ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮ್ಯಾಚ್ ವಿನ್ನರ್ ಐಪಿಎಲ್ ಆರಂಭಿಕ ಪಂದ್ಯಗಳಿಗೆ ಅಲಭ್ಯ
19ನೇ ಆವೃತ್ತಿಯ ಐಪಿಎಲ್‌ಗೆ ಭರದ ಸಿದ್ಧತೆಗಳು ನಡೆದಿವೆ. ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಬಾರಿಗೆ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸು ಕಾಣುತ್ತಿದೆ. ತಂಡದಲ್ಲಿ ಸ್ಟಾರ್ ಆಟಗಾರರು ಇದ್ದು, ತಂಡದ ಮನೋಬಲವನ್ನು ಹೆಚ್ಚಿಸಿದೆ. ಆದರೆ ಈಗ ಬರುತ್ತಿರುವ ಸುದ್ದಿ ನಿಜಕ್ಕೂ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಚಿಂತೆಗೀಡು ಮಾಡಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮ್ಯಾಚ್ ವಿನ್ನರ್ ಒಬ್ಬರು ಐಪಿಎಲ್‌ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.
ಈ ಬಾರಿಯ ಐಪಿಎಲ್‌ನಲ್ಲಿ ಗಾಯಾಳುಗಳ ಪಟ್ಟಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ಪಟ್ಟಿಗೆ ಈಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಸೇರಿದ್ದಾರೆ. ಇವರು 19ನೇ ಆವೃತ್ತಿಯ ಐಪಿಎಲ್‌ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟ ಪಡಿಸಿದೆ. ಇವರು ಆರಂಭಿಕ ಪಂದ್ಯಗಳಿಗೆ ಲಭ್ಯರಿರದೇ ಇರುವುದು ನಿಶ್ಚಿತವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಪೆಟ್ಟು ನೀಡಿದಂತೆ ಆಗಿದೆ.

ಇನ್ನು ಮುಂದಿನ ದಿನಗಳಲ್ಲಿ ದೊಡ್ಡ ಪಂದ್ಯಗಳು ಇವೆ. ಅಲ್ಲದೆ ಈ ವೇಳೆ ಆಟಗಾರರ ಫಿಟ್ ಆಗಿರುವುದು ಮುಖ್ಯ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ನಂಬುತ್ತದೆ. ಮಿಚೆಲ್ ಸ್ಟಾರ್ಕ್ ಬಗ್ಗೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ, ವೇಗದ ಬೌಲರ್ ಅವರನ್ನು ಮತ್ತೆ ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
36 ವರ್ಷದ ಸ್ಟಾರ್ಕ್ ಬಗ್ಗೆ ಆಸ್ಟ್ರೇಲಿಯಾ ತಂಡದ ಆಡಳಿತ ಮಂಡಳಿ ಎಚ್ಚರಿಕೆ ವಹಿಸಲು ಬಯಸುತ್ತದೆ. ಇದಲ್ಲದೆ, ಸ್ಟಾರ್ಕ್ ಮುಂದಿನ ವರ್ಷವೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡುವ ನಿರೀಕ್ಷೆ ಇದೆ. ಅವರು ಸ್ಟಾರ್ಕ್‌ನೊಂದಿಗೆ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ತಿಳಿದು ಬಂದಿದೆ.

ಐಪಿಎಲ್ 2025 ರ ಋತುವಿನಲ್ಲಿ ಸ್ಟಾರ್ಕ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನವು ಡೆಲ್ಲಿ ಕ್ಯಾಪಿಟಲ್ಸ್ ಪರ 10 ಇನ್ನಿಂಗ್ಸ್‌ಗಳಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದರು. ಸ್ಟಾರ್ಕ್ ಜೊತೆಗೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಟಿ. ನಟರಾಜನ್, ಕೈಲ್ ಜೇಮಿಸನ್, ಅಕಿಬ್ ನಬಿ ದಾರ್ ಮತ್ತು ದುಷ್ಮಂತ ಚಮೀರ ಇತರ ವೇಗದ ಬೌಲರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಡೆಲ್ಲಿ ವೇಳಾಪಟ್ಟಿ
ಡೆಲ್ಲಿ ಕ್ಯಾಪಿಟಲ್ಸ್ ತಂಡ 19ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯವು ಲಕ್ನೋದಲ್ಲಿ ನಡೆಯಲಿದೆ. ಎರಡನೇ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನ ತವರು ಅಂಗಳದಲ್ಲಿ ಆಡಲಿದ್ದು, ಈ ಪಂದ್ಯ ಏಪ್ರಿಲ್ 4 ರಂದು ನಡೆಯಲಿದೆ. ಈ ಬಿಗ್ ಫೈಟ್‌ನಲ್ಲಿ ಡೆಲ್ಲಿ ತಂಡ, ಮುಂಬೈ ಇಂಡಿಯನ್ಸ್‌ಗೆ ಸವಾಲು ಎಸೆಯಲಿದೆ. ಮೂರನೇ ಪಂದ್ಯವನ್ನು ಸಹ ಡೆಲ್ಲಿ ತವರಿನಲ್ಲಿ ಆಡಲಿದ್ದು, ಏಪ್ರಿಲ್ 8 ರಂದು ನಡೆಯಲಿರುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಾದಾಟ ನಡೆಸಲಿದೆ. ಏಪ್ರಿಲ್ 11 ರಂದು ಡೆಲ್ಲಿ ತನ್ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications