ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸಾಯಿ ಸುದರ್ಶನ್, ಗಿಲ್ ಮುಂಚೂಣಿ
19ನೇ ಆವೃತ್ತಿಯ ಐಪಿಎಲ್ ಕೊನೆಯ ಹಂತದತ್ತ ಮುಖ ಮಾಡಿದೆ. ಈ ಋತುವಿನ ಐಪಿಎಲ್‌ನಲ್ಲಿ ಸ್ಟಾರ್ ಆಟಗಾರರು ತಮ್ಮ ಸ್ಥಿರ ಪ್ರದರ್ಶನ ನೀಡಿ ತಮ್ಮ ತಮ್ಮ ತಂಡಕ್ಕೆ ಆಧಾರವಾಗಿದ್ದಾರೆ. ಈ ಬಾರಿ ಆರೆಂಜ್ ಕ್ಯಾಪ್ ರೇಸ್ ಕುತೂಹಲ ಮೂಡಿಸಿದೆ. ಪ್ರತಿ ಪಂದ್ಯದ ಬಳಿಕ ಆರೆಂಜ್ ಕ್ಯಾಪ್ ಬೇರೆ ಬೇರೆ ಆಟಗಾರರ ತಲೆಗೆ ಬದಲಾಗುತ್ತಿದೆ. ಈ ವೇಳೆ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕರಾದ ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಗರಿಷ್ಠ ರನ್ ಸಾಧಕರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.
ಅಹಮದಾಬಾದ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕ ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರು. ಈ ಜೋಡಿ ಮೊದಲ ವಿಕೆಟ್‌ಗೆ ಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಆಸರೆಯಾಯಿತು. ಇಬ್ಬರೂ ಆರಂಭಿಕ ಆಟಗಾರರು ಅರ್ಧಶತಕ ಬಾರಿಸಿ ಮಿಂಚಿದರು. ಸಾಯಿ ಸುದರ್ಶನ್ 84 ರನ್ ಬಾರಿಸಿದರೆ, ಶುಭಮನ್ ಗಿಲ್ 64 ರನ್ ಬಾರಿಸಿ ತಂಡಕ್ಕೆ ಆಧಾರವಾದರು.

ಸಾಯಿ ಸುದರ್ಶನ್ ಅವರ ಈ ಮನಮೋಹಕ ಇನಿಂಗ್ಸ್ ಮೂಲಕ ಇವರು ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಆವೃತ್ತಿಯಲ್ಲಿ ಕ್ಲಾಸಿಕ್ ಬ್ಯಾಟಿಂಗ್ ನಡೆಸುತ್ತಿರುವ ಸಾಯಿ ಆಡಿದ 14 ಪಂದ್ಯಗಳಲ್ಲಿ 49ರ ಸರಾಸರಿಯಲ್ಲಿ 638 ರನ್ ಕಲೆ ಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 7 ಅರ್ಧಶತಕಗಳನ್ನು ಸಾಯಿ ಬಾರಿಸಿದ್ದಾರೆ. ಒಟ್ಟಾರೆ ಲೀಗ್‌ನಲ್ಲಿ 62 ಬೌಂಡರಿ, 29 ಸಿಕ್ಸರ್ ಬಾರಿಸಿ ಮಿಂಚಿದ್ದಾರೆ.
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ ಆಡಿದ 13 ಪಂದ್ಯಗಳಲ್ಲಿ 47ರ ಸರಾಸರಿಯಲ್ಲಿ 616 ರನ್ ಕಲೆ ಹಾಕಿದ್ದಾರೆ. ಇವರು 6 ಅರ್ಧಶತಕ ಬಾರಿಸಿದ್ದಾರೆ. ಇವರ ಬ್ಯಾಟ್ ನಿಂದ 57 ಬೌಂಡರಿ, 30 ಸಿಕ್ಸರ್ ಸೇರಿವೆ.

ವೈಭವ್‌ಗೂ ಪಟ್ಟಿಯಲ್ಲಿ ಸ್ಥಾನ
ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಇದ್ದಾರೆ. ಇವರು ಆಡಿದ 13 ಪಂದ್ಯಗಳಲ್ಲಿ 579 ರನ್ ಸಿಡಿಸಿದ್ದಾರೆ. ಈ ವೇಳೆ 1 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ನಾಲ್ಕನೇ ಸ್ಥಾನದಲ್ಲಿ ಎಲ್‌ಎಸ್‌ಜಿ ತಂಡದ ಮಿಚೆಲ್ ಮಾರ್ಷ್ ಕಾಣಿಸಿಕೊಂಡಿದ್ದಾರೆ. ಇವರು ಆಡಿದ 13 ಪಂದ್ಯಗಳಲ್ಲಿ 563 ರನ್ ಕಲೆ ಹಾಕಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಇವರು ಆಡಿದ 13 ಪಂದ್ಯಗಳಲ್ಲಿ 555 ರನ್ ಸಿಡಿಸಿದ್ದಾರೆ.
ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಹ ಈ ರೇಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇವರು ಆಡಿದ 13 ಪಂದ್ಯಗಳಲ್ಲಿ 54ರ ಸರಾಸರಿಯಲ್ಲಿ 542 ರನ್ ಕಲೆ ಹಾಕಿದ್ದಾರೆ. ಇವರು ಈ ಆವೃತ್ತಿಯಲ್ಲಿ 1 ಶತಕ, 4 ಅರ್ಧಶತಕಗಳು ಸೇರಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications