IPL 2026: ಮುಂಬೈ ತಂಡಕ್ಕೆ ಎಂಟ್ರಿ ನೀಡಿದ ಸ್ಟಾರ್ ಆಲ್‌ರೌಂಡರ್
ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ಗೆಲುವಿನ ಟ್ರ್ಯಾಕ್‌ಗೆ ಮರಳಿದೆ. ಈ ನಡುವೆ ಮುಂಬೈ ಇಂಡಿಯನ್ಸ್ ಕ್ಯಾಂಪ್‌ನಿಂದ ಖುಷಿಯ ವಿಚಾರ ಬಂದಿದೆ. ಈ ಸುದ್ದಿ ನಿಜಕ್ಕೂ ಅಭಿಮಾನಿಗಳಿಗೆ ಬಹಳ ಖುಷಿ ನೀಡಲಿದೆ. ಮುಂಬೈ ತಂಡ ಸೋಮವಾರ ಗುಜರಾತ್ ಟೈಟಾನ್ಸ್ ವಿರುದ್ಧ 99 ರನ್‌ಗಳಿಂದ ಜಯಗಳಿಸಿದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಆಲ್‌ರೌಂಡರ್ ವಿಲ್ ಜಾಕ್ಸ್ ಎಂಟ್ರಿ ನೀಡಿದ್ದಾರೆ.
ವಿಲ್ ಜ್ಯಾಕ್ಸ್ ಮುಂಬೈ ಇಂಡಿಯನ್ಸ್‌ನ ಉಳಿದ ಆಟಗಾರರೊಂದಿಗೆ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವುದು ಕಂಡುಬಂದಿದೆ. ಇವರು ಟಿ20 ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಇವರು ಭಾರತ ಹಾಗೂ ಶ್ರೀಲಂಕಾ ತಂಡದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ವಿಲ್ ಜಾಕ್ಸ್ 4 ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಅಲ್ಲದೆ ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶಿಸುವಲ್ಲಿ ಇವರು ಮಹತ್ವದ ಪಾತ್ರವಹಿಸಿದರು. 2026 ರ ಟಿ 20 ವಿಶ್ವಕಪ್‌ನಲ್ಲಿ ಜ್ಯಾಕ್ಸ್ 226 ರನ್ ಗಳಿಸಿದ್ದು, 176 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಏಪ್ರಿಲ್ 23 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕಾಗಿ ಜಾಕ್ಸ್ ಮುಂಬೈ ತಂಡದ ಭಾಗವಾಗುವ ಸಾಧ್ಯತೆ ಇದೆ. ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಆಡಿದ 6 ಪಂದ್ಯಗಳಲ್ಲಿ, 2 ಗೆದ್ದು, 4 ಸೋಲು ಕಂಡಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಆರನೇ ಪ್ರಶಸ್ತಿ ಉಳಿಸಿಕೊಳ್ಳುವ ವಿಶ್ವಾಸ ಹೊಂದಿದೆ.
ವಿಲ್ ಜಾಕ್ಸ್ ಸಾಧನೆ
27 ವರ್ಷದ ವಿಲ್ ಜಾಕ್ಸ್ ಇಂಗ್ಲೆಂಡ್ ಪರ ಭರ್ಜರಿ ಪ್ರದರ್ಶನ ನೀಡಿದ ಆಟಗಾರ. ಇವರು ಇಂಗ್ಲೆಂಡ್ ಪರ 6 ಟೆಸ್ಟ್, 23 ಏಕದಿನ, 40 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇವರು ಇಂಗ್ಲೆಂಡ್ ಪರ ಆಡಿದ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 22.50ರ ಸರಾಸರಿಯಲ್ಲಿ 630 ರನ್ ಕಲೆ ಹಾಕಿದ್ದಾರೆ. ಈ ವೇಳೆ ಒಂದು ಅರ್ಧಶತಕ ಸೇರಿದೆ. ಅಲ್ಲದೆ ಇದೇ ಫಾರ್ಮೆಟ್‌ನಲ್ಲಿ 16 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇನ್ನು ಇವರು ಐಪಿಎಲ್‌ನಲ್ಲಿ ಆಡಿದ 21 ಪಂದ್ಯಗಳಲ್ಲಿ 463 ರನ್ ಸಿಡಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 2 ಅರ್ಧಶತಕ ಬಾರಿಸಿದ್ದಾರೆ. ಈ ವೇಳೆ 8 ವಿಕೆಟ್ ಪಡೆದಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಐದು ಪಂದ್ಯಗಳು
ಏಪ್ರಿಲ್ 20, ಚೆನ್ನೈ ಸೂಪರ್ ಕಿಂಗ್ಸ್, ಸಂಜೆ 7.30ಕ್ಕೆ
ಏಪ್ರಿಲ್ 23, ಸನ್‌ರೈಸರ್ಸ್ ಹೈದರಾಬಾದ್, ಸಂಜೆ 7.30ಕ್ಕೆ
ಮೇ 2, ಚೆನ್ನೈ ಸೂಪರ್ ಕಿಂಗ್ಸ್, ಸಂಜೆ 7.30ಕ್ಕೆ
ಮೇ 4, ಲಕ್ನೋ ಸೂಪರ್ ಜೈಂಟ್ಸ್, ಸಂಜೆ 7.30ಕ್ಕೆ
ಮೇ 10, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸಂಜೆ 7.30ಕ್ಕೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications