Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ ಹರಾಜು: ಈ ವಿದೇಶಿ ಆಟಗಾರರ ಮೇಲೆ ಹಣದ ಹೊಳೆ!

ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ದಿನಗಣನೆ ಆರಂಭವಾಗಿದೆ. ಇತ್ತ ಫ್ರಾಂಚೈಸಿಗಳು ತಮ್ಮ ತಂಡವನ್ನು ಬಲಾಢ್ಯ ಮಾಡಿಕೊಳ್ಳಲು ಎಲ್ಲಿಲ್ಲದ ಕಸರತ್ತು ನಡಸಿದ್ದಾರೆ. ತಮ್ಮ ತಂಡದಲ್ಲಿ ಈಗಿರುವ ಸ್ಟಾರ್ ಆಟಗಾರರನ್ನು ಉಳಿಸಿಕೊಂಡು, ಕಳಪೆ ಪ್ರದರ್ಶನ ನೀಡಿರುವ ಆಟಗಾರರಿಗೆ ಗೇಟ್ ಪಾಸ್ ನೀಡುವ ಯೋಜನೆಯನ್ನು ರೂಪಿಸಿಕೊಂಡಿದ್ದಾರೆ.

ಇನ್ನು ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಸ್ಟಾರ್ ಆಟಗಾರರಿಗೂ ಐಪಿಎಲ್ ಫ್ರಾಂಚೈಸಿ ಮಾಲೀಕರು ರೆಡ್ ಕಾರ್ಪೆಟ್ ಹಾಕುವ ಸಾಧ್ಯತೆ ಇದೆ.

ಈ ಬಾರಿಯ ಐಪಿಎಲ್ ಹರಾಜನ್ನು ಡಿಸೆಂಬರ್ 19ರಂದು ದುಬೈನಲ್ಲಿ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ಐಪಿಎಲ್ ಫ್ರಾಂಚೈಸಿಗಳು ತಮಗೆ ಇಷ್ಟದ ಆಟಗಾರರನ್ನು ಬೇರೆ ತಂಡಗಳ ಮಾಲೀಕರಿಂದ ಪರಸ್ಪರ ಒಪ್ಪಿಗೆಯೊಂದಿಗೆ ವ್ಯಾಪಾರ ಮಾಡಬಹುದು.

ipl-auction-2024

ಆದರೆ, ಈ ಬಾರಿ ಹರಾಜಿನಲ್ಲಿ ಹಲವು ದೊಡ್ಡ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಅವರ ಮೇಲೆ ಮಾಲೀಕರು ಹಣದ ಹೊಳೆ ಹರಿಸುವ ಸಾಧ್ಯತೆ ಇದೆ. ಈ ಹಿಂದೆ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಟಗಾರರಿಗೆ ತಂಡಗಳು ಕೋಟಿಗಟ್ಟಲೆ ಖರ್ಚು ಮಾಡಬಹುದು.

ಐಪಿಎಲ್ ಹರಾಜಿನಲ್ಲಿ ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಐಪಿಎಲ್ ತಂಡಗಳು ಮಿಚೆಲ್ ಸ್ಟಾರ್ಕ್‌ಗೆ ಕೋಟ್ಯಂತರ ರೂಪಾಯಿ ನೀಡಿ ತಮ್ಮ ತಂಡಕ್ಕೆ ಬರ ಮಾಡಿಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿವೆ.

ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಮಿಚೆಲ್ ಸ್ಟಾರ್ಕ್ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದರು. ಇದಲ್ಲದೇ ನ್ಯೂಜಿಲೆಂಡ್ ಆಲ್‌ರೌಂಡರ್ ರಚಿನ್ ರವೀಂದ್ರ ಐಪಿಎಲ್ ಹರಾಜಿನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಆಲ್‌ರೌಂಡರ್ ವಿಶ್ವಕಪ್‌ನಲ್ಲಿ ತಮ್ಮ ಸಾಮರ್ಥ್ಯದಿಂದ ಸಾಕಷ್ಟು ಸದ್ದು ಮಾಡಿದ್ದರು. ಟಾಪ್ ಆರ್ಡರ್‌ನಲ್ಲಿ ಬ್ಯಾಟಿಂಗ್ ಮಾಡಿ, ಸ್ಪಿನ್ ಬೌಲಿಂಗ್ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿರುವ ರಚಿನ್ ಮೇಲೆ ಎಲ್ಲ ಫ್ರಾಂಚೈಸಿ ಕಣ್ಣು ನೆಟ್ಟಿದೆ.

ipl-auction-2024

ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ ಹರಾಜಿನಲ್ಲಿ ಮಾಲೀಕರು ಹಣವನ್ನು ಸುರಿಯಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ವಿಶ್ವಕಪ್ ಗೆದ್ದಿದೆ.

ಅಲ್ಲದೆ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಸಾಕಷ್ಟು ಸುದ್ದಿ ಮಾಡಿದ್ದರು. ವಿಶ್ವಕಪ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಎರಡು ಬಾರಿ ಮುಖಾಮುಖಿಯಾಗಿದ್ದವು. ಡೆರಿಲ್ ಮಿಚೆಲ್ ಭಾರತದ ವಿರುದ್ಧ ಎರಡೂ ಬಾರಿ ಶತಕದ ಗಡಿ ದಾಟಿದರು. ಐಪಿಎಲ್ ಹರಾಜಿನಲ್ಲಿ ತಂಡಗಳು ಡೇರಿಲ್ ಮಿಚೆಲ್‌ಗೆ ಕೋಟಿಗಟ್ಟಲೆ ಹಣವನ್ನು ನೀಡಬಹುದು.

Story first published: Saturday, November 25, 2023, 17:41 [IST]
Other articles published on Nov 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+