MVP: ಯುಜ್ವೇಂದ್ರ ಚಹಾಲ್ ಸ್ಪಿನ್ ಮ್ಯಾಜಿಕ್‌ಗೆ ಕೋಲ್ಕತ್ತಾ ಠುಸ್
ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2025 ರ ಕಡಿಮೆ ಸ್ಕೋರ್ ಪಂದ್ಯ ಭಾರಿ ಕುತೂಹಲ ಮೂಡಿಸಿತು. ಪಂಜಾಬ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ದವಡೆಯಿಂದ ಜಯವನ್ನು ಕಸಿದುಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿತು. ಬ್ಯಾಟಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದ್ದರೂ ಕೆಕೆಆರ್ 112 ರನ್‌ಗಳನ್ನು ಬೆನ್ನಟ್ಟುವಲ್ಲಿ ವಿಫಲವಾಯಿತು. ಈ ಮೂಲಕ 16 ರನ್‌ಗಳಿಂದ ಪಂಜಾಬ್ ಕಿಂಗ್ಸ್ ತಂಡ ಐತಿಹಾಸಿಕ ಗೆಲುವು ದಾಖಲಿಸಿತು.
ಕೆಕೆಆರ್ ಪರ ಹರ್ಷಿತ್ ರಾಣಾ ಮೂರು ವಿಕೆಟ್ ಪಡೆದರೆ, ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ವೈಭವ್ ಆರೋರಾ ಮತ್ತು ಅನ್ರಿಚ್ ನಾರ್ಟ್ಜೆ ತಲಾ ಒಂದೊಂದು ವಿಕೆಟ್ ಬೇಟೆಯಾಡಿ ಪಂಜಾಬ್ ತಂಡವನ್ನು ಕಟ್ಟಿಹಾಕಿದರು. ಕೆಕೆಆರ್ ತಂಡದ ಮಾರಕ ಬೌಲಿಂಗ್ ದಾಳಿಗೆ ಪಂಜಾಬ್ ಕಿಂಗ್ಸ್ ತಂಡವು ಕೇವಲ 111 ರನ್‌ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.

ಪಂಜಾಬ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಪ್ರಮುಖ ಪಾತ್ರವಹಿಸಿದರು. ಅವರು 4 ವಿಕೆಟ್ ಪಡೆಯುವ ಮೂಲಕ ತಮ್ಮ ಅತ್ಯುತ್ತಮ ಸ್ಪಿನ್ ಬೌಲಿಂಗ್ ಪ್ರದರ್ಶನ ತೋರಿಸಿದರು. ಕೆಕೆಆರ್ ನಾಯಕ ಅಜಿಂಕ್ಯಾ ರಹಾನೆ, ಆಂಗ್ಕ್ರಿಶ್ ರಘುವಂಶಿ, ರಿಂಕು ಸಿಂಗ್ ಮತ್ತು ರಮಣದೀಪ್ ಸಿಂಗ್ ಅವರನ್ನು ಚಹಾಲ್ ಔಟ್ ಮಾಡಿದರು. ಅವರು ತಮ್ಮ 4 ಓವರ್‍ಗಳಲ್ಲಿ ಕೇವಲ 28 ರನ್ ಬಿಟ್ಟುಕೊಟ್ಟರು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡದ ದಾಖಲೆಯ ಗೆಲುವಿಗೆ ನೆರವಾದರು. ಈ ಪಂದ್ಯದ ನಂತರ ಸಾಮಾಜಿಕ ಜಾಲತಾಣದಲ್ಲಿ ಚಹಾಲ್ ಭಾರಿ ಸದ್ದು ಮಾಡುತ್ತಿದ್ದಾರೆ.
ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ನಿರೀಕ್ಷೆಗೆ ತಕ್ಕಂತೆ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟರ್ಸ್ ಪ್ರದರ್ಶನ ನೀಡಲಿಲ್ಲ. ಪರಿಣಾಮ ಪಂಜಾಬ್ ತಂಡ 11.5 ಓವರ್‍ಗಳಲ್ಲಿ 111 ರನ್‌ಗಳಿಗೆ ಆಲೌಟ್ ಆಯಿತು. ಪಂಜಾಬ್ ಪರ ಪ್ರಭ್ಸಿಮ್ರಾನ್ ಸಿಂಗ್ 30 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಕೆಕೆಆರ್ ಹರ್ಷಿತ್ ರಾಣಾ ಅತ್ಯಂತ ಯಶಸ್ವಿ ಬೌಲರ್ ಆದರು. ಅವರು 3 ಓವರ್‍ಗಳಲ್ಲಿ ಕೇವಲ 25 ರನ್ ಗಳನ್ನು ನೀಡಿ ವಿಕೆಟ್ ಕಬಳಿಸಿದರು.
ಪಂಜಾಬ್ ಕಿಂಗ್ಸ್ ತಂಡ ಐತಿಹಾಸಿಕ ಗೆಲುವಿನೊಂದಿಗೆ ಪಾಯಿಂಟ್ ಟೇಬಲ್‌ನಲ್ಲಿ 4ನೇ ಸ್ಥಾನಕ್ಕೆ ತಲುಪಿದೆ. ಸೋಲನ್ನು ಎದುರಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 6ನೇ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications