ಐಪಿಎಲ್ ಹರಾಜು: ಎಬಿಡಿ ವಿಲಿಯರ್ಸ್ ಸ್ಥಾನವನ್ನು ಫಾಫ್ ಡು ಪ್ಲೆಸಿಸ್ ತುಂಬಲಿದ್ದಾರೆ: ಕ್ರಿಸ್ ಮೋರಿಸ್

ಆರ್‌ಸಿಬಿ ಈ ಬಾರಿಯ ಹರಾಜಿನಲ್ಲಿ ದಕ್ಷಿಣ ಆಫ್ರಿಕಾದ ಹಿರಿಯ ಆಟಗಾರ ಫಾಫ್ ಡು ಪ್ಲೆಸಿಸ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಆರಂಭಿಕ ಆಟಗಾರನ ಸ್ಥಾನವನ್ನು ತುಂಬುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ. ಆರ್‌ಸಿಬಿ ಅನುಭವಿ ಆಟಗಾರನನ್ನು ತಂಡಕ್ಕೆ ಸೇರ್ಪಡೆಗೊಳಿಸಿರುವುದು ಆರ್‌ಸಿಬಿ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಮಾಜಿ ಆಟಗಾರ ದಕ್ಷಿಣ ಆಫ್ರಿಕಾ ಮೂಲದ ಮತ್ತೋರ್ವ ಅನುಭವಿ ಕ್ರಿಕೆಟಿಗ ಕ್ರಿಕೆಟ್ ಮಾರಿಸ್ ಪ್ರತಿಕ್ರಿಯೆ ನೀಡಿದ್ದಾರೆ.
ಆರ್‌ಸಿಬಿ ತಂಡ ಫಾಫ್ ಡು ಪ್ಲೆಸಿಸ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿರುವುದಕ್ಕೆ ಕ್ರಿಸ್ ಮಾರಿಸ್ ಹರ್ಷ ವ್ಯಕ್ತಪಡಿಸಿದ್ದಾರೆ. ಫಾಫ್ ಡು ಪ್ಲೆಸಿಸ್ ಆರ್‌ಸಿಬಿ ತಂಡದಲ್ಲಿ ಈ ಹಿಂದೆ ಎಬಿ ಡಿವಿಲಿಯರ್ಸ್ ಯಾವ ಪ್ರದರ್ಶನ ನೀಡಿದ್ದರೋ ಅದೇ ರೀತಿಯ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ನೆರವಾಗಲಿದ್ದಾರೆ ಎಂದು ಕ್ರಿಸ್ ಮಾರಿಸ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಫಾಫ್ ಡು ಪ್ಲೆಸಿಸ್ ಅವರನ್ನು ಆರ್‌ಸಿಬಿ 7 ಕೋಟಿಗೆ ತಂಡಕ್ಕೆ ಸೇರ್ಪಡೆಗೊಳಿಸಿದೆ. ಇದಕ್ಕೂ ಹಿಂದಿನ ಆವೃತ್ತಿಯಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಆಡಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ಕಳೆದ ಆವೃತ್ತಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಲು ಆರಂಭಿಕನಾಗಿ ಫಾಫ್ ಡು ಪ್ಲೆಸಿಸ್ ನೀಡಿದ ಪ್ರದರ್ಶನ ಕೂಡ ಪ್ರಮುಖ ಕಾರಣವಾಗಿತ್ತು. ಈ ಬಾರಿ ಕೂಡ ಸಿಎಸ್‌ಕೆ ಫಾಫ್ ಡು ಪ್ಲೆಸಿಸ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸುವ ಪ್ರಯತ್ನ ನಡೆಸಿತ್ತು. ಆದರೆ ಆರ್‌ಸಿಬಿ ಇದರಲ್ಲಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ನಿವೃತ್ತಿ ಪಡೆದಿರುವ ಎಬಿ ಡಿವಲಿಯರ್ಸ್: ಈ ಹಿಂದಿನ ಆವೃತ್ತಿಯ ವರೆಗೂ ಆರ್‌ಸಿಬಿ ತಂಡದ ಪ್ರಮುಖ ಆಟಗಾರನಾಗಿದ್ದ ಎಬಿ ಡಿ ವಿಲಿಯರ್ಸ್ ಕಳೆದ ಐಪಿಎಲ್ ಆವೃತ್ತಿಯ ನಂತರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸುವುದಾಗಿ ತಿಳಿಸಿದ್ದರು. ಹೀಗಾಗಿ ಆರ್‌ಸಿಬಿ ಕೂಡ ಎಬಿ ಡಿವಲಿಯರ್ಸ್ ಸೇವೆಯನ್ನು ಕಳೆದುಕೊಳ್ಳಲಿದೆ. ಆದರೆ ಫಾಫ್ ಡು ಪ್ಲೆಸಿಸ್ ಆರ್‌ಸಿಬಿ ತಂಡಕ್ಕೆ ಡಿವಿಲಿಯರ್ಸ್ ರೀತಿಯಲ್ಲಿಯೇ ರನ್ ಮಳೆ ಸುರಿಸಲಿದ್ದಾರೆ ಎಂದಿದ್ದಾರೆ ಕ್ರಿಸ್ ಮೋರಿಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications