IPL 2026: ಯಶಸ್ವಿ ಜೈಸ್ವಾಲ್ ಅಬ್ಬರಕ್ಕೆ ನಲುಗಿದ ಮುಂಬೈ, ರಾಯಲ್ಸ್‌ಗೆ ಹ್ಯಾಟ್ರಿಕ್ ಜಯ
ಗುವಾಹಟಿ: ತವರಿನ ಅಭಿಮಾನಿಗಳ ಸಮ್ಮುಖದಲ್ಲಿ ರಾಜಸ್ಥಾನ ರಾಯಲ್ಸ್ ಅಬ್ಬರ ನಡೆಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಬ್ಯಾಟಿಂಗ್‌ನಲ್ಲಿ ಆರ್ಭಟ ನಡೆಸಿದರೆ, ಬಳಿಕ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿ 19ನೇ ಆವೃತ್ತಿಯ ಐಪಿಎಲ್ ನಲ್ಲಿ ರಿಯಾನ್ ಪರಾಗ್ ಪಡೆ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದೆ. ರಾಜಸ್ಥಾನ್ ರಾಯಲ್ಸ್ ಇದಕ್ಕೂ ಮೊದಲು ಗುಜರಾತ್ ಟೈಟಾನ್ಸ್, ಸಿಎಸ್‌ಕೆ ವಿರುದ್ಧ ಮೊದಲ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ ಅಬ್ಬರಿಸಿತ್ತು.
ಮಳೆ ಬಾಧಿತ ಪಂದ್ಯವನ್ನು 11 ಓವರ್‌ಗಳಿಗೆ ಇಳಿಸಲಾಯಿತು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರರು ಭರ್ಜರಿ ಬ್ಯಾಟಿಂಗ್ ನಡೆಸಿದರು. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಜೋಡಿ ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಯಿತು. ಈ ಜೋಡಿ 3.2 ಓವರ್‌ಗಳ ಪವರ್ ಪ್ಲೇನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಯಿತು. ಈ ಜೋಡಿ 4.6 ಓವರ್‌ಗಳಲ್ಲಿ 80 ರನ್ ಸೇರಿಸಿತು. ಈ ವೇಳೆ ವೈಭವ್ ಸೂರ್ಯವಂಶಿ 1 ಬೌಂಡರಿ, 5 ಸಿಕ್ಸರ್ ಸಹಾಯದಿಂದ 39 ರನ್ ಬಾರಿಸಿ ಔಟ್ ಆದರು. ಈ ವೇಳೆ ಇವರ ಸ್ಟ್ರೈಕ್ ರೇಟ್ 278 ಆಗಿತ್ತು.

ಯಶಸ್ವಿ ಜೈಸ್ವಾಲ್ ಆಕರ್ಷಣೆ
ಮೂರನೇ ಕ್ರಮಾಂಕದಲ್ಲಿ ಧ್ರುವ್ ಜುರೇಲ್ (2) ತಂಡಕ್ಕೆ ನೆರವಾಗಲಿಲ್ಲ. ನಾಯಕ ರಿಯಾನ್ ಪರಾಗ್ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡಿ 20 ರನ್ ಬಾರಿಸಿ ಔಟ್ ಆದರು. ಯಶಸ್ವಿ ಜೈಸ್ವಾಲ್ ತಮ್ಮ ಭರ್ಜರಿ ಲಯವನ್ನು ಮುಂದುವರೆಸಿದರು. ಇವರು ಎರಡನೇ ಬಾರಿಗೆ 50ಕ್ಕೂ ಹೆಚ್ಚು ರನ್ ಬಾರಿಸಿದ ಸಾಧನೆ ಮಾಡಿದರು. ಇವರು 32 ಎಸೆತಗಳಲ್ಲಿ 10 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 77 ರನ್ ಸಿಡಿಸಿದರು. ಅಂತಿಮವಾಗಿ ರಾಜಸ್ಥಾನ ರಾಯಲ್ಸ್ 11 ಓವರ್‌ಗಳಲ್ಲಿ 3 ವಿಕೆಟ್‌ಗೆ 150 ರನ್ ಸಿಡಿಸಿತು.
ರನ್ ಕಲೆ ಹಾಕುವಲ್ಲಿ ಪರದಾಟ
ಸ್ಪರ್ಧಾತ್ಮಕ ಮೊತ್ತವನ್ನು ಹಿಂಬಾಲಿಸಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಕಳಪೆಯಾಗಿತ್ತು. ಪವರ್ ಪ್ಲೇನಲ್ಲಿ ರನ್ ವೇಗಕ್ಕೆ ಚುರುಕು ಮುಟ್ಟಿಸಲು ಹೋಗಿ ವಿಕೆಟ್ ಕೈ ಚೆಲ್ಲಿತು. ಅನುಭವಿ ಬ್ಯಾಟರ್‌ಗಳಾದ ರಿಯಾನ್ ರಿಕಲ್ಟನ್, ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಹಾಗೂ ಅನುಭವಿ ರೋಹಿತ್ ಶರ್ಮಾ ಬಿಗ್ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಈ ಸ್ಟಾರ್ ಆಟಗಾರರು ಪವರ್ ಪ್ಲೇ (3.2 ಓವರ್)ನಲ್ಲಿ ಪೆವಿಲಿಯನ್ ಸೇರಿದರು.
ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ತಿಲಕ್ ವರ್ಮಾ ಜವಾಬ್ದಾರಿಯುತ ಆಟವನ್ನು ಆಡುವಲ್ಲಿ ವಿಫಲರಾದರು. ಇವರು 10 ಎಸೆತಗಳಲ್ಲಿ 2 ಬೌಂಡರಿ ನೆರವಿನಿಂದ 14 ರನ್ ಬಾರಿಸಿ ಅಬ್ಬರಿಸಿತು. ಮುಂಬೈ ಪರ ನಮನ್ ಧೀರ್ (25) ಹಾಗೂ ಶೆರ್ಫೇನ್ ರುದರ್ಫೋರ್ಡ್ (25) ಮಾತ್ರ ಕೊಂಚ ಆರ್‌ಆರ್ ಬೌಲರ್‌ಗಳನ್ನು ಕಾಡಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್ 11 ಓವರ್‌ಗಳಲ್ಲಿ 9 ವಿಕೆಟ್‌ಗೆ 124 ರನ್ ಸೇರಿಸಿತು. ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ 27 ರನ್‌ಗಳಿಂದ ಜಯ ಸಾಧಿಸಿತು.
ರಾಜಸ್ಥಾನ್ ರಾಯಲ್ಸ್ ತಂಡದ ಪರ ನಾಂಡ್ರಿ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯಿ ತಲಾ 2 ವಿಕೆಟ್ ಕಬಳಿಸಿದರು. ಈ ಗೆಲುವಿನ ಮೂಲಕ ರಾಜಸ್ಥಾನ್ ರಾಯಲ್ಸ್ ಈ ಬಾರಿ ಐಪಿಎಲ್‌ನಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications