Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025, RCB vs PBKS: ಮಾಜಿ ಆರ್‌ಸಿಬಿ ಪ್ಲೇಯರ್ ಮ್ಯಾಕ್ಸ್‌ವೆಲ್‌ಗೆ ಆಡಲು ಅವಕಾಶ ಸಿಗುತ್ತಾ?

ಐಪಿಎಲ್ 2025 ರಲ್ಲಿ ಇಂದು ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಾಯಿಂಟ್ ಟೇಬಲ್‌ನಲ್ಲಿ ಪ್ರಾಬಲ್ಯ ಸಾಧಿಸಲು ಉಭಯ ತಂಡಗಳು ಕಣಕ್ಕಿಳಿಯುತ್ತಿವೆ. ಹೀಗಾಗಿ ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದಾಗಿದೆ. ಆರ್‌ಸಿಬಿ ಹೊರಗೆ ಸತತವಾಗಿ ಪಂದ್ಯಗಳನ್ನು ಗೆದ್ದಿದೆ. ಆದರೆ ತವರಿನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಈಗ ಪಂಜಾಬ್ ಕಿಂಗ್ಸ್ ಎದುರು ತವರಿನಲ್ಲಿ ಹ್ಯಾಟ್ರಿಕ್ ಸೋಲನ್ನು ತಪ್ಪಿಸಲು ಸಜ್ಜಾಗಿದೆ.

ಪಂಜಾಬ್ ಕಿಂಗ್ಸ್ ತಂಡ ಕೂಡ ಕಳೆದ ಪಂದ್ಯದಲ್ಲಿ ಕಡಿಮೆ ಸ್ಕೋರ್ ಅನ್ನು ಡಿಫೆಂಡ್ ಮಾಡುವ ಮೂಲಕ ಐತಿಹಾಸಿಕ ಗೆಲುವು ಸಾಧಿಸಿದೆ. ಇದೀಗ ಆರ್‌ಸಿಬಿಮಣಿಸಿ ಮತ್ತೊಂದು ಜಯ ದಾಖಲಿಸಲು ತಯಾರಾಗಿದೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೆಯಿದೆ. ಆರ್‌ಸಿಬಿ ಮಾಜಿ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

IPL 2025 Will Glenn Maxwell get chance to play in RCB vs Punjab Kings match

ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಂಡಿರಲಿಲ್ಲ. ಮೆಗಾ ಹರಾಜಿನಲ್ಲಿ ಮ್ಯಾಕ್ಸ್‌ವೆಲ್ ಅವರನ್ನು ಪಂಜಾಬ್ ಕಿಂಗ್ಸ್ ಬಿಡ್ ಮಾಡಿತು. ಹೀಗಾಗಿ ಇಂದಿನ ಪಂದ್ಯದಲ್ಲಿ ತಮ್ಮ ಮಾಜಿ ತಂಡದ ವಿರುದ್ಧ ಮ್ಯಾಕ್ಸ್‌ವೆಲ್ ಆಡುತ್ತಾರೋ? ಅಥವಾ ಇಲ್ಲವೋ? ಎಂಬುದು ಕುತೂಹಲ ಮೂಡಿಸಿದೆ.

ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ಪರ ಗ್ಲೆನ್ ಮ್ಯಾಕ್ಸ್‌ವೆಲ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ಇಲ್ಲಿವರೆಗೆ ಮ್ಯಾಕ್ಸ್‌ವೆಲ್ ಅವರಿಂದ ಬಿಗ್ ಇನ್ನಿಂಗ್ಸ್ ಬಂದಿಲ್ಲ. ಹೀಗಾಗಿ ಅವರಿಗೆ ಮುಂದಿನ ಪಂದ್ಯಗಳಲ್ಲಿ ಆಡಸಬೇಕೆ? ಎಂಬ ಪ್ರಶ್ನೆ ಎದುರಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸ್ಪಿನ್ನರ್‍‌ಗಳಿಗೆ ಹೆಚ್ಚಿನ ಸಹಾಯ ಸಿಗುತ್ತಿಲ್ಲ. ಅವರ ಸ್ಥಾನದಲ್ಲಿ ಮಾರ್ಕಸ್ ಸ್ಟೊಯಿನಿಸ್‌ಗೆ ಅವಕಾಶ ನೀಡಬಹುದು. ಕ್ಸೇವಿಯರ್ ಬಾರ್ಟ್ಲೆಟ್ ತಮ್ಮ ಐಪಿಎಲ್ ಚೊಚ್ಚಲ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿದ್ದರು. ಆದ್ದರಿಂದ ಅವರ ಸ್ಥಾನವೂ ಉಳಿಯಬಹುದು. ಆದಾಗ್ಯೂ ಎಲ್ಲರ ಕಣ್ಣುಗಳು ಯುಜ್ವೇಂದ್ರ ಚಹಾಲ್ ಮೇಲೆ ಇರುತ್ತವೆ. ಅವರು ತಮ್ಮ ಮಾಜಿ ತಂಡ ಆರ್‌ಸಿಬಿವಿರುದ್ಧ ಆಡುವ ಅವಕಾಶ ಪಡೆಯಲಿದ್ದಾರೆ.

ಆರ್‌ಸಿಬಿ ಸಂಭಾವ್ಯ ತಂಡ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಾಜತ್ ಪಟಿದಾರ್ (ನಾಯಕ), ಲಿಯಾಂ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯಾ, ಭುವನೇಶ್ವರ ಕುಮಾರ್, ಜೋಶ್ ಹೇಜಲ್ವುಡ್, ಯಶ್ ದಯಾಲ್, ಸುಯೇಶ್ ಶರ್ಮಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆರಂಭಿಕ ಜೋಡಿ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ನಿರಂತರವಾಗಿ ಉತ್ತಮ ಆರಂಭ ನೀಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿಸಾಧಿಸಿದ ಗೆಲುವಿನ ರೀತಿ ನೋಡಿದರೆ, ತಂಡದಲ್ಲಿ ಬದಲಾವಣೆ ಮಾಡುವುದು ಅನುಮಾನವಾಗಿದೆ. ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಮತ್ತೊಂದೆಡೆ ಲಿಯಾಮ್ ಲಿವಿಂಗ್‌ಸ್ಟೋನ್ ಅವರ ಕಳಪೆ ಬ್ಯಾಟಿಂಗ್ ತಂಡಕ್ಕೆ ಕಳವರಿಯಾಗಿದೆ. ಲಿವಿಂಗ್‌ಸ್ಟೋನ್ ಲಯ ಕಂಡುಕೊಳ್ಳಬೇಕಾಗಿದೆ.

ಪಂಜಾಬ್ ಸಂಭಾವ್ಯ ತಂಡ: ಪ್ರಿಯಾಂಶ್ ಆರ್ಯ, ಪ್ರಭಸಿಮನ್ ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ನೆಹಾಲ್ ವಾಧೆರಾ, ಗ್ಲೆನ್ ಮ್ಯಾಕ್ಸ್‌ವೆಲ್/ಮಾರ್ಕಸ್ ಸ್ಟಾಯಿನಿಸ್, ಶಶಾಂಕ್ ಸಿಂಗ್, ಮಾರ್ಕೋ ಜಾನ್ಸನ್, ಯಶವೇಂದ್ರ ಚಾಹಲ್, ಝೇವಿಯರ್ ಬಾರ್ಟ್ಲೆಟ್, ಅರ್ಶದೀಪ್ ಸಿಂಗ್.

Story first published: Friday, April 18, 2025, 11:25 [IST]
Other articles published on Apr 18, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+