IPL 2026 Final: ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದ್‌ಗೆ ಶಿಫ್ಟ್: ಅಸಲಿ ಕಾರಣ ಬಿಚ್ಚಿಟ್ಟ ಅರುಣ್ ಧುಮಾಲ್
IPL 2026 Final: ಐಪಿಎಲ್ 2026ರ ಫೈನಲ್ ಪಂದ್ಯವು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಹಮದಾಬಾದ್‌ಗೆ ಶಿಫ್ಟ್ ಆಗಿರುವುದು ಕನ್ನಡಿಗರಲ್ಲಿ ಅಸಮಾಧಾನ ಮೂಡಿಸಿತ್ತು. ಈ ಕುರಿತು ಎದ್ದಿರುವ ಚರ್ಚೆಗಳಿಗೆ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಸ್ಪಷ್ಟನೆ ನೀಡಿದ್ದು, ಬೆಂಗಳೂರಿನಲ್ಲಿ ಪಂದ್ಯ ಆಯೋಜಿಸುವುದು ಏಕೆ ಅಸಾಧ್ಯವಾಯಿತು ಎಂದು ತಿಳಿಸಿದ್ದಾರೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಹಾಲಿ ಚಾಂಪಿಯನ್ ತಂಡದ ತವರು ಮೈದಾನದಲ್ಲಿ ಫೈನಲ್ ಪಂದ್ಯ ನಡೆಯುವುದು ಐಪಿಎಲ್ ಸಂಪ್ರದಾಯವಾಗಿದೆ. ಅದರಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರು ನೆಲದಲ್ಲಿ ಪಂದ್ಯ ನಡೆಯಬೇಕಿತ್ತು. ಆದರೆ ಈ ಬಾರಿ ಕೆಲವು ಕಾರಣಗಳಿಂದ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಹಮದಬಾದ್‌ಗೆ ಸ್ಥಳಾಂತರ ಮಾಡಲಾಗಿದೆ.

ಉಚಿತ ಟಿಕೆಟ್‌ಗಳಿಗೆ ಹೆಚ್ಚಾದ ಬೇಡಿಕೆ
"ಕರ್ನಾಟಕ ಸರ್ಕಾರವು ರಾಜ್ಯದ ಪ್ರತಿಯೊಬ್ಬ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ತಲಾ 3 ಉಚಿತ ಟಿಕೆಟ್‌ಗಳನ್ನು ನೀಡುವಂತೆ ಕೋಟಾ ನಿಗದಿಪಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣವು ಕೇವಲ 40,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. ರಾಜಕಾರಣಿಗಳು ಮತ್ತು ಕೆಎಸ್‌ಸಿಎ ಉಚಿತ ಟಿಕೆಟ್‌ಗಳ ಬೇಡಿಕೆ ಪೂರೈಸಿದ ನಂತರ ಉಳಿದಂತೆ ಅಭಿಮಾನಿಗಳಿಗೆ ಟಿಕೆಟ್ ನೀಡಲು ಅಲ್ಲಿ ಅವಕಾಶವೇ ಇರುವುದಿಲ್ಲ. ಆದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ," ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದಾರೆ.
ಅಹಮದಾಬಾದ್ ಏಕೆ ಆಯ್ಕೆಯಾಯಿತು?
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗದಲ್ಲಿ 1.30 ಲಕ್ಷ ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಣೆ ಮಾಡಬಹುದಾಗಿದೆ. ಫೈನಲ್ ಪಂದ್ಯಕ್ಕೆ ಜಾಗತಿಕವಾಗಿ ಹೆಚ್ಚಿನ ಬೇಡಿಕೆ ಇರುವುದರಿಂದ, ಗರಿಷ್ಠ ಸಂಖ್ಯೆಯ ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಲು ದೊಡ್ಡ ಕ್ರೀಡಾಂಗಣದ ಅವಶ್ಯಕತೆ ಇತ್ತು. ಇದು ಕೂಡ ಒಂದು ಕಾರಣ ಎಂದು ಅವರು ತಿಳಿಸಿದ್ದಾರೆ.
ಅದೇ ಸಮಯದಲ್ಲಿ ಐಸಿಸಿ ಮಂಡಳಿಯ ಸಭೆ ನಡೆಯಲಿದ್ದು, ವಿದೇಶಿ ಅತಿಥಿಗಳ ವಾಸ್ತವ್ಯ ಮತ್ತು ಸುರಕ್ಷತೆಗೆ ಅಹಮದಾಬಾದ್ ಸೂಕ್ತವೆಂದು ನಿರ್ಧರಿಸಲಾಯಿತು. ಜೊತೆಗೆ ಕಳೆದ ವರ್ಷ ಬೆಂಗಳೂರಿನ ಕ್ರೀಡಾಂಗಣದ ಬಳಿ ಉಂಟಾಗಿದ್ದ ಕಾಲ್ತುಳಿತ ದುರಂತವನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಎಚ್ಚರಿಕೆ ವಹಿಸಲಾಗಿದೆ," ಎಂದು ತಿಳಿಸಿದ್ದಾರೆ.
ಅಹಮದಾಬಾದ್‌ಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, "ಇದು ಯಾವುದೇ ನಗರದ ಮೇಲಿನ ಪಕ್ಷಪಾತವಲ್ಲ. ಬೆಂಗಳೂರಿನಲ್ಲಿ ಪಂದ್ಯ ನಡೆಸುವುದು ಅನಿವಾರ್ಯ ಕಾರಣಗಳಿಂದ ಅಸಾಧ್ಯವಾಯಿತು. ಒಂದು ವೇಳೆ ಕಳೆದ ಬಾರಿ ಸಿಎಸ್‌ಕೆ ಗೆದ್ದಿದ್ದರೆ, ನಾವು ಖಂಡಿತವಾಗಿಯೂ ಪಂದ್ಯವನ್ನು ಚೆನ್ನೈನಲ್ಲಿ ಆಯೋಜಿಸುತ್ತಿದ್ದೆವು," ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನೂ ಬಿಸಿಸಿಐನ ಈ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರೂ ಅವಕಾಶ ನಿರಾಕರಿಸಿರುವುದು ಸರಿಯಲ್ಲ ಎಂಬುದು ಸಂಸ್ಥೆಯ ವಾದವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications