For Quick Alerts
ALLOW NOTIFICATIONS  
For Daily Alerts
 

ಐಪಿಎಲ್ ಮೆಗಾ ಹರಾಜು: 5.50 ಕೋಟಿಗೆ ವಿಕೆಟ್ ಕೀಪರ್ ಖರೀದಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

IPL Auction 2022: Dinesh Karthik is sold to Royal Challengers Bangalore for 5.50 crores

ಬೆಂಗಳೂರಿನಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ತಮಿಳುನಾಡು ಮೂಲದ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಉದ್ಘಾಟನಾ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಆಯ್ಕೆಯಾಗುವುದರ ಮೂಲಕ ತನ್ನ ಐಪಿಎಲ್ ಪಯಣವನ್ನು ಆರಂಭಿಸಿದ ದಿನೇಶ್ ಕಾರ್ತಿಕ್ ಇಲ್ಲಿಯವರೆಗೂ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕಿಂಗ್ಸ್ ಇಲೆವೆನ್ ಪಂಜಾಬ್, ಗುಜರಾತ್ ಲಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. 2015ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಟವನ್ನಾಡಿದ ದಿನೇಶ್ ಕಾರ್ತಿಕ್ ಆ ಆವೃತ್ತಿಯಲ್ಲಿ ತಂಡದ ವಿಕೆಟ್ ಕೀಪರ್ ಆಗಿದ್ದರು. ಅಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಆಗಿದ್ದ ದಿನೇಶ್ ಕಾರ್ತಿಕ್ ಸುಮಾರು 7 ವರ್ಷಗಳ ಬಳಿಕ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದು ಈ ಬಾರಿಯ ಮೆಗಾ ಹರಾಜಿನಲ್ಲಿ 5.50 ಕೋಟಿ ಪಡೆದುಕೊಂಡಿದ್ದಾರೆ. ಭಾರತ ಅಂತರರಾಷ್ಟ್ರೀಯ ತಂಡದಲ್ಲಿ ಮತ್ತೆ ಸ್ಥಾನ ಪಡೆದುಕೊಳ್ಳಬೇಕು ಎಂಬ ಮಹದಾಸೆಯನ್ನು ಹೊಂದಿರುವ ದಿನೇಶ್ ಕಾರ್ತಿಕ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿನಲ್ಲಿ 2 ಕೋಟಿ ಮೂಲಬೆಲೆಯೊಂದಿಗೆ ನೋಂದಾಯಿಸಿಕೊಂಡಿದ್ದರು.

Story first published: Saturday, February 12, 2022, 17:55 [IST]
Other articles published on Feb 12, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+