IPL 2026: ಮೊದಲ ಗೆಲುವಿನ ಹುಡುಕಾಟದಲ್ಲಿ ಪಂಜಾಬ್, ಗುಜರಾತ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕಳೆದ ಬಾರಿಯ ರನ್ನರ್ ಅಪ್ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು 19ನೇ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಕಳೆದ ಬಾರಿ ಮಾಡಲಾಗದ ಸಾಧನೆಯನ್ನು ಪಂಜಾಬ್ ಪ್ಲ್ಯಾನ್ ಮಾಡಿಕೊಂಡಿದೆ. ಉಭಯ ತಂಡಗಳಲ್ಲೂ ಸ್ಟಾರ್ ಆಟಗಾರರು ಇದ್ದು ರೋಚಕತೆ ಹೆಚ್ಚಿಸಿದೆ.
ಉಭಯ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ ಆರು ಬಾರಿ ಮುಖಾಮುಖಿಯಾಗಿದ್ದು, ಮೂರು ಪಂದ್ಯಗಳನ್ನು ಪಂಜಾಬ್ ಗೆದ್ದರೆ, 3 ಪಂದ್ಯಗಳನ್ನು ಗುಜರಾತ್ ಗೆದ್ದಿದೆ. ಎರಡೂ ತಂಡದಲ್ಲಿ ಯುವ ಆಟಗಾರರ ದಂಡೇ ಇದೆ. ಈ ಯುವ ಆಟಗಾರರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ಬಾರಿ ಗುಜರಾತ್ ಟೈಟಾನ್ಸ್ ಲೀಗ್ ಹಂತದ ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿತ್ತು. ಆದರೆ ಕೊನೆಯಲ್ಲಿ ಕೊಂಚ ಎಡವಿದ್ದರಿಂದ ಪಾಯಿಂಟ್ಸ್ ಟೇಬಲ್‌ನಲ್ಲಿ 3ನೇ ಸ್ಥಾನಕ್ಕೆ ತೃಪ್ತಿ ಪಟ್ಟಿತ್ತು. ಈ ಬಾರಿ ಪ್ರಶಸ್ತಿ ಎತ್ತುವ ಕನಸಿನೊದಿಗೆ ಗುಜರಾತ್ ಕಣಕ್ಕೆ ಇಳಿಯಲಿದೆ.

ಶ್ರೇಯಸ್ ಆಕರ್ಷಣೆ
ಪಂಜಾಬ್ ತಂಡದ ಟಾಪ್ ಆರ್ಡರ್‌ನಲ್ಲಿ ಯುವ ಆಟಗಾರರು ಇದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಪ್ರಭ್‌ಸಿಮ್ರಾನ್ ಸಿಂಗ್ ಹಾಗೂ ಪ್ರಿಯಾಂಶ್ ಆರ್ಯ ಕಳೆದ ಆವೃತ್ತಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಈ ಬಾರಿಯೂ ಇವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ಇವರು ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿರುವ ಆಟಗಾರ. ಯುವ ಆಟಗಾರ ಶಶಾಂಕ್ ಸಿಂಗ್ ಫಿನಿಷರ್ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು. ಇವರು ಬಿರುಸಿನ ಬ್ಯಾಟಿಂಗ್‌ಗೆ ಹೆಸರುವಾಸಿ.

ಆಲ್‌ರೌಂಡರ್ ರೂಪದಲ್ಲಿ ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್‌ಜಾಯ್ ಕಣಕ್ಕೆ ಇಳಿಯುವುದು ಬಹುತೇಕ ಖಚಿತ. ಈ ತಂಡದ ವೇಗದ ಬೌಲಿಂಗ್ ಬಲಿಷ್ಠವಾಗಿದೆ. ಮಾರ್ಕೊ ಜಾನ್ಸೆನ್, ಅರ್ಶ್‌ದೀಪ್ ಸಿಂಗ್ ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಬಲ್ಲರು. ಇನ್ನು ಸ್ಪಿನ್ ಬೌಲರ್ ಆಗಿ ಯುಜವೇಂದ್ರ ಚಾಹಲ್ ಇದ್ದು, ಎದುರಾಳಿಗಳ ಗೇಮ್ ಪ್ಲ್ಯಾನ್ ಧ್ವಂಸ ಮಾಡಬಲ್ಲರು.
ಅನುಭವಿಗಳೇ ಬಲ
ನಾಯಕ ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಟಾಪ್ ಆರ್ಡರ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಅನುಭವಿ ಜೋಸ್ ಬಟ್ಲರ್ ಬ್ಯಾಟ್ ಮಾಡುವ ಸಾಧ್ಯತೆ ಇದೆ. ಆಲ್‌ರೌಂಡರ್ ರೂಪದಲ್ಲಿ ವಾಷಿಂಗ್ಟನ್ ಸುಂದರ್, ಜೇಸನ್ ಹೋಲ್ಡರ್, ರಾಹುಲ್ ತೆವಾಟಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವುದು ಖಚಿತ. ಮಧ್ಯಮ ಕ್ರಮಾಂಕದಲ್ಲಿ ಶಾರೂಖ್ ಖಾನ್ ಬ್ಯಾಟ್ ಮಾಡಲಿದ್ದಾರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಕಗಿಸೋ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣಾ ಕಾಣಿಸಿಕೊಳ್ಳಿದ್ದು, ವಿಶ್ವದ ಶ್ರೇಷ್ಠ ಸ್ಪಿನ್ ಬೌಲರ್ ರಶೀದ್ ಖಾನ್ ಎದುರಾಳಿಗಳನ್ನು ಕಾಡಬಲ್ಲರು.
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್
ಪಂದ್ಯದ ಸಮಯ: ಸಂಜೆ 7.30ಕ್ಕೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications