IPL 2026: ಗುಜರಾತ್ ವಿರುದ್ಧದ ಕ್ವಾಲಿಫೈಯರ್‌ನಲ್ಲಿ ಫಿಲ್ ಸಾಲ್ಟ್ ಆಡುತ್ತಾರಾ? ಪಾಟಿದಾರ್ ಬಿಗ್ ಅಪ್‌ಡೇಟ್
ಐಪಿಎಲ್ 2026 ರ ಪ್ಲೇಆಫ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್ ಟೈಟಾನ್ಸ್ (ಜಿಟಿ) ತಂಡಗಳು ಕಾದಾಟ ನಡೆಸಲಿವೆ. ಆರ್‌ಸಿಬಿ ತಂಡದ ಸ್ಟಾರ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಕೆಲವು ಪಂದ್ಯಗಳಿಗೆ ಅಲಭ್ಯರಾಗಿದ್ದು, ಈಗ ಇವರ ಗಾಯದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ಗೂ ಮೊದಲು, ನಾಯಕ ರಜತ್ ಪಾಟಿದಾರ್ ಸಾಲ್ಟ್ ಅವರ ಫಿಟ್ನೆಸ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದು, ಆರ್‌ಸಿಬಿ ಅಭಿಮಾನಿಗಳಿಗೆ ಖುಷಿ ನೀಡಿದೆ.
ಲೀಗ್ ಹಂತದಲ್ಲಿ ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತ್ತು. ಆದರೆ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ತಂಡವು ಹೀನಾಯ ಸೋಲನುಭವಿಸಿತ್ತು. ಈಗ ತಂಡದ ಚಿತ್ತ ಗುಜರಾತ್ ಟೈಟನ್ಸ್ ವಿರುದ್ಧದ ಕ್ವಾಲಿಫೈಯರ್-1 ಕಡೆಗೆ ನೆಟ್ಟಿದ್ದು, ಈ ಪಂದ್ಯದಲ್ಲಿ ಗೆದ್ದು ನೇರವಾಗಿ ಫೈನಲ್ ಪ್ರವೇಶಿಸುವ ಆಸೆ ಆರ್‌ಸಿಬಿ ತಂಡದ್ದಾಗಿದೆ.

ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ಫಿಲ್ ಸಾಲ್ಟ್ ಸಂಪೂರ್ಣ ಫಿಟ್ ಆಗಿದ್ದಾರೆ. ಅಲ್ಲದೆ ಅಭ್ಯಾಸವನ್ನು ಸಹ ಪ್ರಾರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ. ಆಡುವ ಹನ್ನೊಂದರ ಬಳಗದಲ್ಲಿ ಅವರಿಗೆ ಸ್ಥಾನ ನೀಡುವ ಬಗ್ಗೆ ಮ್ಯಾನೇಜ್ಮೆಂಟ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಸಾಲ್ಟ್ ಆಡುತ್ತಾರಾ?
ಸಾಲ್ಟ್ ಫಿಟ್ ಆಗಿದ್ದಾರೆ. ವೈದ್ಯರು ಅವರ ಮೇಲೆ ನಿಗಾ ಇಟ್ಟಿದ್ದಾರೆ. ಅವರು ಅಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ. ಅವರ ಫಿಟ್ನೆಸ್ ಬಗ್ಗೆ ಇನ್ನು ಸರಿಯಾದ ತೀರ್ಮಾನ ಬಂದಿಲ್ಲ. ಹೀಗಾಗಿ ನಾವು ಪ್ಲೇಯಿಂಗ್ ಇಲೆವೆನ್ ನಿರ್ಧರಿಸಿಲ್ಲ. ಅಲ್ಲದೆ ಧರ್ಮಶಾಲಾ ಪಿಚ್ ನೋಡಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ನಾಯಕ ರಜತ್ ಪಾಟಿದಾರ್ ಸ್ಪಷ್ಟಪಡಿಸಿದರು.
ಫಿಲ್ ಸಾಲ್ಟ್ ಅವರು ಏಪ್ರಿಲ್ 18 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಈ ಗಾಯದ ಕಾರಣ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ಚಿಕಿತ್ಸೆಗಾಗಿ ಸ್ವದೇಶಕ್ಕೆ ಮರಳಬೇಕಾಯಿತು. ಪ್ಲೇಆಫ್‌ಗೆ ಮುನ್ನ ಅವರು ತಂಡಕ್ಕೆ ಮರಳುವ ನಿರೀಕ್ಷೆಯಿತ್ತು. ಆದರೆ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯಕ್ಕೆ ಮುನ್ನ ನಡೆದ ಅಭ್ಯಾಸದಲ್ಲಿ ಅವರು ತಂಡದೊಂದಿಗೆ ಕಾಣಿಸಿಕೊಂಡಿರಲಿಲ್ಲ.
ಭರ್ಜರಿ ಬ್ಯಾಟಿಂಗ್
ಫಿಲ್ ಸಾಲ್ಟ್ ಅವರ ಮರಳುವುದು ಆರ್‌ಸಿಬಿ ಬ್ಯಾಟಿಂಗ್ ವಿಭಾಗಕ್ಕೆ ಹೊಸ ಬಲ ನೀಡಲಿದೆ. ಈ ಸೀಸನ್‌ನಲ್ಲಿ ಅವರು ಪವರ್‌ಪ್ಲೇನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿ, ಅನೇಕ ಪಂದ್ಯಗಳಲ್ಲಿ ತಂಡಕ್ಕೆ ಅದ್ಭುತ ಆರಂಭ ನೀಡಿದ್ದಾರೆ. ಅವರ ವೇಗದ ಬ್ಯಾಟಿಂಗ್ ಆರ್‌ಸಿಬಿ ಅಗ್ರ 2 ಸ್ಥಾನಗಳನ್ನು ತಲುಪಲು ಪ್ರಮುಖ ಪಾತ್ರ ವಹಿಸಿತ್ತು. ಸಾಲ್ಟ್ ಅನುಪಸ್ಥಿತಿಯಲ್ಲಿ, ಬ್ಯಾಟ್ ಮಾಡಿದ ಜಾಕೊಬ್ ಬೆಥೆಲ್ ಸಹ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆಡುವಾಗ ಬೆರಳಿಗೆ ಗಾಯಮಾಡಿಕೊಂಡಿದ್ದರು. ಹೀಗಾಗಿಯೇ ಅವರು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಅಂತಿಮ ಲೀಗ್ ಪಂದ್ಯದಲ್ಲಿಯೂ ಆಡಲು ಸಾಧ್ಯವಾಗಲಿಲ್ಲ.
ಸಾಲ್ಟ್ ಅನುಪಸ್ಥಿತಿಯಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 257 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಸೋಲು ಕಂಡಿತು. ವಿರಾಟ್ ಕೊಹ್ಲಿ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿಯನ್ನು ವೆಂಕಟೇಶ್ ಅಯ್ಯರ್‌ಗೆ ನೀಡಲಾಗಿತ್ತು. ಅಯ್ಯರ್ ಕೇವಲ 19 ಎಸೆತಗಳಲ್ಲಿ 44 ರನ್ ಗಳಿಸಿ ಉತ್ತಮ ಆರಂಭ ನೀಡಿದರೂ, ತಂಡ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಒಂದು ವೇಳೆ ಫಿಲ್ ಸಾಲ್ಟ್ ಕ್ವಾಲಿಫೈಯರ್-1 ಪಂದ್ಯಕ್ಕೆ ಸಂಪೂರ್ಣ ಫಿಟ್ ಆದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications