IPL 2026: ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್, ಬಟ್ಲರ್ ಅರ್ಧಶತಕದ ಬಲ
ನವದೆಹಲಿ: ನಾಯಕ ಶುಭಮನ್ ಗಿಲ್ (70) ಹಾಗೂ ಭರವಸೆಯ ಆಟಗಾರರಾದ ಜೋಸ್ ಬಟ್ಲರ್, ವಾಷಿಂಗ್ಟನ್ ಸುಂದರ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟಾನ್ಸ್ 19ನೇ ಆವೃತ್ತಿಯ ಐಪಿಎಲ್‌ನ 14ನೇ ಪಂದ್ಯ ಗೆಲ್ಲಲು 211 ರನ್‌ಗಳ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೀಡಿದೆ.
ಕಳೆದ ಆವೃತ್ತಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಸಾಯಿ ಸುದರ್ಶನ್ ಈ ಬಾರಿ ರನ್ ಕಲೆ ಹಾಕುವಲ್ಲಿ ವಿಫಲರಾದರು. ಇವರು 12 ರನ್ ಬಾರಿಸಿ ಮುಕೇಶ್ ಕುಮಾರ್ ಅವರಿಗೆ ವಿಕೆಟ್ ಒಪ್ಪಿಸಿದರು. ಇವರು ಔಟ್ ಆದಾಗ ಗುಜರಾತ್ ತಂಡದ ಮೊತ್ತ 19 ಆಗಿತ್ತು.

ಸಂಕಷ್ಟದಲ್ಲಿದ್ದ ತಂಡಕ್ಕೆ ಗಿಲ್ ಹಾಗೂ ಜೋಸ್ ಬಟ್ಲರ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ ವಿಕೆಟ್ ಕಾಯ್ದುಕೊಳ್ಳುವುದಲ್ಲದೆ ರನ್ ವೇಗಕ್ಕೆ ಚುರುಕು ಮುಟ್ಟಿಸುವಲ್ಲಿ ಸಫಲರಾದರು. ಈ ಜೋಡಿ 60 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಜೋಸ್ ಬಟ್ಲರ್ ದೊಡ್ಡ ಮೊತ್ತದ ಕಾಣಿಕೆ ನೀಡಿದರು. ಈ ಪಂದ್ಯದಲ್ಲಿ ಬಟ್ಲರ್ 27 ಎಸೆತಗಳಲ್ಲಿ 3 ಬೌಂಡರಿ, 5 ಸಿಕ್ಸರ್ ಸಹಾಯದಿಂದ 52 ರನ್ ಸಿಡಿಸಿದರು. ಈ ವೇಳೆ ಇವರ ಸ್ಟ್ರೈಕ್ ರೇಟ್ 192 ಆಗಿತ್ತು.
ಗಿಲ್ ಅರ್ಧಶತಕ
ಮೂರನೇ ವಿಕೆಟ್‌ಗೆ ನಾಯಕ ಶುಭಮನ್ ಗಿಲ್ ಅವರೊಂದಿಗೆ ಸೇರಿಕೊಂಡ ವಾಷಿಂಗ್ಟನ್ ಸುಂದರ್ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಮಿಡ್ಲ್ ಓವರ್‌ಗಳಲ್ಲಿ ವಿಕೆಟ್ ಬೀಳದಂತೆ ನೋಡಿಕೊಂಡು ಬ್ಯಾಟ್ ಮಾಡಿತು. ಈ ಜೋಡಿ ತಂಡದ ಮೊತ್ತವನ್ನು ಹಿಗ್ಗಿಸುತ್ತಾ ಸಾಗಿತು. ಈ ಜೋಡಿ 61 ಎಸೆತಗಳಲ್ಲಿ 104 ರನ್ ಸೇರಿಸಿತು. ಇವರಿಬ್ಬರ ಭರ್ಜರಿ ಆಟದ ನೆರವಿನಿಂದ ಟೈಟಾನ್ಸ್ 200 ರನ್‌ಗಳ ಗಡಿ ದಾಟಲು ನೆರವಾಯಿತು.
ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ 45 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ 70 ರನ್ ಬಾರಿಸಿ ತಂಡಕ್ಕೆ ನೆರವಾದರು. ಈ ಮೂಲಕ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಅರ್ಧಶತಕ ಬಾರಿಸಿದ ಸಾಧನೆ ಮಾಡಿತು.
ವಾಷಿಂಗ್ಟನ್ ಸುಂದರ್ 55
ವಾಷಿಂಗ್ಟನ್ ಸುಂದರ್ ತಮ್ಮ ಜವಾಬ್ದಾರಿಯನ್ನು ಅರಿತು ಆಡಿದರು. ಇವರು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ 32 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ ಸಹಾಯದಿಂದ 55 ರನ್ ಬಾರಿಸಿದರು. ಅಂತಿಮವಾಗಿ ಗುಜರಾತ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 210 ರನ್ ಸೇರಿಸಿತು. ಡೆಲ್ಲಿ ತಂಡದ ಪರ ಮುಕೇಶ್ ಕುಮಾರ್ 2, ಲುಂಗಿ ಎನ್‌ಗಿಡಿ, ಕುಲ್‌ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications