ಆರ್‌ಸಿಬಿ ಎಷ್ಟು ರನ್ ಬಾರಿಸಿದರೆ ಮೊದಲ ಕ್ವಾಲಿಫೈಯರ್ ಪ್ರವೇಶಿಸುತ್ತದೆ?
ಹೈದರಾಬಾದ್: ಭರವಸೆಯ ಆಟಗಾರ ಹೆನ್ರಿಕ್ ಕ್ಲಾಸೆನ್ ಹಾಗೂ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಬಾರಿಸಿದ ಭರ್ಜರಿ ಅರ್ಧಶತಕದ ಬಲದಿಂದ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡ 19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಸವಾಲಿನ ಮೊತ್ತದ ಗುರಿಯನ್ನು ನೀಡಿದೆ.
ಟಾಸ್ ಗೆದ್ದ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಸನ್‌ರೈಸರ್ಸ್ ಹೈದರಾಬಾದ್ ಮಾಡಿತು. ನಾಯಕನ ನಿರ್ಧಾರವನ್ನು ಎಸ್‌ಆರ್‌ಎಚ್ ತಂಡದ ಆರಂಭಿಕರು ಸಮರ್ಥವಾಗಿ ಬಳಸಿಕೊಂಡರು. ಸ್ಪೋಟಕ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಜೋಡಿ ಮೊದಲ ವಿಕೆಟ್‌ಗೆ 4 ಓವರ್‌ಗಳಲ್ಲಿ 45 ರನ್ ಸೇರಿಸಿತು. ಈ ವೇಳೆ ಟ್ರಾವಿಸ್ ಹೆಡ್ 5 ಬೌಂಡರಿ ನೆರವಿನಿಂದ 26 ರನ್ ಬಾರಿಸಿ ರಸೀಕ್ ಸಲಾಂ ದಾರ್‌ಗೆ ವಿಕೆಟ್ ಒಪ್ಪಿಸಿದರು.

ಎರಡನೇ ವಿಕೆಟ್‌ಗೆ ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಜೋಡಿ ಸಹ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 52 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ 56 ರನ್ ಬಾರಿಸಿದರು. ಈ ವೇಳೆ ಇವರ ಸ್ಟ್ರೈಕ್ ರೇಟ್ 254 ಆಗಿತ್ತು.
ಮೂರನೇ ವಿಕೆಟ್‌ಗೆ ಇಶಾನ್ ಕಿಶನ್ ಅವರೊಂದಿಗೆ ಸೇರಿಕೊಂಡ ಹೆನ್ರಿಕ್ ಕ್ಲಾಸೆನ್ ಜೋಡಿ ಸಹ ಸಮಯೋಚಿತ ಬ್ಯಾಟಿಂಗ್ ನಡೆಸಿತು. ಈ ಜೋಡಿ ಮಧ್ಯದ ಓವರ್‌ಗಳಲ್ಲಿ ರನ್ ಕಲೆ ಹಾಕುತ್ತಾ ಸಾಗಿತು. ಈ ಜೋಡಿ ಕೇವಲ 48 ಎಸೆತಗಳಲ್ಲಿ 113 ರನ್ ಸೇರಿಸಿತು. ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ಹೆನ್ರಿಕ್ ಕ್ಲಾಸೆನ್ 24 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಮನಮೋಹಕ ಇನಿಂಗ್ಸ್‌ನಲ್ಲಿ ಕ್ಲಾಸೆನ್ 2 ಬೌಂಡರಿ, 5 ಸಿಕ್ಸರ್ ಬಾರಿಸಿದ್ದಾರೆ.
ಇಶಾನ್ ಅಬ್ಬರ
ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ 46 ಎಸೆತಗಳಲ್ಲಿ 79 ರನ್ ಸೇರಿಸಿದರು. ಇವರು 8 ಬೌಂಡರಿ, 3 ಸಿಕ್ಸರ್ ಬಾರಿಸಿ ಆರ್ಭಟಿಸಿದರು. ನಿತೀಶ್ ಕುಮಾರ್ ರೆಡ್ಡಿ 12 ಎಸೆತಗಳಲ್ಲಿ ಅಜೇಯ 29 ರನ್ ಸಿಡಿಸಿದರು. ಅಂತಿಮವಾಗಿ ಎಸ್‌ಆರ್‌ಎಚ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 255 ರನ್ ಸೇರಿಸಿತು. ಆರ್‌ಸಿಬಿ ಪರ ರಸಿಕ್ ಸಲಾಂ ದಾರ್ 52 ರನ್ ನೀಡಿ 2 ವಿಕೆಟ್ ಕಬಳಿಸಿದರು.
ಆರ್‌ಸಿಬಿ ಲೆಕ್ಕಾಚಾರ
ಆರ್‌ಸಿಬಿ ಈ ಪಂದ್ಯದಲ್ಲಿ ಗೆಲುವು ದಾಖಲಿಸಲು 256 ರನ್ ಗಳಿಸುವ ಅನಿವಾರ್ಯತೆ ಇದೆ. ಇನ್ನು ಈ ಪಂದ್ಯದಲ್ಲಿ ಬೆಂಗಳೂರು ತಂಡ ಈ ಪಂದ್ಯದಲ್ಲಿ ಸೋತರೂ 90 ರನ್‌ಗಳಿಗಿಂತ ಕಡಿಮೆ ಅಂತರದಲ್ಲಿ ಸೋಲು ದಾಖಲಿಸಬೇಕಾಗುತ್ತದೆ. ಅಂದಾಗ ಮಾತ್ರ ಮೊದಲ ಕ್ವಾಲಿಫೈಯರ್ ಆಡುವ ಆಸೆ ಫಲಿಸುತ್ತದೆ. ಇನ್ನು ಎಸ್‌ಆರ್‌ಎಚ್ ಈ ಪಂದ್ಯದಲ್ಲಿ ಗೆದ್ದು ಮೊದಲ ಕ್ವಾಲಿಫೈಯರ್ ಆಡಬೇಕಾದಲ್ಲಿ ಆರ್‌ಸಿಬಿ ತಂಡವನ್ನು 165 ರನ್‌ಗಳಿಗಿಂತ ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಬೇಕಾಗುತ್ತದೆ. ಅಂದಾಗ ಟಾಪ್ 2 ಸ್ಥಾನ ಭದ್ರವಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications