CSK vs MI, IPL 2025: ಮುಂಬೈ ಸೋಲಿಗೆ "ನೂರು" ಕಾರಣ
ಚೆನ್ನೈ ಸೂಪರ್ ಕಿಂಗ್ಸ್ 18 ನೇ ಐಪಿಎಲ್ ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಿತು. ಐಪಿಎಲ್ 2025 ರ ಮೂರನೇ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತವರಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಚೆನ್ನೈ ತಂಡ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದೆ.ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ್ದ ಸೂರ್ಯಕುಮಾರ್ ಯಾದವ್ ಪಂದ್ಯವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಸಿಎಸ್‌ಕೆ ಬೌಲಿಂಗ್ ದಾಳಿಗೆ ತತ್ತರಿಸಿತು. ಯಾವುದೇ ಹಂತದಲ್ಲೂ ಸಿಎಸ್‌ಕೆ ಬೌಲರ್‌ಗಳು ಮುಂಬೈ ಇಂಡಿಯನ್ಸ್ ಬ್ಯಾಟರ್‍ಗಳಿಗೆ ಬಿಗ್ ಇನ್ನಿಂಗ್ಸ್ ಆಡಲು ಅವಕಾಶ ನೀಡಲಿಲ್ಲ. ಪರಿಣಾಮ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಲಷ್ಟೇ ಶಕ್ತವಾಯಿತು.

ಮುಂಬೈ ಪರ ಸೂರ್ಯಕುಮಾರ್ ಯಾದವ್ 29 ರನ್‌ಗಳೊಂದಿಗೆ ಉತ್ತಮ ಪ್ರದರ್ಶನ ನೀಡಿದರು. ತಿಲಕ್ ವರ್ಮಾ ಕೂಡ 25 ಎಸೆತಗಳಲ್ಲಿ 31 ರನ್ ಗಳಿಸುವ ಮೂಲಕ ಮುಂಬೈ ತಂಡಕ್ಕೆ ಅಡಿಪಾಯ ಹಾಕಿದರು. ಈ ಜೋಡಿ ಮುಂಬೈ ತಂಡದ ಜವಾಬ್ದಾರಿ ಹೊತ್ತಿ ಜೊತೆಯಾಟ ಆಡುವಾಗ ಉತ್ತಮ ರನ್ ಕಲೆ ಹಾಕುವ ನಿರೀಕ್ಷೆಯಿತ್ತು. ಏಕೆಂದರೆ ಸೂರ್ಯ ಮತ್ತು ತಿಲಕ್ ಇಬ್ಬರೂ ಸ್ಪೋಟಕ ಬ್ಯಾಟರ್‍ಗಳಾಗಿದ್ದು, ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲರು. ಆದರೆ ಈ ಇಬ್ಬರ ವಿಕೆಟ್ ಪಂದ್ಯದ ಗತಿಯನ್ನೇ ಬದಲಾಯಿಸಿತು.
ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ವಿಕೆಟ್ ಕಳೆದುಕೊಂಡಿದ್ದು ಪಂದ್ಯಕ್ಕೆ ಮಹತ್ವದ ತಿರುವು ಕೊಟ್ಟಿತ್ತು. ಇದು ಮುಂಬೈ ತಂಡವನ್ನು 150 ರನ್‌ಗಳಿಗೆ ಸಿಎಸ್‌ಕೆ ಕಟ್ಟಿ ಹಾಕಲು ನೆರವಾಯಿತು. ಈ ಎಲ್ಲಾ ಕ್ರೆಡಿಟ್ ಅಫ್ಘಾನಿಸ್ತಾನದ ಯುವ ಸ್ಟಾರ್ ಸ್ಪಿನ್ನರ್ ನೂರ್ ಅಹ್ಮದ್ ಅವರಿಗೆ ಸಲ್ಲಬೇಕು.
ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಅವರ ವಿಕೆಟ್‌ಗಳನ್ನು ಕಬಳಿಸುವ ಮೂಲಕ ಸಿಎಸ್‌ಕೆ ತಂಡಕ್ಕೆ ನೆರವಾದರು. ಈ ವಿಕೆಟ್‌ಗಳನ್ನು ನೂರ್ ಅಹ್ಮದ್ ತೆಗೆಯದಿದ್ದರೆ, ಮುಂಬೈ ತಂಡವು ಸವಾಲಿನ ಮೊತ್ತವನ್ನು ಕಲೆಹಾಕುವ ಎಲ್ಲಾ ಅವಕಾಶಗಳನ್ನು ಹೊಂದಿತ್ತು.
ಇದಾದ ನಂತರ ಮುಂಬೈ ಇಂಡಿಯನ್ಸ್ ತಂಡ ಇನ್ನಿಂಗ್ಸ್‌ನ ಕೊನೆಯಲ್ಲಿ ರಾಬಿನ್ ಮಿಂಜ್ ಮತ್ತು ನಮನ್ ಧೀರ್ ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ನೂರ್ ಅಹ್ಮದ್ ತಮ್ಮ ಪ್ರಾಬಲ್ಯ ಸಾಧಿಸಿದರು. ನೂರ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಅವರು ತಮ್ಮ 4 ಓವರ್‍ಗಳಲ್ಲಿ ಕೇವಲ 18 ರನ್ ನೀಡಿ 4 ವಿಕೆಟ್ ಪಡೆದರು. ನೂರ್ ಅಹ್ಮದ್ ಈ ನಾಲ್ಕು ಪ್ರಮುಖ ವಿಕೆಟ್‌ಗಳನ್ನು ಪಡೆಯುವಲ್ಲಿ ವಿಫಲವಾಗಿದ್ದರೆ, ಪಂದ್ಯವನ್ನು ಮುಂಬೈ ಗೆಲ್ಲುತ್ತಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications