ಐಪಿಎಲ್ ಮೆಗಾ ಹರಾಜು: 6.75 ಕೋಟಿಗೆ ನೂತನ ಫ್ರಾಂಚೈಸಿ ಪಾಲಾದ ಕ್ವಿಂಟನ್ ಡಿ ಕಾಕ್

ಬೆಂಗಳೂರಿನಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ನೂತನ ಫ್ರಾಂಚೈಸಿಯಾದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಕಣಕ್ಕಿಳಿದಿದ್ದ ಕ್ವಿಂಟನ್ ಡಿಕಾಕ್ ಈ ಬಾರಿಯ ರಿಟೆನ್ಷನ್ ಪ್ರಕ್ರಿಯೆಯಲ್ಲಿ ರಿಟೈನ್ ಆಗದೆ ಮೆಗಾ ಹರಾಜಿನಲ್ಲಿ ಪಾಲ್ಗೊಂಡಿದ್ದರು.
ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ಆಗಿರುವ ಕಾರಣ ಕ್ವಿಂಟನ್ ಡಿಕಾಕ್ ಮೇಲೆ ವಿವಿಧ ಫ್ರಾಂಚೈಸಿಗಳು ಕಣ್ಣಿಟ್ಟಿದ್ದವು. ಅಂತಿಮವಾಗಿ ಕೆಎಲ್ ರಾಹುಲ್ ನಾಯಕತ್ವವನ್ನು ನಿರ್ವಹಿಸಲಿರುವ ಲಕ್ನೋ ಸೂಪರ್ ಜೈಂಟ್ಸ್ ಕ್ವಿಂಟನ್ ಡಿ ಕಾಕ್ ಅವರನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದು, 6.75 ಕೋಟಿಗೆ ಖರೀದಿಸಿದೆ. ಕೆಎಲ್ ರಾಹುಲ್ ನಾಯಕತ್ವವನ್ನು ನಿರ್ವಹಿಸುವುದರಿಂದ ತಂಡಕ್ಕೆ ಮತ್ತೋರ್ವ ವಿಕೆಟ್ ಕೀಪರ್ ಅಗತ್ಯತೆ ಇತ್ತು. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸ್ಪೋಟಕ ಬ್ಯಾಟಿಂಗ್ ಹಾಗೂ ಜಾಣ್ಮೆಯ ವಿಕೆಟ್ ಕೀಪಿಂಗ್ ಮಾಡಬಲ್ಲ ಕ್ವಿಂಟನ್ ಡಿ ಕಾಕ್ ಅವರನ್ನು ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications