ್ಚು ಆರಾಮದಾಯಕ ಸ್ಥಾನವಾಗಿದೆ ಎಂದು ಆರಂಭಿಕನಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.
ನೀವು ತಂಡದ ಆಡುವಾಗ, ನಿಮಗೆ ಬೇಕಾದುದನ್ನು ಆಯ್ಕೆ ಮಾಡಲು ಯಾವಾಗಲೂ ಅವಕಾಶವಿರುವುದಿಲ್ಲ. ನೀವು ಹೊಂದಿಕೊಳ್ಳುವವರಾಗಿರಬೇಕು. ತಂಡದ ಅಗತ್ಯಗಳಿಗೆ ಹೊಂದಿಕೊಳ್ಳಲು ಸಿದ್ಧರಿರಬೇಕು. ಕಳೆದ ಕೆಲವು ವರ್ಷಗಳಲ್ಲಿ, ನಾನು ಅದನ್ನು ಸ್ವೀಕರಿಸಲು ಮತ್ತು ನನಗೆ ನಿಯೋಜಿಸಲಾದ ಯಾವುದೇ ಪಾತ್ರದಲ್ಲಿ ನನ್ನ ಅತ್ಯುತ್ತಮವಾದದ್ದನ್ನು ನೀಡಲು ಕಲಿತಿದ್ದೇನೆ ಎಂದು ರಾಹುಲ್ ತಿಳಿಸಿದ್ದಾರೆ.
ಟೀಮ್ ಇಂಡಿಯಾ ಪರ ಆರಂಭಿಕ ಬ್ಯಾಟರ್ ಆಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ರಾಹುಲ್, 2023 ರ ಏಕದಿನ ವಿಶ್ವಕಪ್‌ನಲ್ಲಿ 5ನೇ ಸ್ಥಾನದಲ್ಲಿ ಆಡಿದ್ದರು. ನಂತರ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದು ಸ್ಥಾನದಿಂದ ಕೆಳಗಿಳಿದು ಫಿನಿಶರ್ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಆಡಿದ ಐದು ಇನ್ನಿಂಗ್ಸ್‌ಗಳಲ್ಲಿ 174 ರನ್ ಗಳಿಸಿದರು. ಇದೀಗ ಐಪಿಎಲ್ 2025ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ರಾಹುಲ್ ಆರಂಭಿಕನಾಗಿ ಆಡುವ ಸಾಧ್ಯತೆಯಿದೆ. ಫಾಫ್ ಡು ಪ್ಲೆಸಿಸ್ ಜೊತೆಗೆ ರಾಹುಲ್ ಖಾತೆ ತೆರೆಯಬಹುದು.
ಕೆಎಲ್ ರಾಹುಲ್ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ಮುನ್ನಡೆಸಿದ್ದಾರೆ. ಈಗ ಐಪಿಎಲ್ 2025ರಲ್ಲಿ ತಮ್ಮ ಹೊಸ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವ ಅವಕಾಶವನ್ನು ರಾಹುಲ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications