Turning point: ಚೆನ್ನೈ ತಂಡಕ್ಕೆ ಕಂಟಕವಾದ ರೋಹಿತ್-ಸೂರ್ಯ ಜೋಡಿ
ಐಪಿಎಲ್ 2025 ರ 38 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 9 ವಿಕೆಟ್‌ಗಳ ಗೆಲುವು ಸಾಧಿಸಿತು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾನುವಾರ ರಾತ್ರಿ ಮುಂಬೈ ಇಂಡಿಯನ್ಸ್ ಅದ್ಭುತ ಪ್ರದರ್ಶನ ನೀಡಿತು. 177 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಗೆಲುವು ತಂದು ಕೊಟ್ಟರು.
ಗೆಲುವಿನ ನಿರೀಕ್ಷೆಯಲ್ಲಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಕಂಟಕವಾದರು. ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡಿದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಜೋಡಿ ಅಜೇಯ 114 ರನ್‌ಗಳ ಜೊತೆಯಾಟ ಆಡಿದರು. ಇದು ಪಂದ್ಯಕ್ಕೆ ಮಹತ್ವದ ತಿರುವು ಕೊಟ್ಟಿತು. ಅಲ್ಲದೆ, ಮುಂಬೈ ಇಂಡಿಯನ್ಸ್ ಪಂದ್ಯದ ಮೇಲೆ ಪ್ರಾಬಲ್ಯ ಸಾಧಿಸಲು ಸಾಧ್ಯವಾಯಿತು.

ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿಲು ಎಂಎಸ್ ಧೋನಿ ತಂತ್ರ ರೂಪಿಸಿಕೊಂಡು ಬಂದಿತ್ತು. ಆದರೆ ಎಂಎಸ್ ಧೋನಿ ಪಡೆಯ ಎಲ್ಲಾ ಲೆಕ್ಕಚಾರವನ್ನು ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ತಮ್ಮ ಬ್ಯಾಟಿಂಗ್ ಬಲದಿಂದ ಉಲ್ಟಾ ಮಾಡಿದರು. ಆರಂಭದಲ್ಲಿ ಮುಂಬೈ ರಯಾನ್ ರಿಕೆಲ್ಟನ್ (24) ವಿಕೆಟ್ ಕಳೆದುಕೊಂಡರೂ, ಯಾವುದೇ ಹಂತದಲ್ಲೂ ಸಂಕಷ್ಟಕ್ಕೆ ಸಿಲುಕಲಿಲ್ಲ. ಇದಕ್ಕೆ ರೋಹಿತ್ ಮತ್ತು ಸೂರ್ಯಕುಮಾರ್ ಜೋಡಿ ಅವಕಾಶ ನೀಡಲಿಲ್ಲ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಎದುರಿಸಿದ ರೋಹಿತ್ ಮತ್ತು ಸೂರ್ಯಕುಮಾರ್ ಜೋಡಿ ಬೌಂಡರಿ-ಸಿಕ್ಸರ್ ಸುರಿಮಳೆಗೈದರು. ಪರಿಣಾಮ ಮುಂಬೈ ಇಂಡಿಯನ್ಸ್ ತಂಡದ 15.1 ಓವರ್‍ಗಳಲ್ಲಿ 177 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ಚೆನ್ನೈ ತಂಡದಿಂದ ರೋಹಿತ್ ಮತ್ತು ಸೂರ್ಯಕುಮಾರ್ ಗೆಲುವನ್ನು ಕಸಿದು ಕೊಂಡರು.
ಐಪಿಎಲ್ 2025 ರಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿ ರೋಹಿತ್ ಶರ್ಮಾ ಫಾರ್ಮ್‌ಗೆ ಮರಳಿದರು. ಅವರು 45 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ ಅಜೇಯ 76 ರನ್ ಬಾರಿಸಿ ಮುಂಬೈ ಇಂಡಿಯನ್ಸ್ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಮತ್ತೊಂದಡೆ ಅತ್ಯುತ್ತಮ ಬ್ಯಾಟಿಂಗ್ ಮಾಡಿದ ಸೂರ್ಯ ಕೇವಲ 30 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಿಂದ ಅಜೇಯ 68 ರನ್ ಬಾರಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ಪಂದ್ಯವನ್ನು ಗೆದ್ದು ಬೀಗಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications