IPL 2026 RCB vs SRH: ಪಂದ್ಯದ ಸಮಯ, ನೇರಪ್ರಸಾರ, ಹವಾಮಾನದ ವರದಿ, ಪ್ಲೇಯಿಂಗ್ ಇಲೆವೆನ್ ಮಾಹಿತಿ
ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್ ) 19ನೇ ಆವೃತ್ತಿ ಶನಿವಾರದಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಶುಭಾರಂಭ ಮಾಡುವ ಕನಸು ಆರ್‌ಸಿಬಿ ತಂಡದ್ದಾಗಿದೆ.
ಈ ಪಿಚ್‌ನಲ್ಲಿ ಬ್ಯಾಟರ್‌ಗಳಿಗೆ ಅನುಕೂಲವಾಗಲಿದೆ. ಕಳೆದ ಮೂರು ಆವೃತ್ತಿಯಲ್ಲಿ ಮೊದಲ ಬ್ಯಾಟ್ ಮಾಡಿದ ತಂಡ 194 ರನ್ ಗಳಿಸಿದ್ದು ವಿಶೇಷ. ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ತಂಡಗಳು ಈಗಾಗಲೇ 25 ಬಾರಿ ಮುಖಾಮುಖಿಯಾಗಿವೆ. ಆರ್‌ಸಿಬಿ 11, ಎಸ್‌ಆರ್‌ಎಚ್ 13 ಪಂದ್ಯಗಳನ್ನು ಗೆದ್ದಿವೆ. ಆರ್‌ಸಿಬಿ ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಿದರೆ, ಸನ್ ತಂಡದ ನಾಯಕತ್ವವನ್ನು ಇಶಾನ್ ಕಿಶನ್ ವಹಿಸಿಕೊಂಡಿದ್ದಾರೆ. ಈ ಪಂದ್ಯದ ಬಗ್ಗೆ ಕೆಲವು ಉಪಯುಕ್ತ ಮಾಹಿತಿ ಇಲ್ಲಿದೆ.

ಪಿಚ್ ವರದಿ
ಐಪಿಎಲ್ 2026ರ ಉದ್ಘಾಟನಾ ಪಂದ್ಯವು ಮಧ್ಯದ ಪಿಚ್‌ನಲ್ಲಿ ನಡೆಯಲಿದೆ. ಈ ಪಿಚ್‌ನ್ನು ಬ್ಯಾಟಿಂಗ್ ಸ್ವರ್ಗ ಎಂದೇ ಕರೆಯಲಾಗುತ್ತದೆ. ಕಳೆದ ಒಂದು ವರ್ಷದಿಂದ ಈ ಮೈದಾನದಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ. ಹೀಗಾಗಿ ಪಿಚ್ ಹೇಗೆ ವರ್ತಿಸುತ್ತದೆ ಎಂಬುದೇ ಕುತೂಹಲ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಿದ್ದು, ಪಂದ್ಯದ ಸಮಯದಲ್ಲಿ ತಾಪಮಾನವು ಸುಮಾರು 25°C ನಿಂದ 29°C ವರೆಗೆ ಇರುವ ಸಾಧ್ಯತೆಯಿದೆ. ಇಬ್ಬನಿ ಬೀಳುವ ಸಾಧ್ಯತೆ ಇಲ್ಲ. ಹೀಗಾಗಿ ಟಾಸ್ ಗೆದ್ದವರು ಏನು ಮಾಡುತ್ತಾರೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಹೇಗಿರಲಿದೆ ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್?
ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಾಕೋಬ್ ಬೆಥೆಲ್/ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜಾಕೋಬ್ ಡಫಿ, ರಸಿಖ್ ಸಲಾಮ್.
ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಯಾರಿಗೆ ಸಿಗಬಹುದು ಅವಕಾಶ?
ಇಶಾನ್ ಕಿಶನ್ (ನಾಯಕ, ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಲಿಯಾಮ್ ಲಿವಿಂಗ್‌ಸ್ಟೋನ್/ಈಶಾನ್ ಮಾಲಿಂಗ, ಸಲೀಲ್ ಅರೋರಾ, ಅನಿಕೇತ್ ವರ್ಮಾ, ಹರ್ಷ್ ದುಬೆ, ಬ್ರೈಡನ್ ಕಾರ್ಸ್, ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್.
ಪ್ರಮುಖ ಅಂಕಿ ಅಂಶಗಳು
- ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 29 ರನ್ ಬಾರಿಸುವಲ್ಲಿ ಯಶಸ್ವಿಯಾದರೆ, ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಬಡ್ತಿ ಪಡೆಯಲಿದ್ದಾರೆ. ವಿರಾಟ್ ಕೊಹ್ಲಿ ಸದ್ಯ ಟಿ20 ಕ್ರಿಕೆಟ್‌ನಲ್ಲಿ ಆಡಿದ 414 ಪಂದ್ಯಗಳಲ್ಲಿ 13543 ರನ್ ಕಲೆ ಹಾಕಿದ್ದಾರೆ. ಶೋಯೆಬ್ ಮಲಿಕ್ 13571 ರನ್ ಸಿಡಿಸಿದ್ದಾರೆ.
ಎಲೈಟ್ ಕ್ಲಬ್ ಸೇರುವ ಕನಸಿನಲ್ಲಿ ಆರ್‌ಸಿಬಿ: ಐಪಿಎಲ್ ಇತಿಹಾಸದಲ್ಲಿ 2 ತಂಡಗಳಿಂದ ಈ ಸಾಧನೆ - ಮೊದಲ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆಯುವಲ್ಲಿ ಸಫಲರಾದರೆ, ಐಪಿಎಲ್‌ನಲ್ಲಿ 200 ವಿಕೆಟ್ ಪೂರೈಸಿದ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಲಿದ್ದಾರೆ.
ಐಪಿಎಲ್ ಉದ್ಘಾಟನಾ ಪಂದ್ಯವನ್ನು ಎಲ್ಲಿ ನೋಡಬಹುದು?
19ನೇ ಆವೃತ್ತಿಯ ಐಪಿಎಲ್ ಉದ್ಘಾಟನ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ಕಾದಾಟವನ್ನು ನಡೆಸಲಿದ್ದು, ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹುದು. ಅಲ್ಲದೆ ಆನ್‌ಲೈನ್‌ನಲ್ಲಿ ಜಿಯೋ ಹಾಟ್ ಸ್ಟಾರ್‌ನಲ್ಲಿ ವೀಕ್ಷಿಸಬಹುದು.
ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ನಡುವಣ ಪಂದ್ಯ ಆರಂಭವಾಗುವುದು ಯಾವಾಗ?
19ನೇ ಆವೃತ್ತಿಯ ಮೊದಲ ಪಂದ್ಯ ಸಂಜೆ 7.30ಕ್ಕೆ ನಡೆಯಲಿದೆ. ಪಂದ್ಯಕ್ಕೂ ಅರ್ಧಗಂಟೆ ಮುಂಚಿತವಾಗಿ ಟಾಸ್ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications