Turning point: ತವರಿನಲ್ಲಿ ಚೆನ್ನೈ ತಂಡದ ಸೋಲಿಗೆ ಇದೇ ಕಾರಣ!
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಐಪಿಎಲ್ 2025 ರ 17 ನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ 25 ರನ್‌ಗಳಿಂದ ಸೋಲಿಸುವ ಮೂಲಕ ಐಪಿಎಲ್ 2025 ರಲ್ಲಿ ಸತತ ಮೂರನೇ ಗೆಲುವು ಸಾಧಿಸಿತು. 2010 ರ ನಂತರ ಚೆಪಾಕ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಜಯವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತವರಿನಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 183 ರನ್ ಗಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿತು. ಕೆಎಲ್ ರಾಹುಲ್ 51 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಅಮೋಘ ಸಿಕ್ಸರ್‌ಗಳೊಂದಿಗೆ 77 ರನ್ ಗಳಿಸಿ ಡೆಲ್ಲಿ ತಂಡದ ಗೆಲುವಿಗೆ ಕಾರಣರಾದರು.

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 183 ರನ್‌ಗಳ ಗುರಿ ಬೆನ್ನಟ್ಟಿದ ಸಿಎಸ್‌ಕೆ ತಂಡವನ್ನು ಕಟ್ಟಿ ಹಾಕುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‍ಗಳು ಯಶಸ್ವಿಯಾದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಸಿಎಸ್‌ಕೆ ಬ್ಯಾಟರ್‍ಗಳು ಮಂಡಿಯೂರಿದರು. ಇದು ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.
ಪಂದ್ಯದ ಮೇಲೆ ಹೆಚ್ಚಿನ ಸಮಯ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂತ ಡೆಲ್ಲಿ ಕ್ಯಾಪಿಟಲ್ಸ್ ಮೇಲುಗೈ ಸಾಧಿಸಿತ್ತು. ಅಕ್ಸರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೆಎಲ್ ರಾಹುಲ್ ಅವರ ಅದ್ಭುತ ಬ್ಯಾಟಿಂಗ್ ನೆರವಾಯಿತು. ನಂತರ ಬೌಲರ್‌ಗಳು 184 ರನ್‌ಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಈ ಪಂದ್ಯದ ಟರ್ನಿಂಗ್ ಪಾಯಿಂಟ್ ಎಂದರೆ ಸಿಎಸ್‌ಕೆ ತಂಡದ ಟಾಪ್ ಆರ್ಡರ್ ಅನ್ನು ಡೆಲ್ಲಿ ವೇಗಿಗಳು ಕೆಡವಿ ಹಾಕಿದರು.
ರಚಿನ್ ರವೀಂದ್ರ (3) ಅವರನ್ನು ಮುಖೇಶ್ ಕುಮಾರ್ ಔಟ್ ಮಾಡಿದರೆ, ಮಿಚೆಲ್ ಸ್ಟಾರ್ಕ್ ನಾಯಕ ರುತುರಾಜ್ ಗಾಯಕ್ವಾಡ್ (5) ಅವರನ್ನು ಮರಳಿ ಪೆವಿಲಿಯನ್‌ಗೆ ಕಳುಹಿಸಿದರು. ನಂತರ ಡೆವೊನ್ ಕಾನ್ವೇ (13) ಅವರನ್ನು ಲೆಗ್ ಸ್ಪಿನ್ನರ್ ವಿಪ್ರಜ್ ನಿಗಮ್ ಪವರ್‌ಪ್ಲೇನಲ್ಲಿ ಔಟ್ ಮಾಡಿದರು. ಸಿಎಸ್‌ಕೆ ಪವರ್‌ಪ್ಲೇನಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಹೀಗಾಗಿ ಸಿಎಸ್‌ಕೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಪವರ್ ಪ್ಲೇ ನಂತರ ಒಂದು ಓವರ್‌ನೊಳಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತು. ಇದು ಸಿಎಸ್‌ಕೆ ಪಂದ್ಯದ ಸೋಲಿಗೆ ಕಾರಣವಾಯಿತು.
ಡೆಲ್ಲಿ ಕ್ಯಾಪಿಟಲ್ಸ್ ಪರ ವಿಪ್ರಜ್ ನಿಗಮ್ 2 ವಿಕೆಟ್ ಕಬಳಿಸಿದರೆ, ಮಿಚೆಲ್ ಸ್ಟಾರ್ಕ್, ಮುಖೇಶ್ ಕುಮಾರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಉಭಯ ತಂಡಗಳ ಪ್ಲೇಯಿಂಗ್-11
ಚೆನ್ನೈ ಸೂಪರ್ ಕಿಂಗ್ಸ್: ರಚಿನ್ ರವೀಂದ್ರ, ಡೆವೊನ್ ಕಾನ್ವೆ, ರಿತುರಾಜ್ ಗಾಯಕ್ವಾಡ್ (ನಾಯಕ), ವಿಜಯ್ ಶಂಕರ್, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ನೂರ್ ಅಹ್ಮದ್, ಮುಖೇಶ್ ಚೌಧರಿ, ಖಲೀಲ್ ಅಹ್ಮದ್, ಮತಿಶಾ ಪತಿರಣ.
ಡೆಲ್ಲಿ ಕ್ಯಾಪಿಟಲ್ಸ್: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್, ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮೋಹಿತ್ ಶರ್ಮಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications