ಐಪಿಎಲ್ ಮೆಗಾ ಹರಾಜು: ಸನ್ ರೈಸರ್ಸ್ ಹೈದರಾಬಾದ್ ಪಾಲಾದ ವಾಷಿಂಗ್ಟನ್ ಸುಂದರ್

ಬೆಂಗಳೂರಿನಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ತಮಿಳುನಾಡು ಮೂಲದ ವಾಷಿಂಗ್ಟನ್ ಸುಂದರ್ 8.75 ಕೋಟಿಗೆ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪಾಲಾಗಿದ್ದಾರೆ.
2017ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವುದರ ಮೂಲಕ ಐಪಿಎಲ್ ಕ್ರಿಕೆಟ್ ಟೂರ್ನಿಗೆ ಪದಾರ್ಪಣೆ ಮಾಡಿದ ವಾಷಿಂಗ್ಟನ್ ಸುಂದರ್ 2018ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದರು. ಹೀಗೆ 2018ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ ವಾಷಿಂಗ್ಟನ್ ಸುಂದರ್ ಕಳೆದ ವರ್ಷ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಟವಾಡಿದ್ದಾರೆ. ಸದ್ಯ ಈ ವರ್ಷ ರಿಟೈನ್ ಆಗದೇ ಮೆಗಾ ಹರಾಜಿನಲ್ಲಿ ಪಾಲ್ಗೊಂಡ ವಾಷಿಂಗ್ಟನ್ ಸುಂದರ್ 1.5 ಕೋಟಿ ಮೂಲ ಬೆಲೆಯ ಜತೆಗೆ ನೋಂದಾಯಿಸಿಕೊಂಡಿದ್ದರು. ಅಂತಿಮವಾಗಿ ಹರಾಜಿನಲ್ಲಿ ಬರೋಬ್ಬರಿ 8.75 ಕೋಟಿ ಬಿಡ್ ಪಡೆದುಕೊಂಡ ವಾಷಿಂಗ್ಟನ್ ಸುಂದರ್ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪಾಲಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications