Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB Champions: ಐಪಿಎಲ್‌ ಟ್ರೋಫಿ ಡಿಫೆಂಡ್ ಮಾಡಿಕೊಂಡ ಆರ್‌ಸಿಬಿ ಇತಿಹಾಸ

ಅಹಮದಾಬಾದ್: ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ( ಐಪಿಎಲ್) ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿತು. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಆರ್‌ಸಿಬಿ ಸಂಘಟಿತ ಆಟದ ಪ್ರದರ್ಶನ ನೀಡಿ ಆರ್ಭಟಿಸಿತು. ಆರಂಭದಲ್ಲಿ ಬೌಲಿಂಗ್‌ನಲ್ಲಿ ಬಿಗುವಿನ ದಾಳಿ ನಡೆಸಿದ ಆರ್‌ಸಿಬಿ, 156 ರನ್‌ಗಳನ್ನು ಬೆನ್ನಟ್ಟುವಾಗ ಸ್ಥಿರ ಪ್ರದರ್ಶನ ನೀಡಿ ಸತತ ಎರಡನೇ ಬಾರಿಗೆ ಐಪಿಎಲ್‌ ಟ್ರೋಫಿಯನ್ನು ಗೆದ್ದುಕೊಂಡು ಬೀಗಿತು. ಈ ಮೂಲಕ ಆರ್‌ಸಿಬಿ ಇತಿಹಾಸ ನಿರ್ಮಿಸಿತು.

ಸತತ ಐಪಿಎಲ್‌ ಟ್ರೋಫಿಯನ್ನು ಡಿಫೆಂಡ್ ಮಾಡಿಕೊಂಡ ಮೂರನೇ ತಂಡ ಎಂಬ ಹೆಗ್ಗಳಿಕೆ ಆರ್‌ಸಿಬಿ ತಂಡದ್ದಾಯಿತು. ಇದಕ್ಕೂ ಮೊದಲು ಈ ಸಾಧನೆಯನ್ನು ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ತಂಡಗಳು ಈ ಸಾಧನೆಯನ್ನು ಮಾಡಿದ್ದವು. ಈಗ ಈ ಸಾಧನೆಯನ್ನು ಮಾಡಿದ ಹೆಗ್ಗಳಿಕೆ ಆರ್‌ಸಿಬಿ ತಂಡದ್ದಾಗಿದೆ.

RCB Champions

ಪಂದ್ಯದ ಆರಂಭದಲ್ಲಿ ಟಾಸ್‌ ಗೆದ್ದು ಬೀಗಿದ್ದ ಆರ್‌ಸಿಬಿ ಬೌಲಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ಆರ್‌ಸಿಬಿ ತಂಡ ಪವರ್‌ ಪ್ಲೇನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕರಾದ ಶುಭಮನ್ ಗಿಲ್ (10), ಸಾಯಿ ಸುದರ್ಶನ್‌ (12) ರನ್‌ ಬಾರಿಸುವಲ್ಲಿ ವಿಫಲರಾದರು. ಪರಿಣಾಮ ಆರ್‌ಸಿಬಿ ಆರಂಭದಲ್ಲಿ ಮೇಲುಗೈ ಸಾಧಿಸಿತು. ಬಳಿಕ ಬಂದ ಯಾವೊಬ್ಬ ಬ್ಯಾಟರ್‌ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಸತತ ಜಿಟಿ ಬ್ಯಾಟರ್‌ಗಳ ತಂತ್ರವನ್ನು ಮೆಟ್ಟಿನಿಂತು ಬೌಲ್ ಮಾಡಿದ ಆರ್‌ಸಿಬಿ ವಿಕೆಟ್‌ ಬೇಟೆ ನಡೆಸಿತು.

ರಸಿಕ್‌ ಸಲಾಂ ಅಬ್ಬರ

ಗುಜರಾತ್ ಟೈಟಾನ್ಸ್ ತಂಡದ ಪರ ಯಾವೊಬ್ಬ ಬ್ಯಾಟರ್‌ ನೆಲಕಚ್ಚಿನಿಂತು ಬ್ಯಾಟ್ ಮಾಡಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್‌ ಸುಂದರ್‌ 37 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 50 ರನ್‌ ಸಿಡಿಸಿ ತಂಡಕ್ಕೆ ಆಧಾರವಾದರು. ಅಂತಿಮವಾಗಿ ಟೈಟಾನ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 155 ರನ್‌ ಸೇರಿಸಿತು. ಆರ್‌ಸಿಬಿ ತಂಡದ ಪರ ರಸಿಕ್‌ ಸಲಾಂ ದರ್‌ 3, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್ ತಲಾ 2 ವಿಕೆಟ್‌ ಕಬಳಿಸಿದರು.

ಪವರ್‌ ಫುಲ್ ಆರಂಭ

ಗುಜರಾತ್ ಟೈಟಾನ್ಸ್ ತಂಡ ನೀಡಿದ್ದ 156 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಆರ್‌ಸಿಬಿ ಬ್ಯಾಟರ್‌ಗಳು ಸಫಲರಾದರು. ಆರಂಭಿಕರಾದ ವೆಂಕಟೇಶ್‌ ಅಯ್ಯರ್‌ ಹಾಗೂ ವಿರಾಟ್‌ ಕೊಹ್ಲಿ ಆರಂಭದಲ್ಲಿ ಸಮಯೋಚಿತ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾದರು. ಈ ಜೊಡಿ ಮೊದಲ ವಿಕೆಟ್‌ಗೆ 4.3 ಓವರ್‌ಗಳಲ್ಲಿ 62 ರನ್‌ ಸೇರಿಸಿತು. ಈ ಹಂತದಲ್ಲಿ ಇಂಪ್ಯಾಕ್ಟ್‌ ಪ್ಲೇಯರ್ ಆಗಿ ಬಂದ ವೆಂಕಟೇಶ್ ಅಯ್ಯರ್ ಅಮೋಘ ಬ್ಯಾಟಿಂಗ್ ನಡೆಸಿ ಔಟ್ ಆದರು. ಇವರು 16 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 32 ರನ್‌ ಸಿಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್‌ (1) ಕಗಿಸೋ ರಬಾಡ ಅವರಿಗೆ ವಿಕೆಟ್‌ ಒಪ್ಪಿಸಿದರು.

ಡಬಲ್‌ ಶಾಕ್‌

ಇನಿಂಗ್ಸ್‌ನ 9ನೇ ಓವರ್‌ನ ಬೌಲ್‌ ಮಾಡಿದ ರಶೀದ್ ಖಾನ್‌ ಆರ್‌ಸಿಬಿ ತಂಡದ ಬ್ಯಾಟರ್‌ಗಳಿಗೆ ಕಾಡಿದರು. ಸ್ಪಿನ್ ಬೌಲರ್‌ಗಳ ವಿರುದ್ಧ ಅಮೋಘ ಬ್ಯಾಟ್ ಮಾಡುವ ರಜತ್ ಪಾಟಿದಾರ್‌ ಬಿಗ್ ಹಿಟ್ ಬಾರಿಸಲು ಹೋಗಿ ಬೌಂಡರಿ ಲೈನ್‌ನಲ್ಲಿ ಕಗಿಸೊ ರಬಾಡ್‌ಗೆ ಕ್ಯಾಚ್ ನೀಡಿದರು. ಪಾಟಿದಾರ್ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಕೃನಾಲ್ ಪಾಂಡ್ಯ ಅವರಿಗೂ ಸಹ ರಶೀದ್ ಖಾನ್‌ ಖೆಡ್ಡಾ ತೋಡಿದರು.

ಆದರೆ ಆರ್‌ಸಿಬಿ ತಂಡದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 75 ರನ್ ಬಾರಿಸಿ ತಂಡದ ಜಯದಲ್ಲಿ ಮಿಂಚಿದರು. ಆರ್‌ಸಿಬಿ ಅಂತಿಮವಾಗಿ 18 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 161 ರನ್‌ ಸೇರಿಸಿ ಜಯ ಸಾಧಿಸಿತು.

Story first published: Sunday, May 31, 2026, 23:26 [IST]
Other articles published on May 31, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+