IPL 2026: ಸಿಎಸ್‌ಕೆ ಪ್ಲೇಆಫ್ಸ್ ತಲುಪಿದರೆ ಮಾತ್ರ ಧೋನಿ ವಾಪಸ್: ಮೈಕ್ ಹಸ್ಸಿ
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡ ಈ ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಲೀಗ್ ಹಂತದ ಕೊನೆಯ ಪಂದ್ಯವನ್ನು ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಸಿಎಸ್‌ಕೆ ತಂಡದ ಐಕಾನಿಕ್ ಪ್ಲೇಯರ್ ಮಹೇಂದ್ರ ಸಿಂಗ್ ಧೋನಿ ಕಣಕ್ಕೆ ಇಳಿಯುತ್ತಾರಾ? ಎಂಬ ಪ್ರಶ್ನೆಗೆ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ದೊಡ್ಡ ಅಪ್‌ಡೇಟ್ ನೀಡಿದ್ದಾರೆ.
ಐಪಿಎಲ್ ಲೀಗ್ ಹಂತದ ಕೊನೆಯ ಪಂದ್ಯಕ್ಕೂ ಸಿಎಸ್‌ಕೆ ಪರ ಮಹೇಂದ್ರ ಸಿಂಗ್ ಧೋನಿ ಕಣಕ್ಕೆ ಇಳಿಯುವುದಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಅವರು, ಒಂದು ವೇಳೆ ಸಿಎಸ್‌ಕೆ ತಂಡ ಪ್ಲೇ ಆಫ್‌ಗೆ ಪ್ರವೇಶ ಪಡೆದರೆ, ತಂಡಕ್ಕೆ ಸೇರಿಕೊಳ್ಳುತ್ತಾರೆ ಎಂದು ಮೈಕ್ ಹಸ್ಸಿ ತಿಳಿಸಿದ್ದಾರೆ.

ಚೆನ್ನೈ ತವರಿನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಪ್ಲೇ ಆಫ್ ಪ್ರವೇಶಿಸುವುದು ಕಷ್ಟವಾಗಿದೆ. ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸಿಎಸ್‌ಕೆ ಗೆಲುವು ದಾಖಲಿಸಿದರೆ, ಮುಂದಿನ ತಂಡಗಳ ಫಲಿತಾಂಶವನ್ನು ಕಾದು ನೋಡಬೇಕಾಗುತ್ತದೆ. ಜಿಟಿ ವಿರುದ್ಧ ಸಿಎಸ್‌ಕೆ ಜಯ ಸಾಧಿಸಿದರೆ, 14 ಅಂಕಗಳನ್ನು ಕಲೆ ಹಾಕಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳುತ್ತದೆ.
ಮೈಕ್ ಹಸ್ಸಿ ಹೇಳಿದಿಷ್ಟು..
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮಾತನಾಡಿದ ಮೈಕ್ ಹಸ್ಸಿ, ಧೋನಿ ಅವರು ತಂಡದೊಂದಿಗೆ ಪ್ರಯಾಣ ಬೆಳೆಸಿಲ್ಲ. ಚೆನ್ನೈ ಪ್ಲೇ ಆಫ್‌ಗೆ ಪ್ರವೇಶ ಪಡೆದರೆ, ಧೋನಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇನ್ನು ಅವರ ಹೆಬ್ಬರಳಿನ ಗಾಯ ಚೇತರಿಸಿಕೊಂಡಿಲ್ಲ. ಹೀಗಾಗಿ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಧೋನಿ ಕಣಕ್ಕೆ ಇಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

ಎಸ್‌ಆರ್‌ಎಚ್ ವಿರುದ್ಧದ ಸೋಲಿನ ಬಗ್ಗೆಯೂ ಮಾತನಾಡಿರುವ ಮೈಕ್ ಹಸ್ಸಿ, ನಿಜಕ್ಕೂ ತವರಿನಲ್ಲಿ ಸೋತಿದ್ದು ಬೇಸರವಿದೆ. ತಂಡ ಈ ಸೋಲಿನಿಂದ ಪಾಠ ಕಲಿತಿದೆ. ನಮಗೆ ಲೀಗ್ ಹಂತದಲ್ಲಿ ಇನ್ನೊಂದು ಪಂದ್ಯ ಉಳಿದಿದೆ. ನಾವು ಈ ಅವಕಾಶವನ್ನು ಬಳಸಿಕೊಳ್ಳಲು ಯೋಜನೆ ರೂಪಿಸಿಕೊಂಡಿದ್ದೇವೆ. ನಾವು ಸಕಾರಾತ್ಮಕ ಮತ್ತು ಆತ್ಮವಿಶ್ವಾಸದ ಮನೋಭಾವದೊಂದಿಗೆ ಮೈದನಾಕ್ಕೆ ಇಳಿಯಲಿದ್ದೇವೆ. ನಾವು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಉತ್ಸುಕರಾಗಿದ್ದೇವೆ ಎಂದು ಮೈಕ್ ಹಸ್ಸಿ ತಿಳಿಸಿದ್ದಾರೆ.
ಚೆನ್ನೈ ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನ ಆರಂಭದಲ್ಲೇ ಗಾಯಕ್ಕೆ ತುತ್ತಾಗಿದ್ದರು. ಇವರು ಎರಡು ವಾರಗಳ ಕಾಲ ಮೈದಾನದಿಂದ ದೂರ ಉಳಿಯುತ್ತಾರೆ ಎಂದು ಆರಂಭದಲ್ಲಿ ಮ್ಯಾನೇಜ್ಮೆಂಟ್ ತಿಳಿಸಿತ್ತು. ಆದರೆ ಧೋನಿ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ. ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿ ಮಾಹಿ ಕಣಕ್ಕೆ ಇಳಿಯಬಹುದು ಎಂದು ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿತ್ತು. ಆದರೆ ಚೆನ್ನೈನಲ್ಲಿ ನಡೆದಿದ್ದ ತವರಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲೂ ಕಣಕ್ಕೆ ಇಳಿಯಲಿಲ್ಲ. ಚೆನ್ನೈ ಈ ಆವೃತ್ತಿಯ ಆರಂಭದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು, ಪ್ಲೇ ಆಫ್ ಪ್ರವೇಶಿಸಲು ಬೇರೆ ತಂಡಗಳ ಫಲಿತಾಂಶದ ಮೇಲೆ ಚಿತ್ತ ನೆಟ್ಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications