IPL 2026: ಮುಂದಿನ ಆವೃತ್ತಿಗೆ ಹೊಸ ನಾಯಕರ ಹುಡುಕಾಟದಲ್ಲಿ ಮೂರು ತಂಡಗಳು?
ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) ಕುತೂಹಲ ಘಟ್ಟದತ್ತ ಮುಖ ಮಾಡಿದೆ. ಸ್ಟಾರ್ ತಂಡಗಳು ಸ್ಥಿರ ಪ್ರದರ್ಶನ ನೀಡುತ್ತಿದ್ದು ಪ್ಲೇ ಆಫ್ ರೇಸ್‌ನಲ್ಲಿ ಮುಂಚೂಣಿಯಲ್ಲಿವೆ. ಪ್ರತಿ ಪಂದ್ಯವೂ ಸಹ ಈಗ ಪ್ಲೇ ಆಫ್ ಲೆಕ್ಕಾಚಾರದಿಂದ ಮಹತ್ವ ಪಡೆದಿದೆ. ಟಾಪ್ 4ನಲ್ಲಿ ಸ್ಥಾನ ಪಡೆಯಲು ಎಲ್ಲ ತಂಡಗಳು ಕಸರತ್ತು ನಡೆಸಿವೆ. ಇನ್ನು ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈಗಾಗಲೇ ಲೀಗ್ ಹಂತದಲ್ಲೇ ತಮ್ಮ ಅಭಿಯಾನವನ್ನು ಮುಗಿಸಿವೆ. ಈಗ ಈ ಎರಡೂ ತಂಡಗಳು ಮುಂದಿನ ಆವೃತ್ತಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ತಮ್ಮ ತಯಾರಿಯನ್ನು ನಡೆಸಿವೆ. ಮುಂದಿನ ಆವೃತ್ತಿಯ ಐಪಿಎಲ್‌ನಲ್ಲಿ ಮೂರು ತಂಡಗಳ ನಾಯಕರು ಬದಲಾಗುತ್ತಾರೆ ಎಂಬ ಚರ್ಚೆಗಳು ಆರಂಭವಾಗಿವೆ. ಆ ಮೂರು ತಂಡಗಳು ಯಾವುವು ಎಂಬ ಬಗ್ಗೆ ವರದಿ ಇಲ್ಲಿದೆ.
ಸ್ಟಾರ್ ಆಟಗಾರರನ್ನು ತಮ್ಮ ತಂಡದಲ್ಲಿ ಹೊಂದಿದ್ದ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡ ಈ ಬಾರಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಹೀಗಾಗಿ ನಾಯಕತ್ವದ ಬದಲಾವಣೆಯ ಕಾರ್ಯಕ್ರಮವನ್ನು ಮುಂದಿನ ಆವೃತ್ತಿಯಲ್ಲಿ ಎಲ್‌ಎಸ್‌ಜಿ ಮ್ಯಾನೇಜ್ಮೆಂಟ್ ಹಮ್ಮಿಕೊಳ್ಳುವ ಸಾಧ್ಯತೆ ಇದೆ. 2024ರ ಐಪಿಎಲ್ ಹರಾಜಿನಲ್ಲಿ ಎಲ್‌ಎಸ್‌ಜಿ 27 ಕೋಟಿ ರೂ. ಭಾರೀ ಮೊತ್ತವನ್ನು ನೀಡಿ ರಿಷಭ್ ಪಂತ್ ಅವರನ್ನು ಖರೀದಿಸಿತ್ತು. ಈ ಮೂಲಕ ಇವರು ಐಪಿಎಲ್ ಇತಿಹಾಸದ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಯನ್ನು ಸಹ ಪಡೆದರು. ಆದರೆ ಇವರ ಪ್ರದರ್ಶನ ಟೀಕೆಗೆ ಗುರಿಯಾಗಿದೆ. ಪಿಟಿಐ ವರದಿಯ ಪ್ರಕಾರ ಎಲ್‌ಎಸ್‌ಜಿ ಮುಂದಿನ ಆವೃತ್ತಿಗೆ ಬೇರೆ ನಾಯಕನ ಹುಡುಕಾಟದಲ್ಲಿದೆ ಎಂದು ತಿಳಿದು ಬಂದಿದೆ.

ಎಲ್‌ಎಸ್‌ಜಿ ಈ ಲೀಗ್‌ನಲ್ಲಿ ಆಡಿದ 11 ಪಂದ್ಯಗಳಲ್ಲಿ 3 ಜಯ, 8 ಸೋಲನ್ನು ಕಂಡಿದ್ದು, 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ಈ ಲೀಗ್‌ನಲ್ಲಿ ರಿಷಭ್ ಪಂತ್ ಸಹ ತಮ್ಮ ನೈಜ ಆಟವನ್ನು ಪ್ರದರ್ಶಿಸುವಲ್ಲಿ ವಿಫಲರಾಗಿದ್ದಾರೆ. ಪಂತ್ ಆಡಿದ 11 ಪಂದ್ಯಗಳಲ್ಲಿ 27ರ ಸರಾಸರಿಯಲ್ಲಿ 251 ರನ್ ಬಾರಿಸಿದ್ದಾರೆ. ಇದರಲ್ಲಿ 1 ಅರ್ಧಶತಕ ಸೇರಿದೆ. ಈ ವೇಳೆ 25 ಬೌಂಡರಿ, 9 ಸಿಕ್ಸರ್ ಸೇರಿವೆ. ಇವರ ಕಳಪೆ ಫಾರ್ಮ್ ಇವರನ್ನು ನಾಯಕತ್ವದಿಂದ ಕೈಬಿಡುವಂತೆ ಮಾಡುವ ಸಾಧ್ಯತೆ ಇದೆ.
ಡೆಲ್ಲಿ ಕ್ಯಾಪಿಟಲ್ಸ್
ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಹ ಈ ಆವೃತ್ತಿಯ ಆರಂಭದಲ್ಲಿ ಅಬ್ಬರದ ಪ್ರದರ್ಶನ ನೀಡಿತ್ತು. ಆದರೆ ಲೀಗ್ ಹಂತದ ಮಹತ್ವದ ಘಟ್ಟದಲ್ಲಿ ಡೆಲ್ಲಿ ಸಹ ಲಯವನ್ನು ಕಳೆದುಕೊಂಡಿದೆ. ಅಕ್ಷರ್ ಪಟೇಲ್ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ನಾಯಕರಾಗಿ ಅಕ್ಷರ್ ನಿರ್ಧಾರ ತೆಗೆದುಕೊಳ್ಳುವಲ್ಲಿ ಕೋಚ್ ಹೇಮಂಗ್ ಬದಾನಿ ಹಾಗೂ ವೇಣುಗೋಪಾಲ್ ರಾವ್ ಅವರನ್ನು ಅವಲಂಬಿಸಿದ್ದಾರೆ. ಹೀಗಾಗಿ ಇವರು ಸಹ ಮುಂದಿನ ಆವೃತ್ತಿಯಲ್ಲಿ ನಾಯಕತ್ವ ಉಳಿಸಿಕೊಳ್ಳುವುದು ಕಷ್ಟವಾಗಿದೆ ಎಂದು ಅಂಕಿ ಅಂಶಗಳು ತಿಳಿಸುತ್ತಿವೆ.

ಡೆಲ್ಲಿ ಇನ್ನು ಪ್ಲೇ ಆಫ್ ರೇಸ್‌ನಿಂದ ಅಧಿಕೃತವಾಗಿ ಹೊರ ಬಿದ್ದಿಲ್ಲ. ಆದರೆ ತಂಡದ ಪ್ರದರ್ಶನ ಸ್ಥಿರವಾಗಿಲ್ಲ. ಡಿಸಿ ಆಡಿದ 12 ಪಂದ್ಯಗಳಲ್ಲಿ 5 ಜಯ, 7 ಸೋಲು ಕಂಡಿದ್ದು, 10 ಅಂಕಗಳನ್ನು ಕಲೆ ಹಾಕಿದೆ. ಇನ್ನು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ತಮ್ಮ ಆಲ್‌ರೌಂಡರ್ ಆಟದಿಂದ ಗಮನ ಸೆಳೆದಿದ್ದ ಅಕ್ಷರ್ ಪಟೇಲ್ ನಾಯಕರಾಗಿ ತಂಡಕ್ಕೆ ಆಧಾರವಾಗಿಲ್ಲ. ಇವರು ಆಡಿದ 12 ಪಂದ್ಯಗಳಲ್ಲಿ 12ರ ಸರಾಸರಿಯಲ್ಲಿ 100 ರನ್ ಸಿಡಿಸಿದ್ದಾರೆ. ಈ ವೇಳೆ ಕಳೆದ ಪಂದ್ಯದಲ್ಲಿ ಬಾರಿಸಿದ ಒಂದು ಅರ್ಧಶತಕ ಸೇರಿದೆ. ಇನ್ನು ಬೌಲಿಂಗ್‌ನಲ್ಲಿ ಬಾಪು ಕೇವಲ 10 ವಿಕೆಟ್ ಪಡೆದಿದ್ದಾರೆ. ಈ ಅಂಕಿ ಅಂಶಗಳನ್ನು ನೋಡಿದರೆ ಅಕ್ಷರ್ ಅವರನ್ನು ನಾಯಕತ್ವದಿಂದ ಕೈ ಬಿಡುವ ಸಾಧ್ಯತೆ ಇದೆ ಎಂದು ಅನಿಸುತ್ತಿದೆ.
ಕೋಲ್ಕತ್ತಾ ನೈಟ್ ರೈಡರ್ಸ್
ಮಾಜಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ ಸಹ ಈ ಲೀಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಈ ವೇಳೆ ತಂಡದ ನಾಯಕರಾಗಿ ಅಜಿಂಕ್ಯ ರಹಾನೆ ಸಹ ನೀರಸ ಪ್ರದರ್ಶನ ನೀಡಿದ್ದಾರೆ. ಕೆಕೆಆರ್ ಸಹ ಇನ್ನು ಅಧಿಕೃತವಾಗಿ ಪ್ಲೇ ಆಫ್ ರೇಸ್‌ನಿಂದ ಹೊರ ಬಿದ್ದಿಲ್ಲ. ಆದರೆ ಈ ತಂಡದ ಪ್ರದರ್ಶನ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸುವಂತೆ ಮಾಡಿದೆ.
ಕೆಕೆಆರ್ ಆಡಿದ 11 ಪಂದ್ಯಗಳಲ್ಲಿ 4 ಜಯ, 6 ಸೋಲು ಕಂಡಿದ್ದು, 9 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇದೇ ವೇಳೆ ನಾಯಕ ಅಜಿಂಕ್ಯ ರಹಾನೆ ಅವರ ಪ್ರದರ್ಶನ ಸಹ ನೀರಸವಾಗಿದೆ. ಇವರು ಆಡಿದ 11 ಪಂದ್ಯಗಳಲ್ಲಿ 23ರ ಸರಾಸರಿಯಲ್ಲಿ 237 ರನ್ ಕಲೆ ಹಾಕಿದ್ದಾರೆ. ಇದರಲ್ಲಿ ಒಂದು ಅರ್ಧಶತಕ ಸೇರಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

