IPL 2025 MI: ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಸೇರುವುದು ಯಾವಾಗ?
ಐಪಿಎಲ್ 2025 ರ 9ನೇ ಪಂದ್ಯದಲ್ಲಿ ಇಂದು ಅಂದರೆ, ಶನಿವಾರ ಮಾರ್ಚ್ 29 ರಂದು ಗುಜರಾತ್ ಟೈಟಾನ್ಸ್ ತಂಡವನ್ನು ಮುಂಬೈ ಇಂಡಿಯನ್ಸ್ ಎದುರಿಸಲಿದೆ. ಉಭಯ ತಂಡಗಳ ನಡುವಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಂಜೆ 7:30 ರಿಂದ ನಡೆಯಲಿದೆ. ಜಿಟಿ ಮತ್ತು ಎಂಐ ತಂಡಗಳು ಮೊದಲ ಗೆಲುವಿನ ಹುಡುಕಾಟದಲ್ಲಿವೆ. ಐಪಿಎಲ್ 2025 ರ ಸೀಸನ್ ಅನ್ನು ಉಭಯ ತಂಡಗಳು ನಿರೀಕ್ಷೆಗೆ ತಕ್ಕಂತೆ ಆರಂಭಿಸಲಿಲ್ಲ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋಲನ್ನು ಎದುರಿಸಬೇಕಾಯಿತು. ಮುಂಬೈ ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬುಮ್ರಾ ಅವರನ್ನು ತುಂಬಾ ಮಿಸ್ ಮಾಡಿಕೊಂಡಿತು. ಆದರೆ ಈಗ ಬುಮ್ರಾ ಅವರ ಫಿಟ್ನೆಸ್ ಬಗ್ಗೆ ಬಿಗ್ ಅಪ್ಡೇಟ್ ಬಂದಿದೆ. ಮುಂಬೈ ಕೋಚ್ ಮಹೇಲ ಜಯವರ್ಧನೆ ಬುಮ್ರಾ ಫಿಟ್ನೆಸ್ ಸಿಹಿ ಸುದ್ದಿ ನೀಡಿದ್ದಾರೆ.

ಮೈದಾನದಿಂದ ಜಸ್ಪ್ರೀತ್ ಬುಮ್ರಾ ಬಹಳ ದಿನಗಳಿಂದ ಹೊರಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸಮಯದಲ್ಲಿ ಅವರು ಗಾಯಗೊಂಡಿದ್ದರು. ಇದಾದ ನಂತರ, ಐಸಿಸಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿಯೂ ಸಹ ಬುಮ್ರಾ ಆಡಿರಲಿಲ್ಲ. ಸಂಪೂರ್ಣ ಫಿಟ್ ಆಗುವವರೆಗೆ ಬುಮ್ರಾ ಅವರನ್ನು ಆಡಿಸುವುದು ಸರಿಯಲ್ಲ ಎಂದು ಟೀಮ್ ಇಂಡಿಯಾದಿಂದಲ್ಲೂ ಕೈ ಬಿಡಲಾಗಿತ್ತು.
ಐಪಿಎಲ್ 2025 ರ ಸೀಸನ್ ಆರಂಭಕ್ಕೂ ಮುನ್ನ ಜಸ್ಪ್ರೀತ್ ಬುಮ್ರಾ ಆಡುವ ಬಗ್ಗೆ ಯಾವುದೇ ಅಪ್ಡೇಟ್ ಬಂದಿರಲಿಲ್ಲ. ಆದರೆ ಈಗ ಮಹೇಲ ಜಯವರ್ಧನೆ ಅವರು ಬುಮ್ರಾ ಫಿಟ್ ಆಗಿರುವುದಾಗಿ ಹೇಳಿದ್ದಾರೆ. ಆದರೆ ಪ್ರಸ್ತುತ ಅವರು ಯಾವಾಗ ಮೈದಾನಕ್ಕೆ ಮರಳುತ್ತಾರೆ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ.
ಜಯವರ್ಧನೆ ಹೇಳಿದ್ದೇನು?
ಜಸ್ಪ್ರೀತ್ ಬುಮ್ರಾ ಅವರು ಪ್ರತಿದಿನ ತಮ್ಮ ವೇಳಾಪಟ್ಟಿಯನ್ನು ಅನುಸರಿಸುತ್ತಿದ್ದಾರೆ. ಇಲ್ಲಿಯವರೆಗೆ ಎಲ್ಲವೂ ಸರಿಯಾಗಿದೆ. ಆದರೆ ಎನ್‌ಸಿಡ ಯಾವುದೇ ಗಡುವನ್ನು ನೀಡಿಲ್ಲ. ಹಾಗಾಗಿ ನಾವು ಅದಕ್ಕಾಗಿ ಕಾಯುತ್ತೇವೆ ಎಂದು ಜಯವರ್ಧನೆ ಹೇಳಿದ್ದಾರೆ. ವರದಿಗಳ ಪ್ರಕಾರ, ಬುಮ್ರಾ ಏಪ್ರಿಲ್‌ನಲ್ಲಿ ಐಪಿಎಲ್‌ಗೆ ಮರಳಬಹುದು. ಅವರ ಅನುಪಸ್ಥಿತಿಯಲ್ಲಿ, ಸತ್ಯನಾರಾಯಣ್ ರಾಜು ಎಂಬ ವೇಗದ ಬೌಲರ್‌ಗೆ ಐಪಿಎಲ್‌ನಲ್ಲಿ ಪದಾರ್ಪಣೆ ಮಾಡಲು ಅವಕಾಶ ನೀಡಲಾಯಿತು.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಸಂಜೆ 7:30 ಗಂಟೆಗೆ ನಡೆಯಲಿರುವ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಐಪಿಎಲ್‌ನಲ್ಲಿ ಎರಡು ತಂಡಗಳು 5 ಪಂದ್ಯಗಳನ್ನು ಆಡಿದ್ದು, ಗುಜರಾತ್ 3, ಮುಂಬೈ 2 ರಲ್ಲಿ ಗೆದ್ದಿದೆ. ಮುಂಬೈ ತಂಡಕ್ಕೆ ನಾಯಕ ಹಾರ್ದಿಕ್ ಪಾಂಡ್ಯ ಮರಳಿದ್ದಾರೆ. ಗುಜರಾತ್ ಟೈಟಾನ್ಸ್ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ.
ಸಂಭಾವ್ಯ ಪ್ಲೇಯಿಂಗ್-11
ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಸತ್ಯನಾರಾಯಣ ರಾಜು, ವಿಘ್ನೇಶ್ ಪುತ್ತೂರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications