ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾಗೆ ಆಡಲು ಸಂಪೂರ್ಣ ಸಿದ್ಧ: ಕುಮಾರ್ ಸಂಗಕ್ಕಾರ ಭವಿಷ್ಯ
ಐಪಿಎಲ್ 2026 ರಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹೆಸರುವಾಸಿಯಾಗಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡುವ ಕುರಿತು ತೀವ್ರ ಚರ್ಚೆಗಳು ಆರಂಭವಾಗಿವೆ. ಎರಡನೇ ಆವೃತ್ತಿಯ ಐಪಿಎಲ್‌ನಲ್ಲಿ ವೈಭವ್ ವಿಶ್ವದ ಅಗ್ರ ಬೌಲರ್‌ಗಳ ವಿರುದ್ಧ ನಿರ್ಭೀತಿಯಿಂದ ಬ್ಯಾಟ್ ಬೀಸಿದ್ದಾರೆ. ರಾಜಸ್ಥಾನ್ ರಾಯಲ್ಸ್‌ನ ಮುಖ್ಯ ಕೋಚ್ ಕುಮಾರ್ ಸಂಗಕ್ಕಾರ ಅವರು ವೈಭವ್ ಅಂತರರಾಷ್ಟ್ರೀಯ ಪಂದ್ಯ ಆಡಲು ಸಂಪೂರ್ಣ ಸಿದ್ಧ ಎಂದು ಹೇಳಿಕೆ ನೀಡಿದ್ದಾರೆ.
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಐಪಿಎಲ್ 2026 ರ ಎರಡನೇ ಕ್ವಾಲಿಫೈಯರ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ವೈಭವ್ ಸೂರ್ಯವಂಶಿ ಅವರ ಅದ್ಭುತ ಪ್ರದರ್ಶನ ಇಡೀ ಸೀಸನ್‌ನ ಕೇಂದ್ರಬಿಂದುವಾಗಿತ್ತು. ಕೇವಲ 15 ವರ್ಷ ವಯಸ್ಸಿನ ಈ ಬ್ಯಾಟ್ಸ್‌ಮನ್ ಐಪಿಎಲ್ 2026 ರಲ್ಲಿ 776 ರನ್ ಗಳಿಸಿದ್ದು, ಇವರ ಸ್ಟ್ರೈಕ್ ರೇಟ್ 237.31 ಆಗಿದೆ. ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವೈಭವ್ ಅನುಭವಿ, ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅವರನ್ನು ಹಿಂದಿಕ್ಕಿ, ಸದ್ಯ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

ವೈಭವ್ ಎಲಿಮಿನೇಟರ್ ಪಂದ್ಯದಲ್ಲಿ 29 ಎಸೆತಗಳಲ್ಲಿ 97 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಆದರೆ ಎರಡನೇ ಕ್ವಾಲಿಫೈಯರ್‌ನಲ್ಲಿ ಅವರು 47 ಎಸೆತಗಳಲ್ಲಿ 96 ರನ್ ಗಳಿಸಿದ್ದರು. ಈ ಎರಡೂ ಇನ್ನಿಂಗ್ಸ್‌ಗಳು ಅವರು ಆಕ್ರಮಣಕಾರಿ ಬ್ಯಾಟ್ಸ್‌ಮನ್ ಮಾತ್ರವಲ್ಲದೆ, ಪರಿಸ್ಥಿತಿಗೆ ತಕ್ಕಂತೆ ತಮ್ಮ ಬ್ಯಾಟಿಂಗ್ ಮಾಡಿ ಗಮನ ಸೆಳೆದರು.
ಸಂಗಾ ಹೇಳಿದ್ದಿಷ್ಟು?
ಈ ಆವೃತ್ತಿಯಲ್ಲಿ ವೈಭವ್ ಜಸ್ಪ್ರೀತ್ ಬುಮ್ರಾ, ಕಗಿಸೋ ರಬಾಡಾ ಮತ್ತು ಪ್ಯಾಟ್ ಕಮಿನ್ಸ್ ಅವರಂತಹ ವಿಶ್ವ ದರ್ಜೆಯ ಬೌಲರ್‌ಗಳ ವಿರುದ್ಧ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಮಾಜಿ ಭಾರತೀಯ ನಾಯಕ ಸುನಿಲ್ ಗವಾಸ್ಕರ್ ಸೇರಿದಂತೆ ಹಲವು ದಿಗ್ಗಜರು ವೈಭವ್ ಅವರನ್ನು ಹಾಡಿ ಹೊಗಳಿದ ನಂತರ, ಈಗ ಕುಮಾರ್ ಸಂಗಕ್ಕಾರ ಕೂಡ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸಿದ್ಧ ಎಂದು ದೃಢಪಡಿಸಿದ್ದಾರೆ.

ವಿಶ್ವದ ಅತ್ಯುತ್ತಮ ಬೌಲರ್‌ಗಳ ವಿರುದ್ಧ ವೈಭವ್ ತೋರಿಸಿದ ಪ್ರದರ್ಶನ ನೋಡಿದಾಗ, ನೀವು ಅವರಿಗೆ ಯಾವುದೇ ಸವಾಲು ನೀಡಿದರೂ ಅದನ್ನು ಎದುರಿಸಲು ಅವರು ಸಿದ್ಧರಾಗಿದ್ದಾರೆ ಎಂದು ನನಗೆ ಅನಿಸುತ್ತದೆ" ಎಂದು ಕುಮಾರ್ ಸಂಗಕ್ಕಾರ ಅಭಿಪ್ರಾಯಪಟ್ಟಿದ್ದಾರೆ. ವೈಭವ್‌ಗೆ ಶೀಘ್ರದಲ್ಲೇ ಟೀಮ್ ಇಂಡಿಯಾದಿಂದ ಕರೆ ಬರುತ್ತದೆ ಎಂದು ನನಗೆ ಖಾತ್ರಿಯಿದೆ," ಎಂದು ಸಂಗಕ್ಕಾರ ವಿಶ್ವಾಸ ವ್ಯಕ್ತಪಡಿಸಿದರು.
ಐರ್ಲೆಂಡ್ ವಿರುದ್ಧ ಸಿಗುತ್ತಾ ಅವಕಾಶ?
ಐರ್ಲೆಂಡ್ ಪ್ರವಾಸದಲ್ಲಿ ಚೊಚ್ಚಲ ಅವಕಾಶ ಸಿಗಬಹುದೇ? ಭಾರತ ತಂಡವು ಜೂನ್ ಅಂತ್ಯದಲ್ಲಿ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ ಮತ್ತು ಅಲ್ಲಿ ಟಿ20 ಸರಣಿ ಆಡಲಿದೆ. ಈ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಗುವ ಸಾಧ್ಯತೆಯಿದೆ ಎಂದು ಊಹಿಸಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications