IPL 2026: ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಭೀತಿ: ಹವಾಮಾನ ಇಲಾಖೆ ಹೇಳೋದೇನು?
RR Vs MI IPL 2026: ಸೋಮವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿತ್ತು. ಇದರ ಬೆನ್ನಲ್ಲೇ ಈಗ ಗುವಾಹಟಿಯಲ್ಲಿ ಮಂಗಳವಾರ ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೂ ಮಳೆಯ ಭೀತಿ ಎದುರಾಗಿದೆ. ಹವಾಮಾನ ಇಲಾಖೆ ಹೇಳೋದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ಮಳೆಯಿಂದ ಕೆಕೆಆರ್ ಮತ್ತು ಪಿಬಿಕೆಎಸ್ ನಡುವಿನ ಪಂದ್ಯ ರದ್ದಾಗಿತ್ತು. ಈಗ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೂ ಇದೇ ರೀತಿಯ ಭೀತಿ ಎದುರಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವು ಪ್ರಸ್ತುತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಒಂದು ವೇಳೆ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದರೆ ಅಗ್ರಸ್ಥಾನಕ್ಕೇರಲಿದೆ.

ಹವಾಮಾನ ಇಲಾಖೆ ಹೇಳೋದೇನು?
ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವು ಮಂಗಳವಾರ (ಏಪ್ರಿಲ್ 7) ಗುವಾಹಟಿಯ ಬರ್ಸಾಪಾರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಗುವಾಹಟಿಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಶೇಕಡ 50ಕ್ಕಿಂತ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಾರ್ದಿಕ್ ಪಾಂಡ್ಯ ಕಮ್‌ಬ್ಯಾಕ್
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಸೋತ ನಂತರ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಇಳಿದಿದೆ. ಐಪಿಎಲ್ 2026ರ ಅಭಿಯಾನವನ್ನು ಮುಂಬೈ ತಂಡವು ಕೆಕೆಆರ್ ವಿರುದ್ಧದ ಗೆಲುವಿನೊಂದಿಗೆ ಆರಂಭಿಸಿತ್ತು. ಇನ್ನೂ ಅನಾರೋಗ್ಯದ ಕಾರಣದಿಂದಾಗಿ ಎಂಐ ನಾಯಕ ಹಾರ್ದಿಕ್ ಪಾಂಡ್ಯ ಡೆಲ್ಲಿ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಆದರೆ, ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಆಡುವ 11 ಬಳಗಕ್ಕೆ ಮರಳಲು ಸಿದ್ಧರಿದ್ದಾರೆ ಎಂದು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಅವರು ಈಗಾಗಲೇ ಖಚಿತಪಡಿಸಿದ್ದಾರೆ.
ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ
ಆದರೆ, ಗುವಾಹಟಿಯಲ್ಲಿ ಭಾಗಶಃ ಮೋಡ ಕವಿದ ವಾವಾತಾವರಣವಿರಲಿದ್ದು, ತಡರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಟ್ಟಾರೆಯಾಗಿ ಮಂಗಳವಾರದಂದು ಗುವಾಹಟಿಯಲ್ಲಿ ಮಳೆಯಾಗುವ ಸಾಧ್ಯತೆ ಶೇಕಡ 75 ರಷ್ಟಿದೆ. ಭಾರೀ ಮಳೆ ಮುಂದುವರೆದರೆ, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಈ ಪಂದ್ಯವು ರದ್ದಾಗಬಹುದು.
ಈ ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದ್ದು, ಟಾಸ್ ವೇಳೆ ಮಳೆಯ ಪ್ರಭಾವ ಕಡಿಮೆಯಾಗುವ ನಿರೀಕ್ಷೆಯಿದೆ. ನಿನ್ನೆ ಅಂದರೆ ಸೋಮವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಕೆಕೆಆರ್ ಮತ್ತು ಪಿಬಿಕೆಎಸ್ ಪಂದ್ಯವು ಕೇವಲ 3.4 ಓವರ್‌ಗಳ ನಂತರ ಮಳೆಯಿಂದಾಗಿ ಅಂತಿಮವಾಗಿ ರದ್ದಾಯಿತು. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಇಂದಿನ ಪಂದ್ಯದ ಬಗ್ಗೆ ಆತಂಕದಲ್ಲಿದ್ದಾರೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ನಡೆಯದಿದ್ದರೆ, ಎರಡೂ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications