For Quick Alerts
ALLOW NOTIFICATIONS  
For Daily Alerts
 

IPL 2026: ಭರ್ಜರಿ ಸಿಕ್ಸರ್ ಸಿಡಿಸಿ ಫೀಲ್ಡರ್‌ಗೆ ಕ್ಯಾಚ್ ಸವಾಲು ಹಾಕಿದ ಹಿಟ್‌ಮ್ಯಾನ್

ಐಪಿಎಲ್‌ನಲ್ಲಿ ದಾಖಲೆಯ ಬಾರಿ ಪ್ರಶಸ್ತಿಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್‌ಗೂ ಸ್ಥಾನ. ಕಳೆದ ಆವೃತ್ತಿಯಲ್ಲಿ ಮುಂಬೈ ನಿರಾಸೆ ಅನುಭವಿಸಿತ್ತು. ಆದರೆ ಈ ಬಾರಿ ಶಕ್ತಿ ಮೀರಿ ಪ್ರಯತ್ನಿಸಲು ಮುಂಬೈ ಪ್ಲ್ಯಾನ್ ಮಾಡಿಕೊಂಡಿದೆ. ಈ ವೇಳೆ ಅನುಭವಿ ಹಾಗೂ ಯುವ ಆಟಗಾರರು ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ಸಹ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.

ಮುಂಬೈನಲ್ಲಿ ಅಭ್ಯಾಸ ಆರಂಭಿಸಿದ ರೋಹಿತ್ ಶರ್ಮಾ ತಮ್ಮ ನೈಜ ಶೈಲಿಯಲ್ಲಿ ಬ್ಯಾಟ್ ಮಾಡಿದರು. ಇವರು ಅಭ್ಯಾಸ ಸಮಯದಲ್ಲಿ ಬಿಗ್ ಹಿಟ್‌ಗಳನ್ನು ಬಾರಿಸಿ, ನಂತರ ಕ್ಯಾಚ್‌ಗೆ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

IPL 2026

ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನಡೆಸಲಿವೆ. ಮುಂಬೈ ಇಂಡಿಯನ್ಸ್ ತಂಡ ಮಾರ್ಚ್ 29 ರಂದು ಕಣಕ್ಕೆ ಇಳಿಯಲಿದೆ. ಈ ವೇಳೆ ಹಾರ್ದಿಕ್ ಪಾಂಡ್ಯ ಪಡೆ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಕಣಕ್ಕೆ ಇಳಿಯಲಿದೆ. ಈ ವೇಳೆ ಎಲ್ಲರ ಕಣ್ಣುಗಳು ಅನುಭವಿ ರೋಹಿತ್ ಶರ್ಮಾ ಅವರ ಮೇಲೆ ನೆಟ್ಟಿರಲಿವೆ.

ರೋಹಿತ್‌ ಶರ್ಮಾ ಮುಂಬೈ ಇಂಡಿಯನ್ಸ್‌ ಪರ ನಾಯಕರಾಗಿ ಅಲ್ಲ ಒಬ್ಬ ಆಟಗಾರರಾಗಿ ಕಣಕ್ಕೆ ಇಳಿಯಲಿದ್ದಾರೆ. ಇತ್ತೀಚೆಗೆ ಅವರ ಫಿಟ್‌ನೆಸ್ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ, ಆದರೆ ಈಗ ಅವರು ಅದರ ಮೇಲೆ ಗಮನಾರ್ಹವಾಗಿ ಕೆಲಸ ಮಾಡಿದ್ದಾರೆಂದು ತೋರುತ್ತದೆ. ಇವರು ಐಪಿಎಲ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಮುಂಬೈ ಇಂಡಿಯನ್ಸ್‌ನ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ರೋಹಿತ್ ಶರ್ಮಾ ಶಾರ್ದೂಲ್ ಠಾಕೂರ್ ಅವರ ಚೆಂಡನ್ನು ಸಿಕ್ಸರ್‌ಗೆ ಅಟ್ಟಿದರು.

ರೋಹಿತ್‌ ಚೆಂಡನ್ನು ಬಾರಿಸುತ್ತಲೇ ಚೆಂಡನ್ನು ಕ್ಯಾಚ್ ಹಿಡಿಯಬೇಕಾಗಿತ್ತು ಎಂದು ತಿಳಿಸಿದ್ದಾರೆ. ಇಷ್ಟೇ ಅಲ್ಲದೆ ಈ ಕ್ಯಾಚ್‌ ಹೇಗೆ ಪಡೆಯಬಹುದಾಗಿತ್ತು ಎಂಬುದನ್ನು ತಿಳಿಸಿದ್ದಾರೆ. ಈ ವೀಡಿಯೊ ಈಗ ಅಭಿಮಾನಿಗಳನ್ನು ಸೆಳೆಯುತ್ತಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡವು 2020 ರಲ್ಲಿ ಪ್ರಶಸ್ತಿಯನ್ನು ಗೆದ್ದಿತು. ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಮುಂಬೈ ಪ್ರಶಸ್ತಿಯನ್ನು ಪಡೆದಿಲ್ಲ. ಈ ಬಾರಿಯಾದರೂ ಪ್ರಶಸ್ತಿ ಬರ ನೀಗುತ್ತಾ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ರೋಹಿತ್ ಶರ್ಮಾ ಸಾಧನೆ

38 ವರ್ಷದ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 272 ಪಂದ್ಯಗಳನ್ನು ಆಡಿದ್ದು, 29ರ ಸರಾಸರಿಯಲ್ಲಿ 7046 ರನ್‌ ಕಲೆ ಹಾಕಿದ್ದಾರೆ. ಇದರಲ್ಲಿ 2 ಶತಕ, 47 ಅರ್ಧಶತಕ ಬಾರಿಸಿದ್ದಾರೆ. ಅಲ್ಲದೆ 640 ಬೌಂಡರಿ, 302 ಸಿಕ್ಸರ್ ಸಿಡಿಸಿದ್ದಾರೆ.

ಮುಂಬೈ ಇಂಡಿಯನ್ಸ್ ವೇಳಾಪಟ್ಟಿ

ಮಾರ್ಚ್ 29, ಕೆಕೆಆರ್‌, ಮುಂಬೈ
ಏಪ್ರಿಲ್‌ 4, ಡೆಲ್ಲಿ ಕ್ಯಾಪಿಟಲ್ಸ್‌, ನವದೆಹಲಿ
ಏಪ್ರಿಲ್‌ 7, ರಾಜಸ್ಥಾನ ರಾಯಲ್ಸ್‌, ಗುವಾಹಟಿ
ಏಪ್ರಿಲ್ 12, ಆರ್‌ಸಿಬಿ, ಮುಂಬೈ

Story first published: Tuesday, March 17, 2026, 17:40 [IST]
Other articles published on Mar 17, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+