ಐಪಿಎಲ್ ಹರಾಜು: ಹಳೇ ಆಟಗಾರನನ್ನು ಮತ್ತೆ ಖರೀದಿಸಿದ ಚೆನ್ನೈ; ಇಷ್ಟು ಹಣ ಯಾಕೆ ಎಂದ ಅಭಿಮಾನಿಗಳು!

ಬೆಂಗಳೂರಿನಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಸ್ಪೋಟಕ ಆಲ್ ರೌಂಡರ್ ಡ್ವೇನ್ ಬ್ರಾವೊ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಪಾಲಾಗಿದ್ದಾರೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತನ್ನ ತಂಡದ ಆಟಗಾರರಾದ ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ ಮತ್ತು ರುತುರಾಜ್ ಗಾಯಕ್ವಾಡ್ ಈ ನಾಲ್ವರು ಆಟಗಾರರನ್ನು ಮಾತ್ರ ರಿಟೈನ್ ಮಾಡಿಕೊಂಡಿತ್ತು. ಐಪಿಎಲ್ ಇತಿಹಾಸದಲ್ಲಿ ಹೆಚ್ಚಾಗಿ ಆಟಗಾರರನ್ನು ಬದಲಿಸದೇ ಕಣಕ್ಕಿಳಿಯುವ ತಂಡ ಎನಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಈ ಬಾರಿಯ ಮೆಗಾ ಹರಾಜಿನಲ್ಲಿ ಕೈಬಿಟ್ಟಿರುವ ತನ್ನ ಹಳೆಯ ಆಟಗಾರರನ್ನು ಮತ್ತೆ ಖರೀದಿಸಲಿದೆ ಎಂಬ ನಿರೀಕ್ಷೆಗಳಿದ್ದವು. ಆದರೆ ತನ್ನ ಹಳೆಯ ಪ್ರಮುಖ ಆಟಗಾರರಾದ ಸುರೇಶ್ ರೈನಾ ಮೇಲೆ ಯಾವುದೇ ಬಿಡ್ ಮಾಡದ ಚೆನ್ನೈ ಸೂಪರ್ ಕಿಂಗ್ಸ್ ಸ್ಫೋಟಕ ಆಟಗಾರ ಫಾಫ್ ಡು ಪ್ಲೆಸಿಸ್ ಅವರನ್ನು ಕೂಡ ಬಿಟ್ಟುಕೊಟ್ಟಿತ್ತು. ಹೀಗೆ ಇಬ್ಬರು ಪ್ರಮುಖ ಆಟಗಾರರನ್ನು ಖರೀದಿಸದೆ ಕೈಚೆಲ್ಲಿದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ತಂಡದ ಹಳೆಯ ಆಟಗಾರನಾದ ಡ್ವೇನ್ ಬ್ರಾವೊ ಮೇಲೆ 4.40 ಕೋಟಿ ಸುರಿದಿದೆ.
ಹೀಗೆ ತನ್ನ ಹಳೆಯ ಆಟಗಾರನಿಗೆ 4 ಕೋಟಿಗೂ ಹೆಚ್ಚು ಹಣವನ್ನು ಸುರಿದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ವಿರುದ್ಧ ತಂಡದ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವಯಸ್ಸಾಗಿರುವ ಈ ಆಟಗಾರನಿಗೆ ಇಷ್ಟು ಮೊತ್ತ ಹೂಡುವ ಅವಶ್ಯಕತೆಯಾದರೂ ಏನಿತ್ತು ಎಂದು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಫ್ರಾಂಚೈಸಿ ಆಯ್ಕೆಯ ವಿರುದ್ಧವಾಗಿ ಮಾತನಾಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications