ಫೈನಲ್ ಪ್ರವೇಶಿಸಲು ಗುಜರಾತ್ 215 ರನ್ ಗುರಿ ನೀಡಿದ ರಾಯಲ್ಸ್
ನ್ಯೂ ಚಂಡೀಗಢ: ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಕೆಚ್ಚೆದೆಯ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 204 ರನ್‌ಗಳ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡಕ್ಕೆ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕರು ದೊಡ್ಡ ಜೊತೆಯಾಟದ ಕಾಣಿಕೆ ನೀಡುವಲ್ಲಿ ವಿಫಲರಾದರು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (1), ಧ್ರುವ್ ಜುರೇಲ್ (7) ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ರಾಯಲ್ಸ್ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಮಹತ್ವದ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಬದಲಾವಣೆ ಮಾಡಿದ ರಾಜಸ್ಥಾನ್ ರಾಯಲ್ಸ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದ ರವೀಂದ್ರ ಜಡೇಜಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಯುವ ಆಟಗಾರನಿಗೆ ಉತ್ತಮ ಸಾಥ್ ನೀಡಿದರು. ತಾಳ್ಮೆಯಿಂದ ಇನಿಂಗ್ಸ್ ಕಟ್ಟಿದರು. ಈ ಜೋಡಿ ಪವರ್ ಪ್ಲೇನಲ್ಲಿ ಮತ್ತೆ ವಿಕೆಟ್ ಬೀಳದಂತೆ ನೋಡಿಕೊಂಡು ಬ್ಯಾಟ್ ಮಾಡಿ 2 ವಿಕೆಟ್‌ಗೆ 70 ರನ್ ಸೇರಿಸಿತು.
ಮೂರನೇ ವಿಕೆಟ್‌ಗೆ ಅಜೇಯ 73 ರನ್ ಸೇರಿಸಿದ್ದಾಗ ರವೀಂದ್ರ ಜಡೇಜಾ 34 ರನ್ ಸಿಡಿಸಿದ್ದಾಗ ಗಾಯಕ್ಕೆ ತುತ್ತಾಗಿ ಮೈದಾನದಿಂದ ಹೊರ ನಡೆದರು. ನಾಯಕ ರಿಯಾನ್ ಪರಾಗ್ (11), ದಸುನ್ ಶನಕ (3), ಜೋಫ್ರಾ ಆರ್ಚರ್ (7), ರನ್ ಕಲೆ ಹಾಕುವಲ್ಲಿ ವಿಫಲರಾದರು.
ವೈಭವ್ ಜವಾಬ್ದಾರಿಯುತ ಆಟ
15 ವರ್ಷದ ವೈಭವ್ ಸೂರ್ಯವಂಶಿ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 47 ಇನಿಂಗ್ಸ್‌ಗಳಲ್ಲಿ 8 ಬೌಂಡರಿ, 7 ಸಿಕ್ಸರ್ ಸಹಾಯದಿಂದ 96 ರನ್ ಸಿಡಿಸಿದರು. ಈ ಮೂಲಕ ವೈಭವ್ ಈ ಆವೃತ್ತಿಯ ಐಪಿಎಲ್‌ನಲ್ಲಿ 776 ರನ್ ಸಿಡಿಸಿದರು.
ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ 35 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 36 ರನ್ ಸಿಡಿಸಿದರು. ಡೊನೊವನ್ ಫೆರೀರಾ 11 ಎಸೆತಗಳಲ್ಲಿ 2 ಬೌಂಡರಿ, 4 ಸಿಕ್ಸರ್ ನೆರವಿನಿಂದ ಅಜೇಯ 38 ರನ್ ಸಿಡಿಸಿದರು.
ಇನಿಂಗ್ಸ್‌ನ 20ನೇ ಓವರ್ ಬೌಲ್ ಮಾಡಿದ ರಶೀದ್ ಖಾನ್ 27 ರನ್ ನೀಡಿ ಕೈ ಸುಟ್ಟುಕೊಂಡರು. ಅಂತಿಮವಾಗಿ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 214 ರನ್ ಸೇರಿಸಿತು. ಟೈಟಾನ್ಸ್ ಪರ ಕಗಿಸೋ ರಬಾಡ, ಜೇಸನ್ ಹೋಲ್ಡರ್ ತಲಾ 2 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications