Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs RR: ಧ್ರುವ್ ಜುರೇಲ್‌, ಯಶಸ್ವಿ ಅರ್ಧಶತಕ

ಅಹಮದಾಬಾದ್: ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಹಾಗೂ ಧ್ರುವ್ ಜುರೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 19ನೇ ಆವೃತ್ತಿಯ ಐಪಿಎಲ್‌ನ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ 211 ರನ್‌ಗಳ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡಕ್ಕೆ ನೀಡಿದೆ.

ಟಾಸ್‌ ಗೆದ್ದ ಆರ್‌ಆರ್‌ ತಂಡ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಮಾಡಿತು. ನಾಯಕ ರಿಯಾನ್ ಪರಾಗ್ ಅವರ ನಿರ್ಧಾರವನ್ನು ಆರಂಭಿಕ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಜೋಡಿ ಪವರ್ ಫುಲ್ ಬ್ಯಾಟಿಂಗ್ ನಡೆಸಿತು. ಈ ಜೋಡಿ ಬಿರುಸಿನ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು ಹಿಗ್ಗಿಸುತ್ತಾ ಸಾಗಿತು. ತಂಡದ ಮೊತ್ತ 70 ರನ್‌ ಆಗಿದ್ದಾಗ ಯುವ ಆಟಗಾರ ವೈಭವ್ ಸೂರ್ಯವಂಶಿ 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 31 ರನ್‌ ಸಿಡಿಸಿ ಔಟ್ ಆದರು.

IPL 2026

ವೈಭವ್ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಧ್ರುವ್ ಜುರೇಲ್ ಸಮಯೋಚಿತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರು. ಈ ಜೋಡಿ 37 ಎಸೆತಗಳಲ್ಲಿ 56 ರನ್‌ ಸಿಡಿಸಿತು. ಈ ಹಂತದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದ ಯಶಸ್ವಿ ಜೈಸ್ವಾಲ್‌ ಕಗಿಸೋ ರಬಾಡ ಎಸೆತದಲ್ಲಿ ಬೋಲ್ಡ್ ಆದರು. ಇವರು ಪೆವಿಲಿಯನ್ ಸೇರುವ ಮುನ್ನ 36 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ಸಹಾಯದಿಂದ 55 ರನ್‌ ಸಿಡಿಸಿದರು.

ನಾಯಕ ರಿಯಾನ್‌ ಪರಾಗ್ 8 ರನ್‌ ಬಾರಿಸಿ ಔಟ್ ಆದರು. ಸ್ಫೋಟಕ ಬ್ಯಾಟರ್‌ ಶಿಮ್ರೋನೆ ಹೆಟ್ಮೆಯರ್ ಅವರನ್ನು ಅಶೋಕ್ ಶರ್ಮಾ ಪೆವಿಲಿಯನ್‌ಗೆ ಅಟ್ಟುವಲ್ಲಿ ಸಫಲರಾದರು. ಶಿಮ್ರೋನ್‌ 1 ಬೌಂಡರಿ, 2 ಸಿಕ್ಸರ್‌ ಸಹಾಯದಿಂದ 18 ರನ್‌ ಸಿಡಿಸಿದರು.

ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಧ್ರುವ್ ಜುರೇಲ್‌ ಅಬ್ಬರಿಸಿದರು. ಇವರು 42 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಾಯದಿಂದ 75 ರನ್‌ ಬಾರಿಸಿ ಔಟ್ ಆದರು. ಅಂತಿಮವಾಗಿ ರಾಜಸ್ಥಾನ್‌ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 210 ರನ್‌ ಸೇರಿಸಿತು. ಗುಜರಾತ್‌ ಪರ ಕಗಿಸೋ ರಬಾಡ 2 ವಿಕೆಟ್‌ ಪಡೆದರು.

ಗಿಲ್‌ಗೆ ಗಾಯ

ರಾಜಸ್ಥಾನ್ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್ ಸ್ನಾಯು ಸೆಳೆತದ ಸಮಸ್ಯೆಯಿಂದಾಗಿ ಹೊರಗುಳಿದಿದ್ದಾರೆ. ವರದಿಗಳ ಪ್ರಕಾರ, ಕಳೆದ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ವೇಳೆ ಅವರಿಗೆ ಕುತ್ತಿಗೆಯ ಸ್ನಾಯು ಸೆಳೆತ ಕಾಣಿಸಿಕೊಂಡಿತ್ತು, ಈಗ ಅದೇ ಸಮಸ್ಯೆ ಮತ್ತೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಹೀಗಾಗಿ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್‌ ತಂಡವನ್ನು ಮುನ್ನಡೆಸಿದ್ದಾರೆ.

Story first published: Saturday, April 4, 2026, 21:22 [IST]
Other articles published on Apr 4, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+