ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ಹರಾಜು 2021: ಅರ್ಜುನ್ ತೆಂಡೂಲ್ಕರ್ ಕೊನೆಗೂ ಸೇಲ್!

IPL Auction 2021: Arjun Tendulkar sold to Mumbai Indians

ಚೆನ್ನೈ: 2021ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ಗೆ ಸಿದ್ಧತೆಗಳು ನಡೆಯುತ್ತಿದೆ. ಫೆಬ್ರವರಿ 18ರಂದು ಚೆನ್ನೈಯ ಖಾಸಗಿ ಹೋಟೆಲ್‌ನಲ್ಲಿ 14ನೇ ಆವೃತ್ತಿಯ ಐಪಿಎಲ್‌ಗಾಗಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ. ಒಟ್ಟು 292 ಮಂದಿ ಆಟಗಾರರು ಹರಾಜು ಕಣದಲ್ಲಿದ್ದರು.

ಐಪಿಎಲ್ 2021 ಹರಾಜಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆಐಪಿಎಲ್ 2021 ಹರಾಜಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ

ಟೀಮ್ ಇಂಡಿಯಾದ ಮಾಜಿ ನಾಯಕ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಕೂಡ ಈ ಬಾರಿ ಹರಾಜು ಕಣದಲ್ಲಿದ್ದರು. ಅವರ ಮೂಲ ಬೆಲೆ 20 ಲಕ್ಷ ರೂ. ಆಗಿತ್ತು. ಅರ್ಜುನ್ ಯಾವ ಫ್ರಾಂಚೈಸಿ ಪಾಲಾಗಲಿದ್ದಾರೆ ಅನ್ನೋದು ಕುತೂಹಲ ಮೂಡಿಸಿತ್ತು. ಹರಾಜು ಮುಕ್ತಾಯ ಹಂತದಲ್ಲಿ ಅರ್ಜುನ್ ಸೇಲಾಗಿ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಐಪಿಎಲ್‌ನಲ್ಲಿ ಸಚಿನ್ ತೆಂಡೂಲ್ಕರ್ ನಾಯಕರಾಗಿದ್ದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ, ಅರ್ಜುನ್ ಅವರನ್ನು ಮೂಲಬೆಲೆಯಾದ 20 ಲಕ್ಷ ರೂ.ಗೆ ಖರೀದಿಸಿದೆ. ಅಪ್ಪನಿದ್ದ ಐಪಿಎಲ್ ತಂಡಕ್ಕೆ ಅರ್ಜುನ್ ಕೂಡ ಸೇರಿಕೊಂಡಿದ್ದಾರೆ. ಈ ಮೊದಲು ಕೂಡ ಅರ್ಜುನ್ ಮುಂಬೈ ಜೆರ್ಸಿಯೊಂದಿಗೆ ಮೈದಾನದಲ್ಲಿ, ವೀಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದರು.

ಐಪಿಎಲ್ ಹರಾಜಿನಲ್ಲಿ ದಾಖಲೆ ಬರೆದ ಕನ್ನಡಿಗ ಕೃಷ್ಣಪ್ಪ ಗೌತಮ್ಐಪಿಎಲ್ ಹರಾಜಿನಲ್ಲಿ ದಾಖಲೆ ಬರೆದ ಕನ್ನಡಿಗ ಕೃಷ್ಣಪ್ಪ ಗೌತಮ್

ಮುಕ್ತಾಯಗೊಂಡ ಹರಾಜಿನಲ್ಲಿ ಅತೀ ಹೆಚ್ಚಿನ ಬೆಲೆಗೆ ಖರೀದಿಸಲ್ಪಟ್ಟ ಆಟಗಾರರೆಂದರೆ ಕ್ರಿಸ್ ಮೋರಿಸ್. 16.25 ಕೋಟಿ ರೂ.ಗೆ ಮೋರಿಸ್ ಅವರನ್ನು ರಾಜಸ್ಥಾನ್ ರಾಯಲ್ಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು ಕೈಲ್ ಜೇಮಿಸನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 15 ಕೋ.ರೂ.ಗೆ ಖರೀದಿಸಿದ್ದರೆ, ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ 14.25 ಕೋ.ರೂ.ಗೆ ಆರ್‌ಸಿಬಿ ಸೇರಿಕೊಂಡಿದ್ದಾರೆ.

Story first published: Friday, February 19, 2021, 9:50 [IST]
Other articles published on Feb 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X