Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಷರತ್ತುಗಳೊಂದಿಗೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್‌ ಆಡಲು ಸರ್ಕಾರದ ಅನುಮತಿ

ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಟಿ20 ವಿಶ್ವಕಪ್‌ ಆಯೋಜಿಸುತ್ತಿದ್ದು, ಈ ಪಂದ್ಯಗಳು ನಡೆಯುತ್ತಿವೆ. ಈ ಮೆಗಾ ಟೂರ್ನಿ ಮುಗಿದ ಬಳಿಕ ಭಾರತದಲ್ಲಿ ಶ್ರೀಮಂತ ಕ್ರಿಕೆಟ್‌ ಲೀಗ್ ಆರಂಭವಾಗಲಿದೆ. ಈ ಲೀಗ್‌ನಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಆಡುತ್ತದೋ ಇಲ್ಲವೋ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಗುರುವಾರ (ಫೆ.12) ನಡೆದ ಸಚಿವ ಸಂಪುಟ ಸಭೆಯ ನಂತರ, ಕರ್ನಾಟಕ ರಾಜ್ಯ ಸರ್ಕಾರವು ಕೆಲವು ಷರತ್ತುಗಳನ್ನು ವಿಧಿಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಲು ಆರ್‌ಸಿಬಿ ಫ್ರಾಂಚೈಸಿಗೆ ಅನುಮತಿ ನೀಡಿದೆ.

ಫೆಬ್ರವರಿ 12 ರಂದು ನಡೆದ ಸಚಿವ ಸಂಪುಟ ಸಭೆಯ ನಂತರ, ಕರ್ನಾಟಕ ರಾಜ್ಯ ಸರ್ಕಾರವು ಕೆಲವು ಷರತ್ತು ವಿಧಿಸಿ ಐಪಿಎಲ್‌ ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿಸಲು ಗ್ರೀನ್‌ ಸಿಗ್ನಲ್ ನೀಡಿದೆ. ಈ ಮೂಲಕ ಆರ್‌ಸಿಬಿ ಫ್ರಾಂಚೈಸಿಗಳ ಸ್ಥಳ ಹುಡುಕಾಟದ ಗೊಂದಲಕ್ಕೆ ತೆರೆ ಬಿದ್ದಿದೆ. ರಾಜ್ಯ ಸರ್ಕಾರದ ಈ ಸುದ್ದಿ ನಿಜಕ್ಕೂ ಆರ್‌ಸಿಬಿ ಅಭಿಮಾನಿಗಳಿಗೆ ಹಾಗೂ ಮ್ಯಾನೇಜ್ಮೆಂಟ್‌ಗೆ ಖುಷಿ ನೀಡಿದೆ.

IPL 2026

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ತಾವು ಅಧಿಕಾರ ವಹಿಸಿಕೊಂಡಾಗಿನಿಂದಲೂ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿಸುತ್ತೇವೆ ಎಂದು ತಿಳಿಸುತ್ತಿದ್ದರು. ಕೆಎಸ್‌ಸಿಎ ಸತತ ಪರಿಶ್ರಮದ ಫಲವಾಗಿ ಆರ್‌ಸಿಬಿ ಈ ಬಾರಿ ಐಪಿಎಲ್‌ ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆಡಲಿದೆ. ಫೆಬ್ರವರಿ 12 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಬಿಸಿಸಿಐ ಐಪಿಎಲ್ 2026 ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಕರ್ನಾಟಕ ರಾಜ್ಯ ಸರ್ಕಾರ ಐಪಿಎಲ್‌ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿದೆ. ಆದರೆ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನ್ಯಾ.ಕುಹ್ನಾ ವರದಿಯಲ್ಲಿ ವಿವರಿಸಿರುವ ಕೆಲವು ಷರತ್ತುಗಳಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸಮಿತಿ ನೀಡಿದ ವರದಿಯ ಆಧಾರದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಆರ್‌ಸಿಬಿ ಮ್ಯಾನೇಜ್ಮೆಂಟ್‌ ಟೆನ್ಷನ್‌ ಫಿನಿಷ್

ಕರ್ನಾಟಕ ರಾಜ್ಯ ಸರ್ಕಾರ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್‌ ಪಂದ್ಯಗಳನ್ನು ಆಡಿಸಲು ಅನುಮತಿ ನೀಡಿದ ಬಳಿಕ ಆರ್‌ಸಿಬಿ ಮ್ಯಾನೇಜ್ಮೆಂಟ್‌ ನಿರಾಳವಾಗಿದೆ. ಸರ್ಕಾರ ಒಂದು ವೇಳೆ ಅನುಮತಿ ನೀಡದೇ ಇದ್ದಲ್ಲಿ ಆರ್‌ಸಿಬಿ ತವರು ಪಂದ್ಯಗಳನ್ನು ಯಾವ ಮೈದಾನದಲ್ಲಿ ಆಡಲಿದೆ ಎಂಬ ಪ್ರಶ್ನೆಗಳು ಉದ್ಭವಿಸಿತ್ತು. ಅಲ್ಲದೆ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಸಹ ನವಿ ಮುಂಬೈನಲ್ಲಿರುವ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮತ್ತು ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಶಾರ್ಟ್‌ಲಿಸ್ಟ್ ಮಾಡಿತ್ತು. ಆದರೆ ಈಗ ಐಪಿಎಲ್‌ ಪಂದ್ಯಗಳನ್ನು ಚಿನ್ನಸ್ವಾಮಿ ಮೈದಾನದಲ್ಲಿ ನಡೆಸಲು ಅನುಮತಿ ನೀಡಲಾಗಿದ್ದು, ಮ್ಯಾನೇಜ್ಮೆಂಟ್‌ಗೆ ಸಮಾಧಾನ ತಂದಿದೆ.

Story first published: Thursday, February 12, 2026, 22:39 [IST]
Other articles published on Feb 12, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+