IPL 2026: ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಯಾವುದು? ಇಲ್ಲಿದೆ ಮಾಹಿತಿ
19ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 28 ರಿಂದ ಆರಂಭವಾಗಲಿದೆ. ಈ ಲೀಗ್‌ನ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡಗಳ ನಡುವೆ ಕಾದಾಟ ನಡೆಸಲಿವೆ.
ಟಿ20 ಕ್ರಿಕೆಟ್ ಎಂದರೆ ಮೊದಲಿನಿಂದಲೂ ಬ್ಯಾಟರ್‌ಗಳ ಅಬ್ಬರ ಜೋರಾಗಿರುತ್ತದೆ. ಲೀಗ್‌ನಲ್ಲಿ ಬೌಂಡರಿ, ಸಿಕ್ಸರ್‌ಗಳನ್ನು ಬಾರಿಸಿ ಬ್ಯಾಟ್ಸ್‌ಮನ್ಸ್ ಸ್ಟಾರ್ ಗಿರಿ ಪಡೆದಿದ್ದಾರೆ. ಈ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡಗಳ ಪರಿಚಯ ಇಲ್ಲಿದೆ.

ಐಪಿಎಲ್‌ನಲ್ಲಿ ತಂಡವೊಂದು ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಸಲ್ಲುತ್ತದೆ. ಮುಂಬೈ ಈ ವರೆಗೆ ಲೀಗ್‌ನಲ್ಲಿ 1823 ಸಿಕ್ಸರ್ ಸಿಡಿಸಿದೆ. ಮುಂಬೈ ತಂಡದಲ್ಲಿ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್ (ಮಾಜಿ ಆಟಗಾರ) ಮತ್ತು ಹಾರ್ದಿಕ್ ಪಾಂಡ್ಯರಂತಹ ಬಿಗ್ ಹಿಟರ್‌ಗಳು ಇದ್ದಾರೆ. ಈ ಆಟಗಾರರ ಸ್ಥಿರ ಪ್ರದರ್ಶನದ ಫಲವಾಗಿ ಎಂಐ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ತಂಡ ಎಂಬ ದಾಖಲೆಯನ್ನು ಬರೆದಿದೆ.
ಆರ್‌ಸಿಬಿಗೆ ಎರಡನೇ ಸ್ಥಾನ
ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಆರ್‌ಸಿಬಿ ತಂಡ ಇದೆ. ಈ ತಂಡದ ಪರ ಸ್ಫೋಟಕ ಬ್ಯಾಟರ್‌ಗಳು ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ ಹೆಸರುವಾಸಿಯಾಗಿದ್ದಾರೆ. ಈ ಸಾಲಿನಲ್ಲಿ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್, ಕ್ರಿಸ್ ಗೇಲ್ ಅವರಂತಹ ಸ್ಫೋಟಕ ಬ್ಯಾಟರ್‌ಗಳು ಮುಗಿಲೆತ್ತರದ ಸಿಕ್ಸರ್‌ಗಳನ್ನು ಬಾರಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ಲೀಗ್‌ನಲ್ಲಿ ಆರ್‌ಸಿಬಿ ಒಟ್ಟಾರೆ 1,774 ಸಿಕ್ಸರ್ ಸಿಡಿಸಿದೆ.
ಐಪಿಎಲ್‌ನಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸಹ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ತಂಡ 18 ಆವೃತ್ತಿಗಳಲ್ಲಿ ಒಟ್ಟಾರೆ 1610 ಸಿಕ್ಸರ್ ಬಾರಿಸಿದೆ. ಈ ತಂಡದ ಪ್ರದರ್ಶನ ಇತ್ತೀಚಿನ ದಿನಗಳಲ್ಲಿ ಸ್ಥಿರವಾಗಿಲ್ಲ. ಹೀಗಾಗಿ ಚೆನ್ನೈ ಮೂರನೇ ಸ್ಥಾನದಲ್ಲಿದೆ. ಬಹು ವರ್ಷಗಳಿಂದ ಸ್ಫೋಟಕ ಬ್ಯಾಟರ್‌ಗಳನ್ನು ಹೊಂದಿದ್ದ ಚೆನ್ನೈ ಅಭಿಮಾನಿಗಳನ್ನು ರಂಜಿಸಿದೆ.
ಆದರೆ ಇತ್ತೀಚಿನ ದಿನಗಳಲ್ಲಿ ಸಿಕ್ಸರ್‌ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಸನ್‌ರೈಸರ್ಸ್ ತಂಡ ಕಳೆದ ಆವೃತ್ತಿಯಲ್ಲಿ 178 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ಪಂಜಾಬ್ 173 ಸಿಕ್ಸರ್‌ಗಳನ್ನು ಸಿಡಿಸಿದ ಹಿರಿಮೆ ಹೊಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications