2023ರ ಇಂಡಿಯನ್ ಪ್ರೀಮಿಯರ್ ಲೀಗ್‌ಗಾಗಿ (ಐಪಿಎಲ್) ಮಿನಿ ಹರಾಜು ಶುಕ್ರವಾರ, ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ಅದ್ಧೂರಿಯಾಗಿ ಪ್ರಾರಂಭವಾಗಿದೆ.
ನ್ಯೂಜಿಲೆಂಡ್ ತಂಡದ ಆಟಗಾರ ಕೇನ್ ವಿಲಿಯಮ್ಸನ್ ಅವರನ್ನು ಗುಜರಾತ್ ಟೈಟನ್ಸ್ ತಂಡ 2 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಈ ಹಿಂದೆ 2022ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 16 ಕೋಟಿ ರೂ.ಗೆ ಮಾರಾಟವಾಗಿದ್ದ ಕೇನ್ ವಿಲಿಯಮ್ಸನ್, ಈ ಬಾರಿ ಮೂಲ ಬೆಲೆಗೆ ಸೋಲ್ಡ್ ಔಟ್ ಆಗಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್‌ಗೆ ತೆರಳಿದ್ದು, ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲಿದ್ದಾರೆ. ದೊಡ್ಡ ಮೊತ್ತ ನಿರೀಕ್ಷಿಸಿದ್ದ ನ್ಯೂಜಿಲೆಂಡ್ ತಂಡದ ವೈಟ್-ಬಾಲ್ ನಾಯಕನಿಗೆ ನಿರಾಸೆಯಾಗಿದೆ.