ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಆರಂಭವಾಗಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಆರಂಭವನ್ನು ಮಾಡುವ ಆಸೆ ಬೆಂಗಳೂರು ತಂಡದ್ದಾಗಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿದೆ.
ಬೆಂಗಳೂರು ತಂಡದ ಪರ ಅಭಿನಂದನ್ ಸಿಂಗ್ ಅವರು ಆಡುವ ಅವಕಾಶವನ್ನು ಪಡೆದಿದ್ದಾರೆ. 28 ವರ್ಷದ ಬಲಗೈ ವೇಗದ ಬೌಲರ್ ಅಭಿನಂದನ್ ಸಿಂಗ್ ಮೊದಲ ಬಾರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ.

ವಿದೇಶಿ ಆಟಗಾರರ ಕೋಟಾದಲ್ಲಿ ಆರಂಭಿಕ ಫಿಲ್ ಸಾಲ್ಟ್ ಕಾಣಿಸಿಕೊಳ್ಳಲಿದ್ದಾರೆ. ಆಲ್‌ರೌಂಡರ್ ಸ್ಥಾನದಲ್ಲಿ ಟೀಮ್ ಡೇವಿಡ್, ರೋಮಾರಿಯೋ ಶೆಫರ್ಡ್ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲರ್ ಜಾಕಬ್ ಡಫಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಈ ಪಿಚ್ ಹೇಗೆ ವರ್ತಿಸುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಕಳೆದ ವೃತ್ತಿಯಲ್ಲಿ ನೀಡಿದ ಪ್ರದರ್ಶನ ಖುಷಿ ನೀಡಿದೆ. ನಾವು ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಮೈದಾನಕ್ಕೆ ಇಳಿಯುತ್ತಿಲ್ಲ. ಬದಲಿಗೆ ಐಪಿಎಲ್ 2026ರಲ್ಲೂ ನಾವು ಗೆಲ್ಲುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುಮಾರು ತಿಂಗಳುಗಳ ಬಳಿಕ ಕ್ರಿಕೆಟ್ ಪಂದ್ಯಗಳು ನಡೆಯುತ್ತಿವೆ. ಕಳೆದ ಬಾರಿ ಆರ್‌ಸಿಬಿ ಐಪಿಎಲ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಜೂನ್ 4 ರಂದು ಆರ್‌ಸಿಬಿ ಮ್ಯಾನೇಜ್ಮೆಂಟ್ ಚಿನ್ನಸ್ವಾಮಿಯಲ್ಲಿ ಅಭಿಮಾನಗಳೊಂದಿಗೆ ಸಂಭ್ರಮಾಚರಣೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಈ ವೇಳೆ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು. ಅಂದಿನಿಂದ ಈ ವರೆಗೆ ಬೆಂಗಳೂರಿನಲ್ಲಿ ಪಂದ್ಯಗಳು ನಡೆದಿಲ್ಲ. ಈಗ ಮತ್ತೆ ಬೆಂಗಳೂರಿನಲ್ಲಿ ಕ್ರಿಕೆಟ್ ಹಬ್ಬ ಆರಂಭವಾಗಲಿದೆ.
ಕಾಲ್ತುಳಿತದಲ್ಲಿ ಸಾವನ್ನಪಿದವರ ಗೌರವಾರ್ಥ ಬಿಸಿಸಿಐ ಉದ್ಘಾಟನಾ ಸಮಾರಂಭವನ್ನು ಸಹ ರದ್ದುಗೊಳಿಸಿದೆ. ಅಲ್ಲದೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಪ್ರತಿ ಪಂದ್ಯದಲ್ಲೂ 11 ಆಸನಗಳನ್ನು ಖಾಲಿ ಬಿಡಲು ನಿರ್ಧರಿಸಿದೆ.
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ, ಟೀಮ್ ಡೇವಿಡ್, ರೋಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕಬ್ ಡಫಿ, ಸೂಯಶ್ ಶರ್ಮಾ
ಎಸ್‌ಆರ್‌ಎಚ್ ತಂಡ: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ ಮತ್ತು ವಿಕೆಟ್ ಕೀಪರ್), ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಅನಿಕೇತ್ ವರ್ಮಾ, ಸಲಿಲ್ ಅರೋರಾ, ಹರ್ಷ್ ದುಬೆ, ಎಶಾನ್ ಮಾಲಿಂಗ, ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್.