Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭರ್ಜರಿ ಮೊತ್ತಕ್ಕೆ ಹರಾಜಾಗಿ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಆವೇಶ್ ಖಾನ್

IPL Auction 2022: Avesh Khan Sold To Lucknow Super Giants for 10 cr

ಇಂಡಿಯನ್ ಪ್ರೀಮಿಯರ್ ಲೀಗ್‌ನ ಹರಾಜು ಪ್ರಕ್ರಿಯೆ ಸಾಕಷ್ಟು ಕುತೂಹಲಘಟ್ಟಕ್ಕೆ ತಲುಪಿದೆ. ಆಟಗಾರರನ್ನು ಕೊಳ್ಳಲು ಫ್ರಾಂಚೈಸಿಗಳು ಭಾರೀ ಪೈಪೋಟಿಯನ್ನು ನಡೆಸುತ್ತಿದೆ. ಇದರ ಪರಿಣಾಮವಾಗಿ ಪ್ರತಿಭಾವಂತ ಆಟಗಾರರು ಭಾರೀ ಮೊತ್ತವನ್ನು ಜೇಬಿಗಿಳಿಸುತ್ತಿದ್ದಾರೆ. ಇನ್ನು ಕಳೆದ ಎರಡು ಐಪಿಎಲ್ ಆವೃತ್ತಿಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಆವೇಶ್ ಖಾನ್ ಈ ಬಾರಿಯ ಹರಾಜಿನಲ್ಲಿ ಭಾರೀ ಮೊತ್ತವನ್ನು ದೋಚಿಕೊಂಡಿದ್ದಾರೆ.

ಕಳೆದ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಆಡಿ ಮಿಂಚು ಹರಿಸಿದ್ದ ಆವೇಶ್ ಖಾನ್ ಈ ಬಾರಿಯ ಹರಾಜಿನಲ್ಲಿ ಪಡೆದುಕೊಂಡ ಮೊತ್ತ ಬರೊಬ್ಬರಿ 10 ಕೋಟಿ ರೂಪಾಯಿ. ಈ ಮೂಲಕ ಆವೇಶ್ ಖಾನ್ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅನ್‌ಕ್ಯಾಪ್‌ಡ್ ಆಟಗಾರನೋರ್ವ ಗಳಿಸಿದ ಅತಿ ದೊಡ್ಡ ಮೊತ್ತ ಎನಿಸಿದೆ.

ಕಳೆದ ಎರಡು ಆವೃತ್ತಿಗಳಲ್ಲಿ ಆವೇಶ್ ಖಾನ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಆಡಿದ್ದರು. ಅಂತಾರಾಷ್ಟ್ರೀಯ ಮಟ್ಟದ ಆಟಗಾರರಾದ ಕಗಿಸೋ ರಬಾಡ ಹಾಗೂ ಅನ್ರಿಕ್ ನಾರ್ಕಿಯಾ ಅವರಂತಾ ಪ್ರಮುಖ ಆಟಗಾರರ ಮಧ್ಯೆಯೂ ಅಮೋಘ ಪ್ರದರ್ಶನ ನೀಡಿ ಮಿಂಚಿಹರಿಸಿದ್ದರು ಆವೇಶ್ ಖಾನ್. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ಭಾರೀ ಮೊತ್ತವನ್ನು ಪಡೆದುಕೊಂಡಿದ್ದಾರೆ.

ಅಂದಹಾಗೆ ಆವೇಶ್ ಖಾನ್ ಅವರನ್ನು ಇಷ್ಟು ಬೃಹತ್ ಮೊತ್ತಕ್ಕೆ ಪಡೆದುಕೊಂಡಿದ್ದು ನೂತನ ಫ್ರಾಂಚೈಸಿಯಾಗಿರುವ ಲಕ್ನೋ ಸೂಪರ್ ಜೈಂಟ್ಸ್. ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಂದ ಸಾಕಷ್ಟು ಪೈಪೋಟಿ ಎದುರಿಸಿತ್ತು. ಹೀಗಾಗಿ 10 ಕೋಟಿ ಗಡಿಯನ್ನು ತಲುಪಿದ್ದರು.

Story first published: Sunday, February 13, 2022, 15:55 [IST]
Other articles published on Feb 13, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+