Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬೆಂಗಳೂರಿನಿಂದ ಐಪಿಎಲ್‌ ಫೈನಲ್‌ ಶಿಫ್ಟ್‌: ಡಿಕೆ ಶಿವಕುಮಾರ್ ಹೇಳಿದ್ದೇನು?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ಲೇ ಆಫ್‌ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣಾ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ. ಈ ಬಾರಿ ಸಂಪ್ರದಾಯದಂತೆ ಐಪಿಎಲ್‌ ಫೈನಲ್‌ ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿತ್ತು. ಆದರೆ ಬಿಸಿಸಿಐ ಈ ಬಾರಿಯ ಐಪಿಎಲ್‌ ಫೈನಲ್‌ ಪಂದ್ಯದ ಆತಿಥ್ಯವನ್ನು ಸಹ ಅಹಮದಾಬಾದ್‌ಗೆ ನೀಡಿದೆ. ಬಿಸಿಸಿಐ ಈ ನಿರ್ಧಾರ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇದೇ ವಿಚಾರದ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಶಾಸಕರು ಉಚಿತ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದು ಹಾಗೂ ಬೇರೆ ಕಾರಣಗಳನ್ನು ಉಲ್ಲೇಖಿಸಿ ಬಿಸಿಸಿಐ ಐಪಿಎಲ್‌ ಫೈನಲ್‌ ಪಂದ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್‌ಗೆ ವರ್ಗಾಯಿಸಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಶಾಸಕರಿಗೆ ಟಿಕೆಟ್‌ ನೀಡುವುದು ಹಾಗೂ ಐಪಿಎಲ್‌ ಫೈನಲ್ ಅಹಮದಾಬಾದ್‌ಗೆ ವರ್ಗವಾಣೆ ಆಗಿದ್ದಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

IPL 2026

ತಮ್ಮ ನಿವಾಸದ ಬಳಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದೆ. ಐಪಿಎಲ್‌ ಫೈನಲ್‌ ಹೆಚ್ಚು ಜನರು ವೀಕ್ಷಿಸಬಹುದು. ಇದೇ ಉದ್ದೇಶದಿಂದ ಬಿಸಿಸಿಐ ಫೈನಲ್‌ ಪಂದ್ಯವನ್ನು ಬೆಂಗಳೂರಿನಿಂದ ಅಹಮದಾಬಾದ್‌ಗೆ ಶಿಫ್ಟ್‌ ಮಾಡಿರಬಬಹುದು. ಶಾಸಕರಿಗೆ ಉಚಿತ ಐಪಿಎಲ್‌ ಟಿಕೆಟ್‌ ವಿತರಣೆಗೂ ಹಾಗೂ ಫೈನಲ್ ಪಂದ್ಯ ಸ್ಥಳಾಂತರವಾಗಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ರಾಜ್ಯದ ಶಾಸಕರು ಐಪಿಎಲ್‌ ಟಿಕೆಟ್‌ ಬೇಡಿಕೆ ಇಟ್ಟಿದಕ್ಕೆ ಫೈನಲ್‌ ಪಂದ್ಯ ಅಹಮದಾಬಾದ್‌ಗೆ ಸ್ಥಳಾಂತರವಾದ ವರದಿಗಳನ್ನು ಡಿಕೆ ಶಿವಕುಮಾರ್‌ ತಿರಸ್ಕರಿಸಿದ್ದಾರೆ .

ಕೆಎಸ್‌ಸಿಎ ಅಸಮಾಧಾನ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಐಪಿಎಲ್ ಪ್ಲೇ-ಆಫ್ ಪಂದ್ಯಗಳನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದರೂ, ಬಿಸಿಸಿಐ ಬೇರೆ ಕೇಂದ್ರಗಳಿಗೆ ಪಂದ್ಯಗಳನ್ನು ಹಂಚಿಕೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಸಮಾಧಾನ ವ್ಯಕ್ತಪಡಿಸಿದೆ.

Story first published: Wednesday, May 6, 2026, 18:14 [IST]
Other articles published on May 6, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+