
ಬೆಂಗಳೂರಿನಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಸ್ಪೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತೆಕ್ಕೆಗೆ ಬಿದ್ದಿದ್ದಾರೆ.
6.25 ಕೋಟಿಗೆ ಡೇವಿಡ್ ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಈಗಾಗಲೇ ರಿಟೈನ್ ಆಗಿ ಉಳಿದುಕೊಂಡಿರುವ ಪೃಥ್ವಿ ಶಾ ಜತೆಗೆ ಡೇವಿಡ್ ವಾರ್ನರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಸಲಿದೆ. ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿದ್ದ ಡೇವಿಡ್ ವಾರ್ನರ್ ಆರಂಭದಲ್ಲಿ ನಾಯಕನಾಗಿ ಕಾರ್ಯನಿರ್ವಹಿಸಿ ಟೂರ್ನಿ ಮಧ್ಯದಲ್ಲಿ ಫ್ರಾಂಚೈಸಿ ಜತೆ ಉಂಟಾದ ಮನಸ್ತಾಪದಿಂದ ನಾಯಕತ್ವವನ್ನು ಕಳೆದುಕೊಂಡಿದ್ದರು ಹಾಗೂ ತಂಡದಿಂದಲೂ ಸಹ ಟೂರ್ನಿ ಮಧ್ಯದಲ್ಲಿಯೇ ಹೊರಬಿದ್ದಿದ್ದರು.