Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2026: ಪ್ರಶಸ್ತಿಯನ್ನು ಡಿಫೆಂಡ್‌ ಮಾಡಿಕೊಳ್ಳಲು ಆರ್‌ಸಿಬಿ ಫೈನಲ್‌ವರೆಗೆ ನಡೆದು ಬಂದ ಹಾದಿ

19ನೇ ಆವೃತ್ತಿಯ ಐಪಿಎಲ್ ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಅಮೋಘ ಪ್ರದರ್ಶನ ನೀಡಿದೆ. ಹಾಲಿ ಚಾಂಪಿಯನ್‌ ಪಟ್ಟದೊಂದಿಗೆ ಕಣಕ್ಕೆ ಇಳಿದ ಆರ್‌ಸಿಬಿ, ತನ್ನ ಘನತೆಗೆ ತಕ್ಕ ಆಟವನ್ನು ಆಡಿದೆ. ಲೀಗ್‌ ಹಂತದಿಂದ ಈ ವರೆಗೆ ಆರ್‌ಸಿಬಿ ನೀಡಿದ ಸಂಘಟಿತ ಆಟ ಅಭಿಮಾನಿಗಳ ಮನ ಗೆದ್ದಿದೆ.

ಲೀಗ್‌ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ 9 ಜಯ ಸಾಧಿಸಿದ ಆರ್‌ಸಿಬ 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಮೊದಲ ಕ್ವಾಲಿಫೈಯರ್ ಪ್ರವೇಶಿಸಿತು. ಲೀಗ್‌ ಹಂತದ ಮೊದಲ ಪಂದ್ಯದಿಂದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ನೀಡಿದ ಪ್ರದರ್ಶನ ಹೇಗಿತ್ತು? ಇಲ್ಲಿದೆ ವರದಿ.

IPL 2026

ಆರ್‌ಸಿಬಿ ಶುಭಾರಂಭ

ಮೊದಲ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 201/9 ರನ್‌ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ 15.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 203 ರನ್‌ ಸೇರಿಸಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

IPL 2026: ಎರಡನೇ ಪ್ರಶಸ್ತಿ ಕನಸಿನಲ್ಲಿ ಆರ್‌ಸಿಬಿ, ಗುಜರಾತ್‌

IPL 2026: ಎರಡನೇ ಪ್ರಶಸ್ತಿ ಕನಸಿನಲ್ಲಿ ಆರ್‌ಸಿಬಿ, ಗುಜರಾತ್‌

ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಅಬ್ಬರ

ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 250 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಪ್ರತಿಯಾಗಿ ಸಿಎಸ್‌ಕೆ ತಂಡವನ್ನು 19.4 ಓವರ್‌ಗಳಲ್ಲಿ 207 ರನ್‌ಗಳಿಗೆ ಆಲೌಟ್ ಮಾಡಿ 43 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಘಾತ

ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 201 ರನ್ ಗಳಿಸಿತು. ಆದರೆ ಈ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 202 ರನ್ ಕಲೆ ಹಾಕಿ, 6 ವಿಕೆಟ್‌ ಜಯ ದಾಖಲಿಸಿತು.

ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಜಯ

ನಾಲ್ಕನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 240 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಗುರಿಯನ್ನು ಹಿಂಬಾಲಿಸಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 222/5 ರನ್‌ಗಳಿಗೆ ನಿಯಂತ್ರಿಸಿ ಆರ್‌ಸಿಬಿ 18 ರನ್‌ಗಳ ಭರ್ಜರಿ ಜಯ ದಾಖಲಿಸಿತು.

ಲಕ್ನೋ ವಿರುದ್ಧ ಸುಲಭ ಜಯ

ಐದನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಆರ್‌ಸಿಬಿ ಬೌಲರ್‌ಗಳು 20 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಮಾಡಿದರು. ರನ್‌ ಬೆನ್ನಟ್ಟಿದ ಆರ್‌ಸಿಬಿ 15.1 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 149 ರನ್ ಸೇರಿಸಿ ಜಯ ಸಾಧಿಸಿತು.

IPL Orange Cap: ಮೂರು ಬ್ಯಾಟರ್‌ಗಳಿಂದ 700ಕ್ಕೂ ಹೆಚ್ಚು ರನ್‌, ಅಗ್ರಸ್ಥಾನದಲ್ಲಿ ವೈಭವ್‌ ಸೂರ್ಯವಂಶಿ

IPL Orange Cap: ಮೂರು ಬ್ಯಾಟರ್‌ಗಳಿಂದ 700ಕ್ಕೂ ಹೆಚ್ಚು ರನ್‌, ಅಗ್ರಸ್ಥಾನದಲ್ಲಿ ವೈಭವ್‌ ಸೂರ್ಯವಂಶಿ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು

ಬೆಂಳೂರಿನಲ್ಲಿ ಆರ್‌ಸಿಬಿ ಲೀಗ್‌ ಹಂತದ ಆರನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಕಾದಾಟ ನಡೆಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 175 ರನ್ ಗಳಿಸಿತು. ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 19.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿ ಆರ್‌ಸಿಬಿ ತಂಡಕ್ಕೆ ಶಾಕ್ ನೀಡಿತು.

ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಗೆಲುವು

ಬೆಂಗಳೂರಿನಲ್ಲಿ ನಡೆದ ಲೀಗ್‌ ಹಂತದ ಇನ್ನೊಂದು ಪಂದ್ಯದಲ್ಲಿ ಶುಭಮನ್‌ ಗಿಲ್‌ ಪಡೆಗೆ ಆರ್‌ಸಿಬಿ ಪೆಟ್ಟು ನೀಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 205 ರನ್ ಕಲೆಹಾಕಿತು. ಕಠಿಣ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ 18.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 206 ರನ್ ಸೇರಿಸಿ ಜಯದ ನಗೆ ಬೀರಿತು.

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಆರ್‌ಸಿಬಿ

ಎಂಟನೇ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೇವಲ 75 ರನ್‌ಗಳಿಗೆ (16.3 ಓವರ್) ಆಲೌಟ್ ಮಾಡಿತು. ಈ ಅಲ್ಪ ಮೊತ್ತವನ್ನು ಆರ್‌ಸಿಬಿ ಕೇವಲ 6.3 ಓವರ್‌ಗಳಲ್ಲಿ 1 ವಿಕೆಟ್ ಮುಟ್ಟಿ ದೊಡ್ಡ ಗೆಲುವು ದಾಖಲಿಸಿತು.

ಗುಜರಾತ್ ಟೈಟನ್ಸ್ ವಿರುದ್ಧ ಮುಖಭಂಗ

ಅಹಮದಾಬಾದ್‌ನಲ್ಲಿ ನಡೆದ ಒಂಬತ್ತನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 19.2 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು. ಈ ಮೊತ್ತವನ್ನು ಗುಜರಾತ್ ಟೈಟನ್ಸ್ ತಂಡವು 15.5 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಜಯ ಸಾಧಿಸಿತು.

ಲಕ್ನೋ ವಿರುದ್ಧ ಡಿಎಲ್‌ಎಸ್ ನಿಯಮದಡಿ ಸೋಲು

ಹತ್ತನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 19 ಓವರ್‌ಗಳಲ್ಲಿ 3 ವಿಕೆಟ್‌ಗೆ 209 ರನ್ ಗಳಿಸಿತು. ಮಳೆಯಿಂದ ಬಾಧಿತವಾದ ಈ ಪಂದ್ಯದಲ್ಲಿ ಗುರಿ ಬೆನ್ನಟ್ಟಿದ ಆರ್‌ಸಿಬಿ 19 ಓವರ್‌ಗಳಲ್ಲಿ 6 ವಿಕೆಟ್‌ಗೆ 203 ರನ್ ಗಳಿಸಲಷ್ಟೇ ಶಕ್ತವಾಗಿ, ಡಿಎಲ್‌ಎಸ್ (DLS) ನಿಯಮದ ಪ್ರಕಾರ 9 ರನ್‌ಗಳಿಂದ ಸೋಲು ಕಂಡಿತು.

ಮುಂಬೈ ವಿರುದ್ಧ ಕೊನೆಯ ಓವರ್ ಥ್ರಿಲ್ಲರ್

ಹನ್ನೊಂದನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 166 ರನ್ ಗಳಿಸಿತು. ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ ಕೊನೆಯ ಓವರ್‌ನ ರೋಚಕ ಕ್ಷಣಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿ ಅಬ್ಬರಿಸಿತು.

ಕೆಕೆಆರ್ ವಿರುದ್ಧ ಅಬ್ಬರಿಸಿದ ಬೆಂಗಳೂರು

ಹನ್ನೆರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದ 192 ರನ್‌ಗಳ (20 ಓವರ್‌ಗಳಲ್ಲಿ 192/4) ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ, ವಿರಾಟ್ ಕೊಹ್ಲಿ ಅಬ್ಬರದ ಶತಕದ ನೆರವಿನಿಂದ 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿ 2 ಅಂಕ ಕಲೆ ಹಾಕಿತು.

ಪಂಜಾಬ್ ಕಿಂಗ್ಸ್‌ಗೆ ಶಾಕ್‌

ಹದಿಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 222 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಎರಡನೇ ಬಾರಿ ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವನ್ನು 20 ಓವರ್‌ಗಳಲ್ಲಿ 8 ವಿಕೆಟ್‌ಗೆ 199 ರನ್‌ಗಳಿಗೆ ಕಟ್ಟಿಹಾಕಿದ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿತು.

ಹೈದರಾಬಾದ್ ವಿರುದ್ಧ ಹೀನಾಯ ಸೋಲು

ಹದಿನಾಲ್ಕನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್‌ಗಳ ಅಬ್ಬರ ಜೋರಾಗಿತ್ತು. ಈ ಪಂದ್ಯದಲ್ಲಿ ಆರ್‌ಸಿಬಿ 255 ರನ್‌ ಬಿಟ್ಟುಕೊಟ್ಟಿತು. ಈ ಕಠಿಣ ಗುರಿ ಬೆನ್ನಟ್ಟಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 200 ರನ್ ಗಳಿಸಲಷ್ಟೇ ಶಕ್ತವಾಗಿ 55 ರನ್‌ಗಳಿಂದ ಪರಾಭವಗೊಂಡಿತು. ಆದರೂ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಸಫಲವಾಯಿತು.

ಫೈನಲ್ ಪ್ರವೇಶಿಸಿದ ಆರ್‌ಸಿಬಿ

ಪ್ಲೇಆಫ್ಸ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, 20 ಓವರ್‌ಗಳಲ್ಲಿ 5 ವಿಕೆಟ್‌ಗೆ 254 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡವನ್ನು 19.3 ಓವರ್‌ಗಳಲ್ಲಿ ಕೇವಲ 162 ರನ್‌ಗಳಿಸಿ ಆಲೌಟ್ ಆಯಿತು.

ಈ ಸುದ್ದಿ ಪ್ರಕಟಿಸಲು ಯೋಗ್ಯವಾಗಿದೆಯಾ? ಈ ಸುದ್ದಿಯನ್ನು ನಕಲು ಮಾಡಲಾಗಿದೆಯಾ? ಈ ಸುದ್ದಿಯ ಬರವಣಿಗೆ ಶೈಲಿಗೆ ನೀವು ಎಷ್ಟು ಅಂಕ ನೀಡಬಹುದು?

Story first published: Saturday, May 30, 2026, 17:20 [IST]
Other articles published on May 30, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+