
ಬೆಂಗಳೂರಿನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 15ನೇ ಸೀಸನ್‌ನ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಕನ್ನಡಿಗ ಮನೀಷ್ ಪಾಂಡೆ ಹೊಸ ಫ್ರಾಂಚೈಸಿ ಲಕ್ನೋ ತಂಡದ ಪಾಲಾಗಿದ್ದಾರೆ.
1 ಕೋಟಿ ರೂಪಾಯಿ ಮೂಲ ಬೆಲೆ ಹೊಂದಿದ್ದ ಮನೀಶ್ ಪಾಂಡೆ ಕಳೆದ ಸೀಸನ್‌ನಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ಪರ ಆಡಿದ್ರು. ಆರಂಭಿಕ ಬಿಡ್‌ನಲ್ಲಿ ಯಾವ ಫ್ರಾಂಚೈಸಿ ಕೂಡ ಕೊಂಡುಕೊಳ್ಳುವ ಮನಸ್ಸು ಮಾಡಲಿಲ್ಲ. ಆದ್ರೆ ಎಸ್‌ಆರ್‌ಎಚ್ ಬಿಡ್ಡಿಂಗ್ ಆರಂಭಿಸುತ್ತಿದ್ದಂತೆ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಸ್ಪರ್ಧೆಗಿಳಿಯಿತು.
ಆದ್ರೆ ಮನೀಷ್ ಪಾಂಡೆ ಬೆಲೆ ನಾಲ್ಕು ಕೋಟಿ ರೂಪಾಯಿ ದಾಟುತ್ತಿದ್ದಂತೆ ಡೆಲ್ಲಿ ಕ್ಯಾಪಿಟಲ್ಸ್ ಕೊಂಡುಕೊಳ್ಳುವ ಮನಸ್ಸು ಮಾಡಲಿಲ್ಲ. ಅಂತಿಮವಾಗಿ ಮನೀಷ್ ಪಾಂಡೆ 4.6 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜಾಯಿಂಟ್ಸ್ ಫ್ರಾಂಚೈಸಿ ಪಾಲಾಗಿದ್ದಾರೆ.
ಕಳೆದ ಹಲವು ಸೀಸನ್‌ಗಳಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ಪರ ಆಡಿದ್ದ ಪಾಂಡೆನನ್ನ ಕೊಂಡುಕೊಳ್ಳುವಲ್ಲಿ ಎಸ್‌ಆರ್‌ಎಚ್ ವಿಫಲಗೊಂಡಿದೆ.