Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸ್ಟಾರ್‌ ಬ್ಯಾಟರ್‌ಗಳ ವೈಫಲ್ಯ: ಚೆನ್ನೈಗೆ 160 ರನ್‌ ಗುರಿ ನೀಡಿದ ಮುಂಬೈ

ಚೆನ್ನೈ: ಭರವಸೆಯ ಆಟಗಾರ ನಮನ್‌ ಧೀರ್ (57) ಅರ್ಧಶತಕ ಹಾಗೂ ಆರಂಭಿಕ ರಯಾನ್‌ ರಿಕಲ್ಟನ್‌ (37 ರನ್‌) ಇವರುಗಳ ಜವಾಬ್ದಾರಿಯುತ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್‌ 19ನೇ ಆವೃತ್ತಿ ಐಪಿಎಲ್‌ನ 44ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ 160 ರನ್‌ಗಳ ಗುರಿಯನ್ನು ನೀಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್‌ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆಯಿತು. ಈ ಲೀಗ್‌ನಲ್ಲಿ ಎರಡನೇ ಪಂದ್ಯವನ್ನು ಆಡುತ್ತಿರುವ ವಿಲ್ ಜಾಕ್ಸ್ ತಮ್ಮ ಸ್ಥಾನಕ್ಕೆ ನ್ಯಾಯ ಒದಗಿಸುವಲ್ಲಿ ಎಡವಿದರು. ಇವರು ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದರು. ಆದರೆ ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಲ್ ಜಾಕ್ಸ್ (1) ರನ್‌ ಕಲೆ ಹಾಕುವಲ್ಲಿ ವಿಫಲರಾದರು.

IPL 2026

ಎರಡನೇ ವಿಕೆಟ್‌ಗೆ ರಿಯಾನ್‌ ರಿಕಲ್ಟನ್‌ ಹಾಗೂ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ನಮನ್ ಧೀರ್ ಜೋಡಿ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿತು. ಈ ಜೋಡಿ ಪವರ್‌ ಪ್ಲೇನಲ್ಲಿ ವಿಕೆಟ್ ಬೀಳದಂತೆ ನೋಡಿಕೊಂಡಿತು. ಈ ಜೋಡಿ ಎರಡನೇ ವಿಕೆಟ್‌ಗೆ 32 ಎಸೆತಗಳಲ್ಲಿ 58 ರನ್‌ ಸೇರಿಸಿತು. ಈ ಹಂತದಲ್ಲಿ ಮುಂಬೈ ತಂಡದ ಆರಂಭಿಕ ಆಟಗಾರ ರಿಯಾನ್ ರಿಕಲ್ಟನ್‌ 5 ಸಿಕ್ಸರ್‌ ನೆರವಿನಿಂದ 37 ರನ್‌ ಸಿಡಿಸಿದರು.

ನಮನ್‌ ಧೀರ್ ಅರ್ಧಶತಕ

ಮೂರನೇ ವಿಕೆಟ್‌ಗೆ ನಮನ್‌ ಧೀರ್‌ ಹಾಗೂ ಸೂರ್ಯಕುಮಾರ್‌ ಯಾದವ್ ಜೋಡಿ ಸಹ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 24 ಎಸೆತಗಳಲ್ಲಿ 40 ರನ್‌ ಸೇರಿಸಿತು. ಭರವಸೆಯ ಬ್ಯಾಟರ್‌ ಸೂರ್ಯಕುಮಾರ್ ಯಾದವ್ 12 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 21 ರನ್‌ ಸಿಡಿಸಿತು. ಉಳಿದಂತೆ ಹಾರ್ದಿಕ್ ಪಾಂಡ್ಯ ಮಾತ್ರ ಡಬಲ್‌ ಡಿಜಿಟ್ ಮುಟ್ಟಿದರು.

ಭರವಸೆಯ ಬ್ಯಾಟರ್‌ ನಮನ್‌ ಧೀರ್ ಅಬ್ಬರಿಸಿದರು. ಇವರು 37 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 57 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ 159 ರನ್‌ ಸೇರಿಸಿತು. ಚೆನ್ನೈ ತಂಡದ ಪರ ಅನ್ಶುಲ್ ಕಾಂಬೋಜ್ 3, ನೂರ್‌ ಅಹ್ಮದ್‌ 2 ವಿಕೆಟ್‌ ಪಡೆದರು.

Story first published: Saturday, May 2, 2026, 21:46 [IST]
Other articles published on May 2, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+