RCB vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ: ಗ್ರೀನ್ ಜೆರ್ಸಿಯಲ್ಲಿ ಕಣಕ್ಕೆ ಇಳಿದ ಆರ್‌ಸಿಬಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ 26ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಿಸಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತವರಿನಲ್ಲಿ ಆರ್‌ಸಿಬಿ ಮೊದಲ ಬ್ಯಾಟ್ ಮಾಡುವ ಅವಕಾಶವನ್ನು ಪಡೆದಿದೆ. ಡಿಸಿ ತಂಡದಲ್ಲಿರುವ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಅವರ ಆಟವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.
ಆರ್‌ಸಿಬಿ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿದ 5 ಪಂದ್ಯಗಳಲ್ಲಿ 4 ಜಯ, 1 ಸೋಲು ಕಂಡಿದ್ದು, 8 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಆಡಿದ 4 ಪಂದ್ಯಗಳಲ್ಲಿ 2 ಜಯ, 2 ಸೋಲು ಕಂಡಿದ್ದು, 4 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ.

100ನೇ ಪಂದ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತವರು ಮೈದಾನ ಎಂ ಚಿನ್ನಸ್ವಾಮಿ ಮೈದಾನ ಶನಿವಾರ ಮತ್ತೊಂದು ದಾಖಲೆ ನಿರ್ಮಿಸಿದೆ. ಐಪಿಎಲ್ ಲೀಗ್‌ನಲ್ಲಿ ಒಟ್ಟಾರೆಯಾಗಿ 100ನೇ ಪಂದ್ಯಕ್ಕೆ ಆತಿಥ್ಯ ನೀಡಲಿದೆ. ಈ ಮೂಲಕ ಚಿನ್ನಸ್ವಾಮಿ ಮೈದಾನ ಇತಿಹಾಸ ನಿರ್ಮಿಸಿದೆ.
ದಾಖಲೆಯ ಮೇಲೆ ವಿರಾಟ್ ಕಣ್ಣು
ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಒಂದು ಸಿಕ್ಸರ್ ಬಾರಿಸುತ್ತಲೇ ದೊಡ್ಡ ದಾಖಲೆಯನ್ನು ಬರೆಯಲಿದ್ದಾರೆ. ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಈಗಾಗಲೇ 299 ಸಿಕ್ಸರ್ ಬಾರಿಸಿದ್ದಾರೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಒಂದು ಸಿಕ್ಸರ್ ಬಾರಿಸುತ್ತಲೇ ವಿರಾಟ್ ದೊಡ್ಡ ದಾಖಲೆಯನ್ನು ಬರೆಯಲಿದ್ದಾರೆ. ಈ ಮೊದಲು ಕ್ರಿಸ್ ಗೇಲ್, ರೋಹಿತ್ ಶರ್ಮಾ ಈ ದಾಖಲೆಯನ್ನು ನಿರ್ಮಿಸಿದ್ದಾರೆ.
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಪತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಆಕಿಬ್ ನಬಿ, ಲುಂಗಿ ಎನ್ಗಿಡಿ, ಕುಲದೀಪ್ ಯಾದವ್, ಟಿ. ನಟರಾಜನ್, ಮುಕೇಶ್ ಕುಮಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications