IPL 2026: ಮುಂಬೈ ಇಂಡಿಯನ್ಸ್ ಅನ್‌ಫಾಲೋ ಮಾಡಿದ್ದಾರಾ ಹಾರ್ದಿಕ್ ಪಾಂಡ್ಯ? ಅಸಲಿಯತ್ತು ಇಲ್ಲಿದೆ
19ನೇ ಆವೃತ್ತಿ ಐಪಿಎಲ್‌ನಲ್ಲಿ ಐದು ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಪರಿಣಾಮ ಈ ಬಾರಿ ಲೀಗ್ ಹಂತದಲ್ಲೇ ಗುಡ್ ಬೈ ಹೇಳಿದೆ. ಕಳೆದ ಎರಡು ಲೀಗ್ ಹಂತದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಗಾಯದ ಕಾರಣದಿಂದ ಮೈದಾನದಿಂದ ದೂರ ಉಳಿದಿದ್ದರು. ಆದರೆ ಈಗ ಬರುತ್ತಿರುವ ಸುದ್ದಿ ಕ್ರಿಕೆಟ್ ಅಭಿಮಾನಿಗಳನ್ನು ಬೆಚ್ಚಿಬೀಳಿಸಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಂತರಿಕ ಕಲಹ ಮತ್ತೆ ಭುಗಿಲೆದ್ದಿದೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕಾಗಿ ಮತ್ತೆ ಹಾರ್ದಿಕ್ ಪಾಂಡ್ಯ ಮತ್ತೆ ಸುದ್ದಿಯಲ್ಲಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ತಿಳಿದು ಬರುತ್ತಿದೆ. ಈಗ ಬಂದಿರುವ ಮಾಹಿತಿಯ ಪ್ರಕಾರ ಹಾರ್ದಿಕ್ ಪಾಂಡ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಅನ್‌ಫಾಲೋ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದು ಸಾಮಾಜಿಕ ತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ ಹಾರ್ದಿಕ್ ಪಾಂಡ್ಯ ಅವರು, ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಅವರನ್ನು ಸಹ ಅನ್‌ಫಾಲೋ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.

ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಬ್ಬುತ್ತಿದ್ದಂತೆ, ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ತಂಡವನ್ನು ಮತ್ತೆ ಫಾಲೋ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾರ್ದಿಕ್ ಪಾಂಡ್ಯ ಅವರ ಫಾಲೋವರ್ಸ್‌ಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಹೆಸರು ಕಾಣಿಸಿಕೊಳ್ಳದೇ ಇದ್ದಾಗ ಚರ್ಚೆ ಆರಂಭವಾಯಿತು. ಹಾರ್ದಿಕ್ ಪಾಂಡ್ಯ 151 ಖಾತೆಗಳನ್ನು ಫಾಲೋ ಮಾಡುತ್ತಿದ್ದಾರೆ ಇದರಲ್ಲಿ ಮುಂಬೈ ಇಂಡಿಯನ್ಸ್ ಸಹ ಸೇರಿದೆ.
ಹಾರ್ದಿಕ್ ಪಾಂಡ್ಯ ಇನ್‌ಸ್ಟಾಗ್ರಾಮ್ ನಲ್ಲಿ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಅನುಸರಿಸುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳು ತಮ್ಮ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಲೀಗ್ ಹಂತದಲ್ಲಿ ಹೊರ ನಡೆದ ಮುಂಬೈ
ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಈ ಲೀಗ್‌ನಲ್ಲಿ ಆಡಿದ 11 ಪಂದ್ಯಗಳಲ್ಲಿ ಮುಂಬೈ 3 ಜಯ, 8 ಸೋಲು ಕಂಡಿದ್ದು, 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಲೀಗ್ ಹಂತದಲ್ಲೇ 19ನೇ ಆವೃತ್ತಿಗೆ ಗುಡ್ ಬೈ ಹೇಳಿದೆ. ಮುಂಬೈ ಇಂಡಿಯನ್ಸ್ ಲೀಗ್ ಹಂತದಲ್ಲಿ ಮೇ 14 ರಂದು ಪಂಜಾಬ್ ವಿರುದ್ಧ, ಮೇ 20 ರಂದು ಕೆಕೆಆರ್ ವಿರುದ್ಧ, ಮೇ 24 ರಂದು ರಾಜಸ್ಥಾನ್ ವಿರುದ್ಧ ಕಾದಾಟ ನಡೆಸಲಿದೆ.
ಸ್ಟಾರ್ ಆಟಗಾರರ ವೈಫಲ್ಯ
ಮುಂಬೈ ತಂಡದ ಸ್ಟಾರ್ ಆಟಗಾರರು ಈ ಲೀಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಸೂರ್ಯಕುಮಾರ್ 17ರ ಸರಾಸರಿಯಲ್ಲಿ ರನ್ ಕಲೆ ಹಾಕಿದರೆ, ಹಾರ್ದಿಕ್ ಪಾಂಡ್ಯ 20ರ ಸರಾಸರಿಯಲ್ಲಿ ರನ್ ಸೇರಿಸಿದ್ದಾರೆ. ಇನ್ನು ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ವಿಕೆಟ್ ಪಡೆಯುವಲ್ಲಿ ಹಿಂದೆ ಬಿದ್ದಿದ್ದು ತಂಡ ಲೀಗ್ ಹಂತದಲ್ಲೇ ಹೊರನಡೆಯುವಂತೆ ಮಾಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications