IPL 2026: ಈ ಆವೃತ್ತಿಯ ಬೆಸ್ಟ್ ಪ್ಲೇಯಿಂಗ್ ಇಲೆವೆನ್, ಆರಂಭಿಕರಾಗಿ ವಿರಾಟ್, ವೈಭವ್ ಸೂರ್ಯವಂಶಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತೊಮ್ಮೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕಿರೀಟವನ್ನು ಮುಡಿಗೇರಿಸಿಕೊಂಡಿತು. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಐದು ವಿಕೆಟ್‌ಗಳಿಂದ ಮಣಿಸಿದ ಆರ್‌ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತು.
ಈ ಋತುವಿನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಹಲವು ಆಟಗಾರರು ಸ್ಮರಣೀಯ ಪ್ರದರ್ಶನ ನೀಡಿದ್ದಾರೆ. ಆಟಗಾರರ ಪ್ರದರ್ಶನದ ಆಧಾರದ ಮೇಲೆ ಈ ಆವೃತ್ತಿಯ ಬೆಸ್ಟ್ ಪ್ಲೇಯಿಂಗ್ ಇಲೆವೆನ್ ರಚಿಸಲಾಗಿದೆ. ಆ ಬಗ್ಗೆ ವಿಶ್ಲೇಷಣೆ ಇಲ್ಲಿದೆ.

ಐಪಿಎಲ್ 2026ರ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್‌ನ ಆರಂಭಿಕರಾಗಿ ಕಾಣಿಸಿಕೊಳ್ಳುವ ಆಟಗಾರರಲ್ಲಿ ರಾಜಸ್ಥಾನ್ ರಾಯಲ್ಸ್‌ನ ವೈಭವ್ ಸೂರ್ಯವಂಶಿ, ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ, ಹಾಗೂ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. 15 ವರ್ಷ ವಯಸ್ಸಿನ ವೈಭವ್ ಸೂರ್ಯವಂಶಿ, ಈ ಬಾರಿ ಅತಿ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದಾರೆ. 37ನೇ ವಯಸ್ಸಿನಲ್ಲೂ ವಿರಾಟ್ ಕೊಹ್ಲಿ ಸ್ಥಿರ ಪ್ರದರ್ಶನ ನೀಡಿದ್ದು, 675 ರನ್ ಗಳಿಸಿ ಅತಿ ಹೆಚ್ಚು ರನ್ ಕಲೆ ಹಾಕಿದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಗುಜರಾತ್ ಟೈಟಾನ್ಸ್ ತಂಡ ಕಪ್ ಗೆಲ್ಲುವಲ್ಲಿ ಮಿಸ್ ಆದರೂ, ಶುಭ್ಮನ್ ಗಿಲ್‌ಗೆ ಇದು ಉತ್ತಮ ಆವೃತ್ತಿಯಾಗಿದೆ. ನಾಯಕತ್ವ ಮತ್ತು ಬ್ಯಾಟಿಂಗ್ ಎರಡರಲ್ಲೂ ಮಿಂಚಿದ ಗಿಲ್, ಒಂದು ಶತಕ ಹಾಗೂ ಆರು ಅರ್ಧಶತಕ ಸೇರಿದಂತೆ 732 ರನ್ ಕಲೆ ಹಾಕಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ಯಾರು?
ಮಧ್ಯಮ ಕ್ರಮಾಂಕದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ನಾಯಕ ರಜತ್ ಪಾಟೀದಾರ್, ಸನ್‌ರೈಸರ್ಸ್ ಹೈದರಾಬಾದ್‌ನ ಹೆನ್ರಿಚ್ ಕ್ಲಾಸ್ಸೆನ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ನ ರಿಂಕು ಸಿಂಗ್ ಇದ್ದಾರೆ. ನಾಯಕ ಮತ್ತು ಬ್ಯಾಟ್ಸ್‌ಮನ್ ಆಗಿ ಪಾಟೀದಾರ್, 192ರ ಸ್ಟ್ರೈಕ್ ರೇಟ್‌ನಲ್ಲಿ ಐದು ಅರ್ಧಶತಕಗಳೊಂದಿಗೆ 501 ರನ್ ಗಳಿಸಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್ ವಿಭಾಗದಲ್ಲಿ ಹೆನ್ರಿಚ್ ಕ್ಲಾಸ್ಸೆನ್ (624 ರನ್) ಅತ್ಯಂತ ಸ್ಥಿರ ಪ್ರದರ್ಶನ ನೀಡಿದ್ದಾರೆ. ಫಿನಿಷರ್ ಪಾತ್ರದಲ್ಲಿ ರಿಂಕು ಸಿಂಗ್ ಅವಕಾಶ ನೀಡಲಾಗಿದೆ.
ಬೌಲಿಂಗ್ ವಿಭಾಗ
ಬೌಲಿಂಗ್ ವಿಭಾಗದಲ್ಲಿ ಗುಜರಾತ್ ಟೈಟಾನ್ಸ್‌ನ ರಶೀದ್ ಖಾನ್, ಕಗಿಸೊ ರಬಾಡ, ರಾಜಸ್ಥಾನ್ ರಾಯಲ್ಸ್‌ನ ಜೋಫ್ರಾ ಆರ್ಚರ್, ಆರ್‌ಸಿಬಿಯ ಭುವನೇಶ್ವರ್ ಕುಮಾರ್ ಹಾಗೂ ರಸಿಕ್ ಸಲಾಮ್ ದಾರ್ ಇದ್ದಾರೆ. ಇವರೆಲ್ಲ ತಮ್ಮ ತಂಡಗಳ ಪರ ಅಮೋಘ ಪ್ರದರ್ಶನ ನೀಡಿದ್ದಾರೆ.

ಐಪಿಎಲ್ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್
- 1. ವೈಭವ್ ಸೂರ್ಯವಂಶಿ
- 2. ವಿರಾಟ್ ಕೊಹ್ಲಿ
- 3. ಶುಭ್ಮನ್ ಗಿಲ್
- 4. ರಜತ್ ಪಾಟೀದಾರ್ (ನಾಯಕ)
- 5. ಹೆನ್ರಿಚ್ ಕ್ಲಾಸ್ಸೆನ್ (ವಿಕೆಟ್ ಕೀಪರ್)
- 6. ರಿಂಕು ಸಿಂಗ್
- 7. ರಶೀದ್ ಖಾನ್
- 8. ಜೋಫ್ರಾ ಆರ್ಚರ್
- 9. ಭುವನೇಶ್ವರ್ ಕುಮಾರ್
- 10. ಕಗಿಸೊ ರಬಾಡ
- 11. ರಸಿಕ್ ಸಲಾಮ್ ದಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications