IPL 2026: ಎರಡನೇ ಪ್ರಶಸ್ತಿ ಕನಸಿನಲ್ಲಿ ಆರ್‌ಸಿಬಿ, ಗುಜರಾತ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಹತ್ವದ ಘಟ್ಟಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್, ಕ್ವಾಲಿಫೈಯರ್ ಪಂದ್ಯಗಳು ಮುಗಿದಿದ್ದು, ಭಾನುವಾರ ಅಹಮದಾಬಾದ್‌ನಲ್ಲಿ ಫೈನಲ್ ಹಣಾಹಣಿ ನಡೆಯಲಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಗುಜರಾತ್ ಟೈಟಾನ್ಸ್ (ಜಿಟಿ) ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದು, ಪ್ರಶಸ್ತಿ ಗೆಲ್ಲುವ ಕನಸು ಕಾಣುತ್ತಿದೆ.
ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ ಅಮೋಘ ಪ್ರದರ್ಶನ ನೀಡಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿತು. ಈ ವೇಳೆ 92 ರನ್‌ಗಳಿಂದ ಗುಜರಾತ್ ತಂಡವನ್ನು ಮಣಿಸಿದ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದಿದೆ. ಈ ಬಾರಿಯ ಐಪಿಎಲ್‌ಗೆ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆ ಆರ್‌ಸಿಬಿ ತಂಡದ್ದಾಗಿದೆ.

ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲು ಕಂಡಿರುವ ಗುಜರಾತ್ ಟೈಟಾನ್ಸ್, ಶುಕ್ರವಾರ ನಡೆದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೊಗಸಾದ ಪ್ರದರ್ಶನ ನೀಡಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿ ಆರ್ಭಟಿಸಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ಫೈನಲ್ ಪ್ರವೇಶಿಸಿದೆ.
ಈ ಬಾರಿ ಯಾರೇ ಗೆದ್ದರೂ ಇತಿಹಾಸ
ಈ ಬಾರಿಯ ಐಪಿಎಲ್ ಫೈನಲ್‌ಗೆ ಸ್ಥಾನ ಪಡೆದಿರುವ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಲ್ಲಿ ಯಾರೇ ಗೆದ್ದರೂ ಇತಿಹಾಸ ನಿರ್ಮಾಣವಾಗಲಿದೆ. ಉಭಯ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ ತಲಾ ಒಂದು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿವೆ. ಆರ್‌ಸಿಬಿ ಸತತ ಎರಡನೇ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ.
ಆರ್‌ಸಿಬಿ 2025ರಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರೆ, ತಾನಾಡಿದ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ಟ್ರೋಫಿ ಎತ್ತಿ ಇತಿಹಾಸ ನಿರ್ಮಿಸಿತ್ತು. ಹೀಗಾಗಿ ಭಾನುವಾರ ಯಾವ ತಂಡ ಪ್ರಶಸ್ತಿ ಗೆದ್ದರೂ ಇತಿಹಾಸ ನಿರ್ಮಿಸಲಿದೆ. ಆರ್‌ಸಿಬಿ ಕಳೆದ ಆವೃತ್ತಿಯಲ್ಲಿ ನೀಡಿದ ಪ್ರದರ್ಶನವನ್ನೇ ಈ ಬಾರಿಯೂ ನೀಡುವ ವಿಶ್ವಾಸವನ್ನು ಹೊಂದಿದೆ. ಐಪಿಎಲ್‌ನಲ್ಲಿ ಆರ್‌ಸಿಬಿ ಐದನೇ ಬಾರಿ ಫೈನಲ್ ಪ್ರವೇಶಿಸಿದ್ದು, 2ನೇ ಬಾರಿ ಟ್ರೋಫಿ ಗೆಲ್ಲುವ ಕನಸಿನಲ್ಲಿದೆ. ಗುಜರಾತ್ ಟೈಟಾನ್ಸ್ ತಂಡ ಮೂರನೇ ಬಾರಿ ಐಪಿಎಲ್ ಫೈನಲ್‌ಗೆ ಅರ್ಹತೆ ಪಡೆದಿದ್ದು, ಮತ್ತೊಂದು ಪ್ರಶಸ್ತಿಯ ಹುಡುಕಾಟದಲ್ಲಿದೆ.
ಈ ಬಾರಿ ಐಪಿಎಲ್ ಚಾಂಪಿಯನ್ ಯಾರ ಪಾಲಾಗುತ್ತದೆ ಎಂಬ ಪ್ರಶ್ನೆಗೆ ಭಾನುವಾರ ರಾತ್ರಿಯ ವೇಳೆಗೆ ಉತ್ತರ ಸಿಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications