ಐಪಿಎಲ್ ಹರಾಜು: ಕಳೆದ ಬಾರಿ 9.25 ಕೋಟಿ ಬಾಚಿದ್ದವನಿಗೆ ಈ ಬಾರಿ ಸಿಕ್ಕಿದ್ದು ಕೇವಲ 90 ಲಕ್ಷ!

ಬೆಂಗಳೂರಿನಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜಿನ ಎರಡನೇ ದಿನವಾದ ಇಂದು ಕರ್ನಾಟಕ ಮೂಲದ ಆಟಗಾರ ಕೃಷ್ಣಪ್ಪ ಗೌತಮ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ.
33 ವರ್ಷ ವಯಸ್ಸಿನ ಬೌಲಿಂಗ್ ಆಲ್ ರೌಂಡರ್ ಆಗಿರುವ ಕೃಷ್ಣಪ್ಪ ಗೌತಮ್ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿನಲ್ಲಿ ಬರೋಬ್ಬರಿ 9.25 ಕೋಟಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತೆಕ್ಕೆಗೆ ಬೀಳುವುದರ ಮೂಲಕ ಭಾರೀ ಚರ್ಚೆಗೆ ಕಾರಣರಾಗಿದ್ದರು ಹಾಗೂ ಈ ಹರಾಜು ಆಶ್ಚರ್ಯವನ್ನು ಸಹ ಮೂಡಿಸಿತ್ತು. ಹೀಗೆ ಕಳೆದ ಬಾರಿ ಅತಿ ದೊಡ್ಡ ಮಟ್ಟದ ಯಶಸ್ಸನ್ನು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಗೆ ದೊಡ್ಡ ಮೊತ್ತಕ್ಕೆ ಬಿಕರಿಯಾಗಿದ್ದ ಕೃಷ್ಣಪ್ಪ ಗೌತಮ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಕೇವಲ 90 ಲಕ್ಷಕ್ಕೆ ಬಿಕರಿಯಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೇರಿದ್ದಾರೆ. ಹೀಗೆ ಕಳೆದ ಬಾರಿಯ ಹರಾಜಿಗೆ ಹೋಲಿಸಿದರೆ ಈ ಬಾರಿ ತೀರಾ ಕಡಿಮೆ ಮೊತ್ತಕ್ಕೆ ಬಿಕರಿಯಾಗಿರುವ ಕೃಷ್ಣಪ್ಪ ಗೌತಮ್ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯದಲ್ಲಿಯೂ ಕೂಡ ಕಣಕ್ಕಿಳಿದಿರಲಿಲ್ಲ. ಹೌದು, 9.25 ಕೋಟಿಗೆ ಕೃಷ್ಣಪ್ಪ ಗೌತಮ್ ಅವರನ್ನು ಖರೀದಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಇಡೀ ಟೂರ್ನಿಯಲ್ಲಿ ಯಾವುದೇ ಪಂದ್ಯದಲ್ಲಿಯೂ ಕೂಡ ಆತನಿಗೆ ಆಡುವ ಅವಕಾಶವನ್ನೇ ನೀಡಲಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications