ಐಪಿಎಲ್ ಮೆಗಾ ಹರಾಜು: ಉತ್ತಮ ಆಟಗಾರನನ್ನು ಕಡಿಮೆ ಮೊತ್ತಕ್ಕೆ ತೆಕ್ಕೆಗೆ ಹಾಕಿಕೊಂಡ ಸನ್ ರೈಸರ್ಸ್ ಹೈದರಾಬಾದ್

ಬೆಂಗಳೂರಿನಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜಿನ ಎರಡನೇ ದಿನ ಆರಂಭವಾಗಿದ್ದು, ದಕ್ಷಿಣ ಆಫ್ರಿಕಾದ ಏಡನ್ ಮಾರ್ಕ್ರಮ್ ಈ ದಿನ ಹರಾಜಾದ ಮೊದಲನೇ ಆಟಗಾರ ಎನಿಸಿಕೊಂಡಿದ್ದಾರೆ. ಏಡನ್ ಮಾರ್ಕ್ರಮ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದೆ.
ಆಲ್ ರೌಂಡರ್ ಆಟಗಾರನಾಗಿರುವ ಏಡನ್ ಮರ್ಕ್ರಮ್ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಕಣಕ್ಕಿಳಿದಿದ್ದರು. ಕಳೆದ ವರ್ಷ ನಡೆದ ಐಪಿಎಲ್ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಿದ್ದ ಏಡನ್ ಮಾರ್ಕ್ರಮ್ 146 ರನ್ ಗಳಿಸಿದ್ದಾರೆ ಹಾಗೂ ಒಟ್ಟು 4 ಓವರ್ ಬೌಲಿಂಗ್ ಮಾಡಿ ಯಾವುದೇ ವಿಕೆಟ್ ಪಡೆಯದೇ 23 ರನ್ ನೀಡಿದ್ದಾರೆ. 1 ಕೋಟಿ ಮೂಲಬೆಲೆಯೊಂದಿಗೆ ಹರಾಜಿನಲ್ಲಿ ಭಾಗವಹಿಸಿದ್ದ ಏಡನ್ ಮರ್ಕ್ರಮ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ 2.6 ಕೋಟಿಗೆ ಖರೀದಿಸಿದ್ದು, ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಡಿಮೆ ಮೊತ್ತಕ್ಕೆ ಒಳ್ಳೆಯ ಆಟಗಾರನನ್ನು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ತೆಕ್ಕೆಗೆ ಹಾಕಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications